ಇನ್ನೂ ಸಿಗದ 94ಸಿ ಹಕ್ಕುಪತ್ರ: ಗ್ರಾಮಸ್ಥರ ಆಕ್ರೋಶ
Team Udayavani, Feb 24, 2019, 1:00 AM IST
ಹೆಬ್ರಿ: 1975ರಿಂದ ಮನೆ ಕಟ್ಟಿ ಕುಳಿತವರಿಗೆ 94ಸಿ ಅಡಿಯಲ್ಲಿ ಇನ್ನೂ ಹಕ್ಕುಪತ್ರ ಸಿಗದಿರುವುದಕ್ಕೆ ಫೆ. 22ರಂದು ಗಾಂಧಿನಗರ ಸ.ಹಿ.ಪ್ರಾ. ಶಾಲೆಯಲ್ಲಿ ನಡೆದ ಚಾರಾ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಕೆಲವೆಡೆ ಡೀಮ್ಡ್ ಫಾರೆಸ್ಟ್ ಕಾರಣ ಇನ್ನೂ ಹಕ್ಕು ಪತ್ರ ಸಿಕ್ಕಿಲ್ಲ. ಈ ಬಗ್ಗೆ ಪಂಚಾಯತ್ ಕೂಡಲೇ ನಿರ್ಣಯ ಮಾಡಿ ಇಲಾಖೆಗೆ ಕಳುಹಿಸಬೇಕು. ಹಕ್ಕುಪತ್ರ ಸಿಗದೆ ಇರುವ ಕಾರಣ ಸರಕಾರದ ಯಾವುದೇ ಸೌಲಭ್ಯಗಳನ್ನು ಪಡೆಯಲಾಗುತ್ತಿಲ್ಲ ಎಂದು ಗ್ರಾಮಸ್ಥರಾದ ಶ್ರೀಧರ್ ಶೆಟ್ಟಿ ಗ್ರಾಮ ಸಭೆಯ ಗಮನಕ್ಕೆ ತಂದರು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಚಾರ ಗ್ರಾ.ಪಂ. ಅಧ್ಯಕ್ಷ ಸಂದೀಪ್ ಅವರು ಮಾತನಾಡಿ, ಸಮಸ್ಯೆಯನ್ನು ಸಂಬಂಧ ಪಟ್ಟವರ ಗಮನಕ್ಕೆ ತರಲಾಗುವುದು ಎಂದರು.
ನೋಡಲ್ ಅಧಿಕಾರಿ ಲಿಂಗಪ್ಪ ಕಿರಗೂರು, ಪಂಚಾಯತ್ ಉಪಾಧ್ಯಕ್ಷೆ ರೇಶ್ಮಾ, ವಾದಿರಾಜ್ ಶೆಟ್ಟಿ ಉಪಸ್ಥಿತರಿದ್ದರು. ಪಿಡಿಒ ರಾಜೇಂದ್ರ ಸ್ವಾಗತಿಸಿ, ರಾಘವೇಂದ್ರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.