ಕೋಟದಲ್ಲಿ ಯಶಸ್ವಿ ಉದ್ಯೋಗ ಮೇಳ
Team Udayavani, Feb 25, 2019, 1:00 AM IST
ಕೋಟ: ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯಡಿಯಲ್ಲಿ ವಿವಿಧ ಇಲಾಖೆಗಳ ಆಶ್ರಯದಲ್ಲಿ ಕೋಟ ವಿವೇಕ ವಿದ್ಯಾಸಂಸ್ಥೆಯ ವಠಾರದಲ್ಲಿ ಫೆ.24 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ “ಭರವಸೆ’ ಯಶಸ್ವಿಯಾಗಿ ನಡೆಯಿತು.
ಸುಮಾರು 3 ಸಾವಿರಕ್ಕೂ ಹೆಚ್ಚು ಉದ್ಯೋಗಕಾಂಕ್ಷಿಗಳು ಈ ಮೇಳದಲ್ಲಿ ಭಾಗವಹಿಸಿದರು ಹಾಗೂ ಇನ್‌ಫೋಸಿಸ್, ವಿಪ್ರೊ ಸೇರಿದಂತೆ ದೇಶ-ವಿದೇಶದ ಸುಮಾರು 75ಕ್ಕೂ ಅಧಿ ಕ ವಿವಿಧ ಪ್ರತಿಷ್ಠಿತ ಉದ್ಯೋಗದಾತ ಕಂಪೆನಿಗಳು ಮೇಳದಲ್ಲಿ ಸಂದರ್ಶನ ನಡೆಸಿದವು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃ ದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಮತ್ತು ಡಾ| ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಿತು.
ಉತ್ತಮ ವ್ಯವಸ್ಥೆ
ಮೇಳಕ್ಕೆ ಪೂರ್ವಭಾವಿಯಾಗಿ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು ಹಾಗೂ ಪೂರ್ವ ತಯಾರಿಯಾಗಿ ವೃತ್ತಿ ಮಾರ್ಗದರ್ಶನ ಶಿಬಿರವನ್ನು ಆಯೋಜಿಸಲಾಗಿತ್ತು. ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳುವ ವ್ಯವಸ್ಥೆ ಮತ್ತು ಸ್ಥಳದಲ್ಲೇ ನೋಂದಣಿ ವ್ಯವಸ್ಥೆ ಇತ್ತು. ಆಗಮಿಸಿದ ಕಂಪೆನಿಗಳು ಪ್ರತ್ಯೇಕ ಕೊಠಡಿಗಳಲ್ಲಿ ಸಂದರ್ಶನದ ನಡೆಸಿದರು. ಓರ್ವ ವಿದ್ಯಾರ್ಥಿ ಎರಡೆರಡು ತಾಂತ್ರಿಕ ಹಾಗೂ ತಾಂತ್ರಿಕೇತರ ಕಂಪನಿಗಳಲ್ಲಿ ಸಂದರ್ಶನಕ್ಕೆ ಅವಕಾಶವಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದ ಸ್ವಯಂ ಸೇವಕರು ಅಗತ್ಯ ಮಾಹಿತಿಗಳನ್ನು ನೀಡಿದರು. ಕಾರ್ಯಕ್ರಮಕ್ಕೆ ಆಗಮಿಸಿದ ವಿದ್ಯಾರ್ಥಿಗಳಿಗೆ ಊಟೋಪಚಾರದ ವ್ಯವಸ್ಥೆ ಕೂಡ ಇತ್ತು.
ಹೆಚ್ಚಿನವರಿಗೆ ಸ್ಥಳದಲ್ಲೇ ಉದ್ಯೋಗ ಸಂದರ್ಶನ ಎದುರಿಸಿದವರಲ್ಲಿ ಸುಮಾರು 525ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಸ್ಥಳದಲ್ಲೇ ಉದ್ಯೋಗಕ್ಕೆ ನಿಯೋಜಿಸಿಕೊಂಡು ಆದೇಶ ಪತ್ರವನ್ನು ನೀಡಲಾಯಿತು. ಉದ್ಯೋಗ ಪಡೆದವರು ಖುಷಿಯಿಂದ ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.