ತಾಲೂಕಿನ ಅಭಿವೃದ್ಧಿಗೆ ಮೊದಲ ಆದ್ಯತೆ


Team Udayavani, Feb 25, 2019, 7:29 AM IST

talukin.jpg

ಕೆ.ಆರ್‌.ಪೇಟೆ: ತೀವ್ರವಾದ ಬರಗಾಲದ ಸಂದರ್ಭದಲ್ಲಿ ನನಗೆ ಆಶ್ರಯ ನೀಡಿ ಊಟಹಾಕಿ ಸಲಹಿ ಪೋಷಿಸಿದ ಆಲಂಬಾಡಿ ಗ್ರಾಮವನ್ನು ಮುಖ್ಯಮಂತ್ರಿಗಳ ಗ್ರಾಮವಿಕಾಸ ಯೋಜನೆಯಡಿಯಲ್ಲಿ ಸಮಗ್ರವಾಗಿ ಅಭಿವೃದ್ಧಿಪಡಿಸುವ ಸಂಕಲ್ಪ ಮಾಡಿದ್ದೇನೆ. ಇದರ ಜೊತೆಗೆ ತಾಲೂಕಿನ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನವನ್ನು ಸರ್ಕಾರದಿಂದ ಬಿಡುಗಡೆಮಾಡಿಸಿಕೊಳ್ಳುತ್ತೇನೆ ಎಂದು ಶಾಸಕ ನಾರಾಯಣಗೌಡ ಹೇಳಿದರು.

ತಾಲೂಕಿನ ಅಕ್ಕಿಹೆಬ್ಟಾಳು ಹೋಬಳಿಯ ಆಲಂಬಾಡಿ ಗ್ರಾಮದಲ್ಲಿ ಮುಖ್ಯಮಂತ್ರಿಗಳ ಗ್ರಾಮವಿಕಾಸ ಯೋಜನೆಯಡಿಯಲ್ಲಿ ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದರು.

ಜೆಡಿಎಸ್‌ನಲ್ಲೇ ನನ್ನ ಅಳಿವು ಉಳಿವು: ತಾಲೂಕಿನ ಪ್ರಬುದ್ಧ ಜನತೆ ಹಾಗೂ ಮತದಾರ ಬಂಧುಗಳು ನನ್ನ ಜೀವನದಲ್ಲಿಯೇ ಮರೆಯಲಾಗದ ಕಾಣಿಕೆ ನೀಡಿ ಎರಡು ಬಾರಿ ಶಾಸಕನನ್ನಾಗಿ ಆಯ್ಕೆಮಾಡಿ ಪ್ರೀತಿ ನೀಡಿದ್ದಾರೆ. ಜನತೆಯು ನೀಡಿದ ಅವಕಾಶವನ್ನು ಜನತೆಯ ಕಲ್ಯಾಣಕ್ಕಾಗಿ ಬಳಸುತ್ತೇನೆ. ನಾನು ಆಪರೇಷನ್‌ ಕಮಲಕ್ಕೆ ಒಳಗಾಗುವುದಿಲ್ಲ. ನನ್ನ ಅಳಿವು ಉಳಿವು ಜೆಡಿಎಸ್‌ ಪಕ್ಷದಲ್ಲಿ ಮಾತ್ರ. ತಮ್ಮ ರಾಜಕೀಯ ವಿರೋಧಿಗಳು ಮಾಡುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡಬೇಡಿ ಎಂದು ಕೈಮುಗಿದು ಮನವಿ ಮಾಡಿದರು.

