ಮಡಿಕೇರಿ: ಗ್ರೀನ್‌ ಸಿಟಿ ಫೋರಂ, ನಗರಸಭೆಯಿಂದ ನಗರ ಸ್ವತ್ಛತೆ


Team Udayavani, Feb 25, 2019, 1:00 AM IST

madikeri-green-city.jpg

ಮಡಿಕೇರಿ:  ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿ ಹೃದಯ ಭಾಗದಲ್ಲಿ ಹರಿಯುತ್ತಿರುವ ತೋಡಿನ ತುಂಬಾ ತ್ಯಾಜ್ಯ ತುಂಬಿ ದುರ್ವಾಸನೆ ಬೀರುತ್ತಿದ್ದು, ನಗರಸಭೆ ಮೂಲಕ ಚರಂಡಿ ಸ್ವತ್ಛಗೊಳಿಸುವ ಕಾರ್ಯ ನಡೆಯಿತು.
ನಗರದ ಗ್ರೀನ್‌ ಸಿಟಿ ಫೋರಂ ಸಂಘಟನೆ ನಗರಸಭೆ ಗಮನ ಸೆಳೆಯುವುದರ ಮೂಲಕ ಚರಂಡಿ ಸ್ವತ್ಛಗೊಳಿಸಲು ಮುಂದಾಗಿತ್ತು. ಸಕಾರತ್ಮಕವಾಗಿ ಸ್ಪಂದಿಸಿದ ನಗರಸಭೆ ಶನಿವಾರ ಚರಂಡಿ ಸ್ವತ್ಛತಾ ಕಾರ್ಯ ಕೈಗೆತ್ತಿಕೊಂಡಿತು.

ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಮುಂಭಾಗದಲ್ಲಿ ಹರಿಯುತ್ತಿರುವ ಚರಂಡಿ ಸ್ವತ್ಛಗೊಳಿಸುವ ಕಾರ್ಯದಲ್ಲಿ ಪೌರಕಾರ್ಮಿಕರು ತಮ್ಮನ್ನು ತೊಡಗಿಸಿಕೊಂಡರು. ಚರಂಡಿಯಲ್ಲಿದ್ದ ಬಾಟಲಿಗಳು ಸೇರಿದ್ದಂತೆ ಶೇಖರಣೆಗೊಂಡಿದ್ದ ತ್ಯಾಜ್ಯಗಳನ್ನು ತೆರವುಗೊಳಿಸಿದರು. ಜೆಸಿಬಿ ಯಂತ್ರದ ಮೂಲಕ ಚರಂಡಿಯಲ್ಲಿದ್ದ ತ್ಯಾಜ್ಯಗಳನ್ನು ಹೊರ ತೆಗೆಯಲಾಯಿತು. ಚರಂಡಿಯಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ತೆಗೆಯಲಾಯಿತು.

ನಗರಸಭೆ ಅಧ್ಯಕ್ಷೆ ಕೂಡಕಂಡಿ ಕಾವೇರಮ್ಮ ಸೋಮಣ್ಣ, ಸದಸ್ಯ ಪ್ರಕಾಶ್‌ ಆಚಾರ್ಯ, ಪೌರಾಯುಕ್ತ ಬಿ.ರಮೇಶ್‌ ಚರಂಡಿ ಸ್ವತ್ಛಗೊಳಿಸುವ ಕಾರ್ಯಕ್ಕೆ ಸಕಾರತ್ಮಕವಾಗಿ ಸ್ಪಂದಿಸಿ, ಸ್ಥಳಕ್ಕೆ ಆಗಮಿಸಿದರು. ಪಟ್ಟಣದ ಸ್ವತ್ಛತೆ ಕಾಪಾಡುವ ನಿಟ್ಟಿನಲ್ಲಿ ಗ್ರೀನ್‌ ಸಿಟಿ ಫೋರಂ ಕಳಕಳಿ ವ್ಯಕ್ತ ಪಡಿಸುತ್ತಿರುವುದಕ್ಕೆ ಹರ್ಷ ವ್ಯಕ್ತ ಪಡಿಸಿದರು. ಸಂಘ- ಸಂಸ್ಥೆಗಳು ಹಾಗೂ ಸಾರ್ವಜನಿಕರು ಸ್ವತ್ಛತೆ ಕಾಪಾಡಲು ನಗರಸಭೆಯೊಂದಿಗೆ ಕೈಜೋಡಿಸಬೇಕೆಂದು ಮನವಿ ಮಾಡಿದರು. ಗ್ರೀನ್‌ ಸಿಟಿ ಫೋರಂ ಅಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ, ಪ್ರಧಾನ ಕಾರ್ಯದರ್ಶಿ ಪೂಳಕಂಡ ರಾಜೇಶ್‌, ಖಜಾಂಚಿ ಕನ್ನಂಡ ಕವಿತಾ ಬೊಳ್ಳಪ್ಪ, ಸ್ಥಾಪಕಾಧ್ಯಕ್ಷ ಚೈಯ್ಯಂಡ ಸತ್ಯ ಗಣಪತಿ, ಮಾಜಿ ಅಧ್ಯಕ್ಷ ಅಂಬೆಕಲ್‌ ನವೀನ್‌ ಕುಶಾಲಪ್ಪ, ನಿರ್ದೇಶಕರಾದ ಪಿ.ಕೃಷ್ಣಮೂರ್ತಿ, ಅಜ್ಜಮಾಡ ರಮೇಶ್‌ ಕುಟ್ಟಪ್ಪ, ಕಿರಿಯಮಾಡ ರತನ್‌ ತಮ್ಮಯ್ಯ, ಮೋಂತಿ ಗಣೇಶ್‌, ಸವಿತಾ ಭಟ್‌ ಹಾಜರಿದ್ದರು.

ಟಾಪ್ ನ್ಯೂಸ್

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ

Kumbale: ವರ್ಕಾಡಿ ಪ್ಲೈವುಡ್‌ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ

Kumbale: ವರ್ಕಾಡಿ ಪ್ಲೈವುಡ್‌ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ

1

Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

Police

Kasragodu: ನರ್ಸಿಂಗ್‌ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್‌ ತನಿಖೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.