ರಸ್ತೆ ಅಭಿವೃದ್ಧಿ ಗುಣಮಟ್ಟದಲ್ಲಿ ರಾಜಿ ಇಲ್ಲ


Team Udayavani, Feb 25, 2019, 7:29 AM IST

raste.jpg

ಕೋಲಾರ: ರಸ್ತೆ ಅಭಿವೃದ್ಧಿ ಕಾಮಗಾರಿ ಗುಣಮಟ್ಟ ನಿರ್ವಹಣೆಯಲ್ಲಿ ರಾಜಿಯಿಲ್ಲ, ಗುತ್ತಿಗೆದಾರರು ಎಚ್ಚರಿಕೆಯಿಂದ ಕೆಲಸ ಮಾಡಿ, ತಪ್ಪಿದರೆ ತೊಂದರೆಗೆ ಸಿಲುಕುತ್ತೀರಿ ಎಂದು ಶಾಸಕ ಕೆ.ಶ್ರೀನಿವಾಸಗೌಡ ಎಚ್ಚರಿಕೆ ನೀಡಿದರು. ಭಾನುವಾರ ತಾಲೂಕಿನ ಕ್ಯಾಲನೂರು,ತಿಪ್ಪೇನಹಳ್ಳಿ, ಕರೇನಹಳ್ಳಿ, ಅಮ್ಮನಲ್ಲೂರು ಗ್ರಾಮಗಳಲ್ಲಿ ಸುಮಾರು 1 ಕೋಟಿ ರೂ., ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಕಾಮಗಾರಿಗಳು: ಅಮ್ಮನಲ್ಲೂರು ಗ್ರಾಮದಲ್ಲಿ ಆಂಜನೇಯ ಸ್ವಾಮಿ ದೇವಾಲಯದಿಂದ ಬಸ್‌ನಿಲ್ದಾಣದವರೆಗೂ ರಸ್ತೆ ದುರಸ್ಥಿಗೆ 5 ಲಕ್ಷ ರೂ, ಕ್ಯಾಲನೂರಿನಿಂದ ಚಿಕ್ಕಬಳ್ಳಾಪುರ ರಸ್ತೆವರೆಗೂ 50 ಲಕ್ಷ ರೂ, ತಿಪ್ಪೇನಹಳ್ಳಿ-ಸೀತಿ ರಸ್ತೆಗೆ ಸುಮಾರು 30 ಲಕ್ಷರೂ. ಸೇರಿ ಸುಮಾರು 1 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಹಣ ಪೋಲಾಗದಿರಲಿ: ಸರ್ಕಾರದ ಹಣ ಪೋಲಾಗಬಾರದು. ಗುತ್ತಿಗೆದಾರರು ತಪ್ಪು ಮಾಡಿದರೆ ನೋಡಿಕೊಂಡು ಸುಮ್ಮನಿರುವುದು ಉತ್ತಮ ಲಕ್ಷಣವಲ್ಲ,ತನ್ನ ಗಮನಕ್ಕೆ ತನ್ನಿ ಎಂದು ತಾಕೀತು ಮಾಡಿದರು. ಇದು ಹಿಂದೆ ದಿವಂಗತ ಸಿ.ಬೈರೇಗೌಡರ ಕ್ಷೇತ್ರ. ಇಲ್ಲಿ ಭ್ರಷ್ಟತೆಗೆ ಅವಕಾಶವಿಲ್ಲ, ಕಾಮಗಾರಿ ಗುಣಮಟ್ಟವನ್ನು ಸ್ವತಃ ಬೈರೇಗೌಡರೇ ನೋಡಿ ತಪ್ಪಾಗಿದ್ದರೆ ಕ್ರಮ ಕೈಗೊಂಡ ನಿದರ್ಶನಗಳಿವೆ ಎಂದರು. 

ಆಕ್ರೋಶ: ಕೆಲವು ಮಹಾನುಭಾವರು ಕ್ಷೇತ್ರಕ್ಕೆ ಬಂದು ಇಲ್ಲಿನ ವಾತಾವರಣವನ್ನೇ ಹಾಳು ಮಾಡಿಬಿಟ್ಟರು. ಹಣವಿಲ್ಲದೇ ಚುನಾವಣೆಯೇ ಸಾಧ್ಯವಿಲ್ಲ ಎಂಬ ವಾತಾವರಣ ಸೃಷ್ಟಿಸಿದರು ಎಂದು ಟೀಕಿಸಿದರು. ಕ್ಯಾಲನೂರು, ತಿಪ್ಪೇನಹಳ್ಳಿ, ಅಮ್ಮನಲ್ಲೂರಿನ ಜನತೆ ಚುನಾವಣೆಯಲ್ಲಿ ತನ್ನ ಕೈಹಿಡಿದಿದ್ದಾರೆ, ಅವರ ಋಣ ತೀರಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಸಿಗುವ ಯಾವುದೇ ಯೋಜನೆಯಾದರೂ ಇಲ್ಲಿಗೆ ಮಂಜೂರು ಮಾಡಿಸುತ್ತೇನೆಂದು ತಿಳಿಸಿದರು. 

ಬೈರೇಗೌಡರ ಹೆಸರಿಗೆ ಕಳಂಕ ಬೇಡ: ಶಾಸಕರ ನಿಧಿಯ ಹಣದ ಜತೆಗೆ ಸರ್ಕಾರದಿಂದಲೇ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಮಾಡುವುದಾಗಿ ತಿಳಿಸಿದ ಅವರು, ಕ್ಷೇತ್ರದ ಜನತೆ ಮತ ಮಾರಿಕೊಳ್ಳದೇ ಕೆಲಸ ಮಾಡುವವರಿಗೆ ಮತ ನೀಡುವ ಗುಣ ಬೆಳೆಸಿಕೊಳ್ಳಬೇಕು, ಬೈರೇಗೌಡರ ಹೆಸರಿಗೆ ಕಳಂಕ ತರಬಾರದು ಎಂದರು.

ಡಿಸಿಸಿ ಬ್ಯಾಂಕ್‌ ನಿರ್ದೇಶಕ ನಾಗನಾಳ ಸೋಮಣ್ಣ, ನಾಚಹಳ್ಳಿ ಚೌಡರೆಡ್ಡಿ, ಗ್ರಾಪಂ ಉಪಾಧ್ಯಕ್ಷ ಪಾಪಣ್ಣ, ಸದಸ್ಯ ವೀರಪ್ಪರೆಡ್ಡಿ, ಗುತ್ತಿಗೆದಾರ ಸಿ.ನಾರಾಯಣಸ್ವಾಮಿ, ಮಡಿವಾಳ ಗೋಪಾಲಪ್ಪ, ಕಾಮಂಡಹಳ್ಳಿ ಸುರೇಶ್‌, ಕಡಗಟ್ಟೂರು ಎಸ್‌ಎಫ್‌ಸಿಎಸ್‌ ನಿರ್ದೇಶಕ ಮುನಿರಾಜು, ಚನ್ನಸಂದ್ರ ವೆಂಕಟೇಶ್‌ ಇದ್ದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.