ಬರಗಾಲ ಎದುರಿಸಲು ಸಿದ್ಧತೆ ನಡೆಸಿ


Team Udayavani, Feb 24, 2019, 10:16 AM IST

24-february-16.jpg

ಸವಣೂರು: ಕೆಲ ದಿನಗಳಲ್ಲಿ ಬೇಸಿಗೆ ಪ್ರಾರಂಭವಾಗಲಿದ್ದು ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ನೋಡಿಕೊಳ್ಳುವುದು ಅಧಿಕಾರಿಗಳ ಕರ್ತವ್ಯ. ಹೀಗಾಗಿ ತಾಲೂಕಿನ ಪ್ರತಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕೆಂದು ಜಿಪಂ ಅಧ್ಯಕ್ಷ ಎಸ್‌.ಕೆ. ಕರಿಯಣ್ಣನವರ ಖಡಕಕ್ಕಾಗಿ ಅಧಿಕಾರಿಗಳಿಗೆ ಸೂಚಿಸಿದರು. 

ಸವಣೂರು ತಾಲೂಕು ಪಂಚಾಯತ್‌ ಕಾರ್ಯಾಲಯದ ಸಭಾಭವನದಲ್ಲಿ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ, ವಿವಿಧ ಇಲಾಖೆಗಳ ಅಭಿವೃದ್ಧಿ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿ ಮಾತನಾಡಿದ ಅವರು, ಬರಗಾಲನ್ನು ಸಮರ್ಪಕವಾಗಿ ಎದುರಿಸುವ ನಿಟ್ಟಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಅನುದಾನದ ಕೊರತೆಯಿಲ್ಲ. ಕುಡಿಯುವ ನೀರಿನ ಸಮಸ್ಯೆ ಇರುವ ಪ್ರತಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಗ್ರಾಮಗಳಲ್ಲಿ ಕೊಳವೆ ಬಾವಿಗಳನ್ನು ಆಳಗೊಳಿಸುವುದು ಮತ್ತು ಕೊಳವೆ ಬಾವಿಗಳನ್ನು ಕೊರೆಯಿಸಿ ಕಾರ್ಯ ಕೈಗೊಳ್ಳುವ ಮೂಲಕ ಎಲ್ಲ ರೀತಿಯಿಂದ ಬರಗಾಲ ಸಮರ್ಪಕವಾಗಿ ಎದುರಿಸಲು ಸಿದ್ಧತೆ ಮಾಡಿಕೊಳ್ಳಬೇಕಿದೆ ಎಂದರು.

ಬೇಸಿಗೆ ಸಂದರ್ಭದಲ್ಲಿ ಪ್ರತಿಯೊಂದು ಗ್ರಾಪಂ ವ್ಯಾಪ್ತಿಯಲ್ಲಿ ಸಾರ್ವಜನಿಕ ನೀರಿನ ಟ್ಯಾಂಕ್‌, ಕೊಳವೆ ಬಾವಿ ನೀರು ಹರಿದು ಪೋಲಾಗದಂತೆ ಕ್ರಮವಹಿಸಬೇಕು. ಒಂದು ವೇಳೆ ಗ್ರಾಪಂ ಸಿಬ್ಬಂದಿ ಬೇಜವಾಬ್ದಾರಿ ತೋರಿದಲ್ಲಿ ಅಂತವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ತೊಟ್ಟಿಗಳ ವ್ಯವಸ್ಥೆ ಮಾಡುವಂತೆ ಅಧ್ಯಕ್ಷರು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಆದೇಶಿಸಿದರು.

ತಾಲೂಕಿನ ಪ್ರತಿ ಗ್ರಾಮ ಪಂಚಾಯತ್‌ನಲ್ಲಿ ಎಂಜಿಎನ್‌ ಆರ್‌ಇಜಿಎ ಯೋಜನೆಯಡಿ ಶಾಲಾ ಕಂಪೌಂಡ್‌, ಕೆರೆಗಳ ನಿರ್ಮಾಣ, ರೈತರ ಖಣ, ಚೆಕ್‌ ಡ್ಯಾಂ ಸೇರಿದಂತೆ ಇತರೆ ಕಾಮಗಾರಿಗಳನ್ನು ತೆಗೆದುಕೊಳ್ಳಲು ಅವಕಾಶವಿದ್ದು, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ಇರುವ ಈ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಗ್ರಾಪಂಗೆ ನೀಡಿರುವ ಅಭಿವೃದ್ಧಿ ಗುರಿ ಸಾಧಿಸಬೇಕು ಎಂದರು.