ವಿಶೇಷ ಅನುದಾನ ತರುತ್ತೇನೆ: ರಾಜ್ಯ ಸರ್ಕಾರವು ಮಂಡಿಸಿರುವ ಬಜೆಟ್‌ನಲ್ಲಿ ತಾಲೂಕಿನ ಅಭಿವೃದ್ಧಿಗೆ ಯಾವುದೇ ವಿಶೇಷ ಅನುದಾನವನ್ನು ನೀಡದಿರುವುದು ನನ್ನ ಮನಸ್ಸಿಗೆ ನೋವುಂಟುಮಾಡಿದೆ. ಆದರೆ ತಾಲೂಕಿನಲ್ಲಿ ಆಗಲೇ ಬೇಕಾಗಿರುವ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಶತಾಯಗತಾಯ ಮಾಡಿಸಿಯೇ ತೀರುತ್ತೇನೆ. ಮುಖ್ಯಮಂತ್ರಿಗಳು ನನ್ನ ಕ್ಷೇತ್ರಕ್ಕೆ 500 ಕೋಟಿ ರೂ. ವಿಶೇಷ ಅನುದಾನ ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದರು.

ಗೂಂಡಾ ರಾಜಕಾರಣಕ್ಕೆ ಅವಕಾಶ ನೀಡಲ್ಲ: ಮುಖ್ಯಮಂತ್ರಿಗಳ ಕಾಲಿಗೆ ಬೀಳುವುದಾಗಲೀ, ಅಥವಾ ಕಾಡಿಬೇಡಿಯಾದರೂ ವಿಶೇಷ ಅನುದಾನವನ್ನು ತಂದು ಅಭಿವೃದ್ಧಿ ಕೆಲಸಗಳನ್ನು ಅನುಷ್ಠಾನಗೊಳಿಸುತ್ತೇನೆ. ನಾನು ಶಾಸಕನಲ್ಲ ತಾಲೂಕಿನ ಜನತೆಯ ನಮ್ರ ಸೇವಕನಾಗಿದ್ದೇನೆ. ತಾಲೂಕಿನಲ್ಲಿ ಗೂಂಡಾಗಿರಿ ರಾಜಕಾರಣ ನಡೆಯಲು ನನ್ನ ಉಸಿರಿರುವವರೆಗೂ ಅವಕಾಶ ನೀಡಲ್ಲ ಎಂದು ತಿಳಿಸಿದರು.

ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ: ಲೋಕಸಭಾ ಚುನಾವಣೆ ಘೋಷಣೆಯಾಗುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಭೂಮಿ ಪೂಜೆಮಾಡಿ ಕಾಮಗಾರಿಗೆ ಚಾಲನೆ ನೀಡುತ್ತಿದ್ದಾರೆ. ಅದರಂತೆ ತಾಲೂಕಿನ ದಡದಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ, ಸಿಂಗನಹಳ್ಳಿಯಲ್ಲಿ ಶಾಲಾ ಕಟ್ಟಡದ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ, ಆಲಂಬಾಡಿಯಲ್ಲಿ ಗ್ರಾಮವಿಕಾಸ ಯೋಜನೆ, ಅಕ್ಕಿಹೆಬ್ಟಾಳು ಗ್ರಾಮದಲ್ಲಿ ಪ.ಜಾತಿ ಮತ್ತು ವರ್ಗದ ಕಾಲೋನಿಯ ರಸ್ತೆಗಳ ಅಭಿವೃದ್ಧಿಗೆ ಭೂಮಿಪೂಜೆ ಮಾಡಿದರು.

ಮುಖಂಡರಾದ ಎ.ಆರ್‌.ರಘು, ಗೌರಮ್ಮಶ್ರೀನಿವಾಸ್‌, ದಡದಹಳ್ಳಿ ಅತೀಕ್‌, ಜೈನಹಳ್ಳಿ ರಾಮಕೃಷ್ಣೇಗೌಡ, ಕೋಟಿಸುಬ್ಬೇಗೌಡ, ಸಿಂಗನಹಳ್ಳಿಸುರೇಶ್‌, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ರಾಮಸ್ವಾಮಿ,  ಭೂಸೇನಾ ನಿಗಮದ ಸಹಾಯಕ ಎಂಜಿನಿಯರ್‌ ಸಿದ್ಧಲಿಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

ssa

Malpe: ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.