ಪುಲ್ವಾಮಾ ದಾಳಿಗೆ ಬಳಸಿದ ಕೆಂಪು ಇಕೋ ಕಾರು ಸಿಸಿಟಿವಿಯಲ್ಲಿ ಪತ್ತೆ
Team Udayavani, Feb 25, 2019, 5:55 AM IST
ಹೊಸದಿಲ್ಲಿ : ಕನಿಷ್ಠ 40 ಸಿಆರ್‌ಪಿಎಫ್ ಯೋಧರನ್ನು ಬಲಿ ಪಡೆದ ಪುಲ್ವಾಮಾ ಆತ್ಮಾಹುತಿ ಬಾಂಬ್ ದಾಳಿಗೆ ಜೈಶ್ ಉಗ್ರನು ಬಳಸಿದ್ದ ಕೆಂಪು ಇಕೋ ಕಾರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಿಸಿಟಿವಿಯಲ್ಲಿ ದಾಖಲಾಗಿರುವ ಚಿತ್ರಿಕೆಯಲ್ಲಿ ಪತ್ತೆ ಹಚ್ಚಿದೆ.
ಸ್ಫೋಟಕ ತುಂಬಿದ್ದ ಈ ಕೆಂಪು ಇಕೋ ಕಾರನ್ನು ಉಗ್ರ ಆದಿಲ್ ಅಹ್ಮದ್ ದಾರ್ ಚಲಾಯಿಸಿಕೊಂಡು ಬರುತ್ತಿರುವುದು ಸಿಸಿಟಿವಿ ಚಿತ್ರಿಕೆಯಲ್ಲಿ ಕಂಡು ಬಂದಿದೆ.
ಸಿಆರ್‌ಪಿಎಫ್ ಯೋಧರು ಪ್ರಯಾಣಿಸುತ್ತಿದ್ದ ಬಸ್ಸಿಗೆ ಈ ಕೆಂಪು ಕಾರನ್ನು ಉಗ್ರ ಆದಿಲ್ ಢಿಕ್ಕಿ ಹೊಡೆಸುವ ಸ್ವಲ್ಪ ಹೊತ್ತಿಗೆ ಮೊದಲಿನ ದೃಶ್ಯಾವಳಿ ಈ ಸಿಸಿಟಿವಿ ವಿಡಿಯೋ ಚಿತ್ರಿಕೆಯಲ್ಲಿ ದಾಖಲಾಗಿದೆ.
ಈ ಚಿತ್ರಿಕೆಯ ಆಧಾರದಲ್ಲಿ ಸ್ಫೋಟಕ್ಕೆ ಬಳಸಲಾಗಿದ್ದ ಈ ಕೆಂಪು ಕಾರಿನ ಮಾಲಕ ಯಾರೆಂಬುದನ್ನು ಎನ್‌ಐಎ ಪತ್ತೆ ಹಚ್ಚಿದೆ. ಆತ್ಮಾಹುತಿ ದಾಳಿ ನಡೆದ ದಿನದಿಂದಲೇ ಆತನು ನಾಪತ್ತೆಯಾಗಿರುವುದು ಕೂಡ ಈಗ ಗೊತ್ತಾಗಿದೆ.
2010-11ರ ಮಾಡೆಲ್‌ನ ಈ ಕಾರನ್ನು ರೀ-ಪೇಂಟ್ ಮಾಡಲಾಗಿದೆ. ಆತ್ಮಾಹುತಿ ದಾಳಿ ನಡೆದ ತಾಣದಲ್ಲಿ ಈ ಕಾರಿನ ಶಾಕರ್‌ಗಳು ಪತ್ತೆಯಾಗಿವೆ. ಅವುಗಳ ಆಧಾರದಲ್ಲಿ ಕಾರಿನ ಮಾಡೆಲ್ ದೃಡಪಟ್ಟಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.