ಯಾವುದೇ ಕಾರಣಕ್ಕೂ ಅಭಿವೃದ್ಧಿಗಾಗಿ ಬಂದಿರುವ ಅನುದಾನ ಸಮರ್ಪಕವಾಗಿ ಬಳಕೆ ಮಾಡುವ ಮೂಲಕ ಆಯಾ ಇಲಾಖೆಗಳಿಗೆ ಇರುವ ಗುರಿ ಸಾಧಿಸುವುದು ಅಧಿಕಾರಿಗಳ ಜವಾಬ್ದಾರಿ. ಒಂದು ವೇಳೆ ಸರ್ಕಾರದ ಅನುದಾನ ನಷ್ಟವಾದರೆ ಅದಕ್ಕೆ ಇಲಾಖೆಗಳ ಅಧಿಕಾರಿಗಳೇ ಹೊಣೆಗಾರರು ಎಂದು ಎಚ್ಚರಿಸಿದರು.

ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರದೀಪ ಕಿವಟೆ ಇಲಾಖೆ ಪ್ರಗತಿ ವಿವರಿಸುತ್ತಿದ್ದಂತೆ ತಾಪಂ ಅಧ್ಯಕ್ಷ ತಿಪ್ಪಣ್ಣ ಸುಬ್ಬಣ್ಣನವರ ಮಧ್ಯ ಪ್ರವೇಶಿಸಿ, ಈ ಅಧಿಕಾರಿಗೆ ಏನು ಮಾಹಿತಿಯೇ ಇರುವುದಿಲ್ಲ. ಪ್ರತಿ ಸಭೆಯಲ್ಲಿ ಎಸ್‌ಸಿ, ಎಸ್‌ಟಿ ಫಲಾನುಭವಿಗಳ ಮಾಹಿತಿ ಕೇಳಿದರೂ ಏನು ಗೊತ್ತಿಲ್ಲ. ಆಮೇಲೆ ಕೊಡುತ್ತೇನೆ ಎಂದು ಹೇಳುತ್ತಾರೆ. ಇಲಾಖೆ ಜಿಲ್ಲಾ ಅಧಿಕಾರಿಗಳು ಹೇಳಿದರೂ ಮಾಹಿತಿ ನೀಡಿಲ್ಲ. ಇಂತಹ ಅ ಧಿಕಾರಿ ನಮಗೆ ಬೇಡ; ಬೇರೆ ಕಡೆ ಹಾಕಿಸಿ ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಜಯಶೀಲಾ ರೊಟ್ಟಿಗವಾಡ ಧ್ವನಿಗೂಡಿಸಿ ಈ ಅಧಿಕಾರಿ ಯಾವುದೇ ಗ್ರಾಮಸಭೆಗಳಿಗೆ ಬರುವುದಿಲ್ಲ. ಸರ್ಕಾರದ ಯೋಜನೆಗಳ ಮಾಹಿತಿಗಳು ರೈತರಿಗೆ ಗೊತ್ತಾಗುತ್ತಿಲ್ಲ ಎಂದು ದೂರಿದರು.

ತಾಪಂ ಅಧ್ಯಕ್ಷರನ್ನು ಸಮಾಧಾನ ಪಡಿಸಿದ ಜಿಪಂ ಅಧ್ಯಕ್ಷರು, ‘ಯಾಕಪ್ಪ, ಸರ್ಕಾರದ ಯೋಜನೆಗಳ ಮತ್ತು ಫಲಾನುಭವಿಗಳ ಮಾಹಿತಿ ನೀಡಲಿಕ್ಕೆ ಏನು ತೊಂದರೆ’ ಎಂದು ತರಾಟೆ ತೆಗೆದುಕೊಂಡರು. ತಾಪಂ ಅಧ್ಯಕ್ಷರಿಗೇ ಮಾಹಿತಿ ನೀಡುತ್ತಿಲ್ಲವೆಂದರೆ ಇನ್ನು ಸಾಮಾನ್ಯ ಜನರಿಗೆ ಏನು ಮಾಹಿತಿ ನೀಡುವಿರಿ ಎಂದು ಪ್ರಶ್ನಿಸಿದರು. ಅಧ್ಯಕ್ಷರು, ಸದಸ್ಯರಿಗೆ ಸರ್ಕಾರದ ಅನುದಾನ ಮತ್ತು ಫಲಾನುಭವಿಗಳ ಮಾಹಿತಿ ನೀಡುವಂತೆ ಮತ್ತು ಎಂಜಿಎನ್‌ಆರ್‌ಇಜಿಎ ಯೋಜನೆಯಡಿ ಚೆಕ್‌ ಡ್ಯಾಂಗಳನ್ನು ಕಡ್ಡಾಯವಾಗಿ ನಿರ್ಮಿಸಲು ಸೂಚಿಸಿದರು.

