ಬಾಂಗ್ಲಾದಲ್ಲಿ ವಿಮಾನ ಹೈಜಾಕ್ ಯತ್ನ: ಸೆರೆ
Team Udayavani, Feb 25, 2019, 12:30 AM IST
ಢಾಕಾ: ಬಾಂಗ್ಲಾದೇಶದ ಚಿತ್ತಗಾಂಗ್ನಿಂದ ದುಬೈಗೆ ತೆರಳುತ್ತಿದ್ದ ವಿಮಾನವನ್ನು ಅಪಹರಿಸುವ ಯತ್ನ ಭಾನುವಾರ ನಡೆದಿದೆ.
ಬಾಂಗ್ಲಾದೇಶದ ಬಿಮನ್ ಬಾಂಗ್ಲಾದೇಶ ಏರ್ಲೈನ್ಸ್ಗೆ ಸೇರಿದ ವಿಮಾನ ಇದಾಗಿದ್ದು, ಚಿತ್ತಗಾಂಗ್ನಿಂದ ಢಾಕಾಗೆ ಬಂದು ಅಲ್ಲಿಂದ ದುಬೈಗೆ ವಿಮಾನ ತೆರಳುತ್ತಿತ್ತು. ಮೂಲಗಳ ಪ್ರಕಾರ ಓರ್ವ ಪ್ರಯಾಣಿಕನಿಗೆ ಅಪಹರಣಕಾರ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ. ಅಪಹರಣ ಪ್ರಯತ್ನ ನಡೆಯುತ್ತಿದ್ದಂತೆಯೇ ಚಿತ್ತಗಾಂಗ್ ವಿಮಾನ ನಿಲ್ದಾಣಕ್ಕೆ ವಿಮಾನ ವಾಪಸಾಗಿದ್ದು, ತುರ್ತು ನಿರ್ಗಮನದ ಮೂಲಕ ಎಲ್ಲ 145 ಪ್ರಯಾಣಿಕರನ್ನೂ ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅಲ್ಲದೆ ಅಪಹರಣಕಾರನನ್ನೂ ಬಂಧಿಸಲಾಗಿದೆ ಎನ್ನಲಾಗಿದೆ. ವಿಮಾನವನ್ನು ಸುತ್ತುವರಿದ ಕ್ಷಿಪ್ರ ಕಾರ್ಯಪಡೆ ಸಿಬ್ಬಂದಿ ಅಪಹರಣಕಾರನನ್ನು ಬಂಧಿಸುವಲ್ಲಿ ಯಶ ಸ್ವಿಯಾಗಿದ್ದಾರೆ. ಅಪಹರಣಕಾರ ಪಿಸ್ತೂಲ್, ಬಾಂಬ್ಗಳನ್ನು ಹೊಂ ದಿದ್ದ ಎಂದು ಹೇಳಲಾಗಿದೆ.
ಪಾಕಿಸ್ತಾನಕ್ಕೆ ಭಾರತದ ವಿಮಾನವನ್ನು ಅಪಹರಿಸಲಾಗುತ್ತದೆ ಎಂಬ ಬೆದರಿಕೆ ಕರೆ ಶನಿವಾರ ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ,ಭಾರತದ ಎಲ್ಲ ವಿಮಾನ ನಿಲ್ದಾಣಗಳಲ್ಲೂ ಶನಿವಾರದಿಂದಲೇ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ
Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!
Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ
Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.