ಮಹಿಳೆಯರು ರಾಜಕೀಯದಲ್ಲಿ ಸಕ್ರಿಯರಾಗಲಿ 


Team Udayavani, Feb 23, 2019, 7:29 AM IST

mahlr.jpg

ಶಿಡ್ಲಘಟ್ಟ: ಮಹಿಳೆಯರು ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ. ಮಹಿಳೆಯರು ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ವಿ.ಮುನಿಯಪ್ಪ ಸಲಹೆ ನೀಡಿದರು. 

ನಗರದಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ ಸಮಿತಿಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಯಾಸ್ಮಿàನ್‌ ತಾಜ್‌ ಅವರನ್ನು ಅಭಿನಂದಿಸಿ ರಾಜ್ಯಾಧ್ಯಕ್ಷರು ನೀಡಿರುವ ಆದೇಶ ಪತ್ರ ವಿತರಿಸಿ ಮಾತನಾಡಿದ ಅವರು, ಪಕ್ಷ ಮೊದಲಿಂದಲೂ ಮಹಿಳೆಯರಿಗೆ ಎಲ್ಲಾ ಕ್ಷೇತ್ರದಲ್ಲಿ ಸಮಾನ ಅವಕಾಶ ಕಲ್ಪಿಸುತ್ತಾ ಬಂದಿದೆ. ಸ್ಥಳೀಯ ಸಂಸ್ಥೆಗಳಾದ ಜಿಪಂ, ತಾಪಂ, ಗ್ರಾಪಂ, ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆಯಲ್ಲಿ ಅವಕಾಶ ಕಲ್ಪಿಸುವ ಜೊತೆಗೆ ಅಧಿಕಾರ ಸಹ ಒದಗಿಸಿದೆ ಎಂದರು.

ಬಡ್ಡಿರಹಿತ ಸಾಲ ಸೌಲಭ್ಯ: ಮಹಿಳೆಯರು ಮೊದಲು ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿ ಸಮಾಜ ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಲು ಸ್ತ್ರೀಶಕ್ತಿ ಸಂಘಗಳನ್ನು ರಚಿಸಲಾಯಿತು. ಸ್ವಸಹಾಯ ಸಂಘಗಳನ್ನು ಆರ್ಥಿಕವಾಗಿ ಸದೃಢಗೊಳಿಸಲು ಡಿಸಿಸಿ ಬ್ಯಾಂಕ್‌ ಮೂಲಕ ಬಡ್ಡಿರಹಿತ ಸಾಲ ಸೌಲಭ್ಯ ನೀಡಲಾಗುತ್ತಿದೆ ಎಂದರು.

ಕ್ಷೇತ್ರದಲ್ಲಿ ಮಹಿಳಾ ಕಾಂಗ್ರೇಸ್‌ ನಗರ ಘಟದ ಅಧ್ಯಕ್ಷೆಯಾಗಿ ಉತ್ತಮವಾಗಿ ಕೆಲಸ ನಿರ್ವಹಿಸಿದ ಯಾಸ್ಮಿàನ್‌ ತಾಜ್‌ ಅವರ ಸೇವೆಯನ್ನು ಪಕ್ಷ ಗುರುತಿಸಿ ರಾಜ್ಯಮಟ್ಟದಲ್ಲಿ ಕಾರ್ಯದರ್ಶಿ ಸ್ಥಾನ ನೀಡಿದೆ. ಮಹಿಳೆಯರು ರಾಜಕೀಯ ಕ್ಷೇತ್ರದಲ್ಲಿ ಸಹ ಭಾಗವಹಿಸಿ ನೊಂದವರಿಗೆ ನ್ಯಾಯ ಒದಗಿಸಬೇಕು. ಕ್ಷೇತ್ರದಲ್ಲಿ ಮಹಿಳಾ ಕಾಂಗ್ರೆಸ್‌ ಘಟಕವನ್ನು ಮತ್ತಷ್ಟು ಬಲಿಷ್ಠಗೊಳಿಸಲು ಎಲ್ಲಾ ರೀತಿಯ ಸಹಾಯ ಮತ್ತು ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಶಾಸಕರ ಸಹಕಾರ: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ ಕಾರ್ಯದರ್ಶಿ ಯಾಸ್ಮಿನ್‌ ತಾಜ್‌ ಮಾತನಾಡಿ,  ಶಾಸಕ ವಿ.ಮುನಿಯಪ್ಪ ಅವರ ಸಹಕಾರದಿಂದ ಜಿಲ್ಲೆಯಲ್ಲಿ ಶಕ್ತಿ ನೊಂದಣಿ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದೆ. ಸಮಾಜದಲ್ಲಿರುವ ಪ್ರತಿಯೊಬ್ಬ ಬಡವರಿಗೆ ಸಾಮಾಜಿಕ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ಶಾಸಕರು ಸಹಕಾರ ನೀಡುವ ಜೊತೆಗೆ ಮಾರ್ಗದರ್ಶನ ನೀಡಿದ್ದ ಫ‌ಲದಿಂದಾಗಿ ರಾಜ್ಯ ಮಟ್ಟದಲ್ಲಿ ಕಾರ್ಯದರ್ಶಿ ಸ್ಥಾನ ಲಭಿಸಿದೆ ಎಂದರು.

ಮುಖಂಡರಾದ ಮೊಹಮದ್‌ ಹಫೀಜ್‌, ಶಿಡ್ಲಘಟ್ಟ ಬ್ಲಾಕ್‌ ಕಾಂಗ್ರೆಸ್‌ ಮೈನಾರಿಟಿ ಘಟಕದ ಅಧ್ಯಕ್ಷ ಅಮ್ಜದ್‌ ನವಾಜ್‌, ನಗರಸಭಾ ನಾಮನಿರ್ದೇಶಿತ ಸದಸ್ಯ ಅಬ್ದುಲ್‌ ಗಫ‌ೂರ್‌, ಬ್ಲಾಕ್‌ ಕಾಂಗ್ರೆಸ್‌ ಕಾರ್ಮಿಕ ವಿಭಾಗದ ಅಧ್ಯಕ್ಷ ಇಮಿ¤ಯಾಜ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

ಸಂಸದ ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

MP ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ: ಒಬ್ಬ ಮೃತ

Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

Lokayukta

MUDA ಮಾಜಿ ಆಯುಕ್ತ ನಟೇಶ್‌ಗೆ ಲೋಕಾ ನೋಟಿಸ್‌

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.