ಶಿಕ್ಷಣ ಇಲಾಖೆಯ ಶಾಲಾ ಕೊಠಡಿಗಳ ನಿರ್ಮಾಣ ಮತ್ತು ಕೊಠಡಿಗಳ ದುರಸ್ತಿ ಕಾಮಗಾರಿಗಳು ಸರಿಯಾಗಿ ಆಗುತ್ತಿರುವ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪರಿಶೀಲಿಸಬೇಕು ಎಂದು ಹೇಳಿದರು. ಜಿಪಂ ಮುಖ್ಯ ಲೆಕ್ಕಾಧಿಕಾರಿ ಜಾಫರ್‌ಷರೀಫ್‌ ಸುತಾರ ದುರಸ್ತಿ ಹಂತದಲ್ಲಿರುವ ಶಾಲಾ ಕೊಠಡಿಗಳ ಮಾಹಿತಿ ನೀಡುವ ಜೊತೆಗೆ ತಾಲೂಕಿನ ಗ್ರಾಪಂ ವ್ಯಾಪ್ತಿಯ ಶಾಲೆಗಳಲ್ಲಿ ಅವಶ್ಯವಿರುವ ಶೌಚಾಲಯಗಳ ನಿರ್ಮಾಣಕ್ಕೆ ಪ್ರಾಸ್ತಾವನೆ ಸಲ್ಲಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ರೇಷ್ಮೆ ಇಲಾಖೆ ಅಧಿಕಾರಿ ನವಲಗುಂದ ಅವರು ಇಲಾಖೆ ಪ್ರಗತಿ ಮಾಹಿತಿ ನೀಡುತ್ತಿದ್ದಂತೆ ಜಿಪಂ ಸದಸ್ಯ ರಮೇಶ ದುಗ್ಗತ್ತಿ ಮಧ್ಯ ಪ್ರವೇಶಿಸಿ, ಏನ್ರಿ ನೀವು ಕೈ ಬರಹದ ಮಾಹಿತಿ ನೀಡುತ್ತಿದ್ದೀರಿ, ನಿಮ್ಮಲ್ಲಿ ಕಂಪ್ಯೂಟರ್‌ ವ್ಯವಸ್ಥೆ ಇಲ್ಲವೇ? ಎಂದು ಅ ಧಿಕಾರಿಯನ್ನು ತರಾಟೆ ತೆಗೆದುಕೊಂಡರು. ಅದಕ್ಕೆ ಉತ್ತರಿಸಿದ ಅಧಿಕಾರಿ ಸರ್‌, ಇಲಾಖೆಯಲ್ಲಿ ಕಂಪ್ಯೂಟರ್‌ ವ್ಯವಸ್ಥೆ ಇಲ್ಲ ಎಂದು ಉತ್ತರಿಸಿದರು. ಇದಕ್ಕೆ ಆಕ್ರೋಶಗೊಂಡ ಸದಸ್ಯ, ತಾಪಂ ಇಲಾಖೆಯಲ್ಲಿ ಕುಳಿತು ಕಂಪ್ಯೂಟರ್‌ ಮಾಹಿತಿ ತಯಾರಿಸಲೂ ಆಗುವುದಿಲ್ಲವೇ ಎಂದು ಗರಂ ಆದರು. ಜಿಪಂ ಮುಖ್ಯ ಲೆಕ್ಕಾಧಿಕಾರಿ ಜಾಫರ್‌ಷರೀಫ್‌ ಸುತಾರಿ ಮಧ್ಯ ಪ್ರವೇಶಿಸಿ ನಿಮ್ಮ ಇಲಾಖೆಯಲ್ಲಿ ಸಿಬ್ಬಂದಿಗಳ ಸಂಬಳವನ್ನೂ ಕೈ ಬರಹದ ಮೂಲಕವೇ ಮಾಡುತ್ತೀರಾ ಎಂದು ತರಾಟೆ ತೆಗೆದುಕೊಂಡು, ನಂತರ ನರೇಗಾ ಅನುದಾನದಲ್ಲಿ ಕಂಪ್ಯೂಟರ್‌ ನೀಡಲು ಅವಕಾಶವಿದೆ. ಆ ಕುರಿತು ಇಲಾಖೆಗೆ ಪ್ರಸ್ತಾವನೆ ಕಳುಹಿಸಿಕೊಡಿ ಎಂದು ಸೂಚನೆ ನೀಡಿದರು.

ವಿವಿಧ ಇಲಾಖೆ ಅಧಿಕಾರಿಗಳು ಸಭೆಗೆ ವರದಿ ಸಲ್ಲಿಸಿದರು. ತಾಪಂ ಇಒ ಎಸ್‌ಎಂಡಿ ಇಸ್ಮಾಯಿಲ್‌, ಇಡಿ ಸದಾನಂದ ಅಮರಾಪೂರ, ಜಿಪಂ ಸದಸ್ಯೆ ನೀಲವ್ವ ಚವ್ಹಾಣ ಇದ್ದರು.

ಟಾಪ್ ನ್ಯೂಸ್

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

Panth–Iyer

IPL Auction: 27 ಕೋ. ರೂ. ಒಡೆಯ ರಿಷಭ್‌ ಪಂತ್‌ಗೆ ಸಿಗುವುದು 18.90 ಕೋಟಿ ಮಾತ್ರ!

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.