ಮಂಗಳೂರಿನಲ್ಲಿ ಐಶ್ವರ್ಯಾ ರೈ ಬಚ್ಚನ್!
Team Udayavani, Feb 25, 2019, 1:00 AM IST
ಮಂಗಳೂರು: ಬಾಲಿವುಡ್ ನಟಿ, ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ ಹಾಗೂ ಪತಿ ಅಭಿಷೇಕ್ ಬಚ್ಚನ್ ರವಿವಾರ ಮಂಗಳೂರಿಗೆ ಆಗಮಿಸಿದ್ದರು.
ಇತ್ತೀಚೆಗೆ ನಿಧನ ಹೊಂದಿದ ತಮ್ಮ ಸಂಬಂಧಿಕರಾದ ಮಂಗಳೂರಿನ ಬಿಜೈ ನಿವಾಸಿ ದೀನನಾಥ ರೈ ಅವರ ಉತ್ತರಕ್ರಿಯೆಯಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಐಶ್ವರ್ಯಾ ಪತಿಯ ಜತೆಗೆ ಮಂಗಳೂರಿಗೆ ಆಗಮಿಸಿದ್ದರು. ರವಿವಾರ ಬೆಳಗ್ಗೆ 10.30ಕ್ಕೆ ಇಂಡಿಗೋ ವಿಮಾನದಲ್ಲಿ ಮುಂಬಯಿಯಿಂದ ಆಗಮಿಸಿದ್ದ ಐಶ್ವರ್ಯ ರೈ ದಂಪತಿ, ವಿಮಾನ ನಿಲ್ದಾಣದಿಂದ ಕಾರಿನ ಮೂಲಕ ನೇರವಾಗಿ ಶ್ರೀ ಕ್ಷೇತ್ರ ಕದ್ರಿಗೆ ಆಗಮಿಸಿದರು.
ಕದ್ರಿಯ ಅಭಿಷೇಕ ಮಂದಿರದಲ್ಲಿ ನಡೆಯುತ್ತಿದ್ದ ಉತ್ತರಕ್ರಿಯೆಯಲ್ಲಿ ಪಾಲ್ಗೊಂಡ ದಂಪತಿ ಸಂಬಂಧಿಕರ ಜತೆಗೆ ಕಾಲ ಕಳೆದರು. ತುಳುವಿನಲ್ಲಿಯೇ ಸಂಭಾಷಣೆ ನಡೆಸುತ್ತಿದ್ದುದು ಕಂಡುಬಂತು. ಸಂಜೆ ಸುಮಾರು 4ರ ಸುಮಾರಿಗೆ ವಿಮಾನದಲ್ಲಿ ಮುಂಬಯಿಗೆ ವಾಪಸಾದರು.
ಐಶ್ವರ್ಯಾ ಅವರು ತನ್ನ ತಂದೆ ಕೃಷ್ಣರಾಜ ರೈ 2017ರಲ್ಲಿ ನಿಧನ ಹೊಂದಿದ್ದ ಸಂದರ್ಭದಲ್ಲಿ ಪಿಂಡ ಪ್ರದಾನಕ್ಕಾಗಿ ಮಂಗಳೂರಿಗೆ ಆಗಮಿಸಿದ್ದರು. ಆಗಲೂ ಕದ್ರಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಬಳಿಯ ನದಿಯಲ್ಲಿ ಪಿಂಡ ಪ್ರದಾನ ಮಾಡಿದ್ದರು. ಬಳಿಕ ಕಳೆದ ವರ್ಷ ತನ್ನ ತಾಯಿ ಬೃಂದಾ ರೈ ಅವರ ಸೋದರನ ಮಗಳ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲು ಮಗಳು ಆರಾಧ್ಯ ಬಚ್ಚನ್ ಜತೆಗೆ ಮಂಗಳೂರಿನ ಟಿಎಂಎ ಪೈ ಸಭಾಂಗಣಕ್ಕೆ ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.