ಪ್ರಸಕ್ತ ವರ್ಷ ವಾಡಿಕೆ ಮಳೆ
Team Udayavani, Feb 26, 2019, 12:30 AM IST
ಹೊಸದಿಲ್ಲಿ: ಪ್ರಸಕ್ತ ವರ್ಷದಲ್ಲಿ ಮುಂಗಾರು ಸಾಮಾನ್ಯವಾಗಿರಲಿದ್ದು, ರೈತರು ಉತ್ತಮ ಮಳೆಯನ್ನು ನಿರೀಕ್ಷಿಸಬಹುದಾಗಿದೆ ಎಂದು ದೇಶದ ಏಕೈಕ ಖಾಸಗಿ ಹವಾಮಾನ ಪರಿವೀಕ್ಷಣಾ ಸಂಸ್ಥೆ “ಸ್ಕೈಮೆಟ್’ ಹೇಳಿದೆ. ಜೂನ್ನಿಂದ ಸತತ ನಾಲ್ಕು ತಿಂಗಳ ಅವಧಿಯ ಮುಂಗಾರಿನಲ್ಲಿ ವಾಡಿಕೆ ಮಳೆಯಾಗುವ ಸಂಭವ ಶೇ. 50ಕ್ಕಿಂತಲೂ ಅಧಿಕವಾಗಿದ್ದರೆ, ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಂಭಾವ್ಯತೆಯನ್ನೂ ತಳ್ಳಿಹಾಕುವಂತಿಲ್ಲ ಎಂದು ಸಂಸ್ಥೆ ತಿಳಿಸಿದೆ. ಕಳೆದ 50 ವರ್ಷಗಳ ಮುಂಗಾರಿನಲ್ಲಿ ಭಾರತದಲ್ಲಿ ಸಾಧಾರಣ ಮಳೆಯ ಪ್ರಮಾಣ ಶೇ. 96 ರಿಂದ 104ರ ವರೆಗಿದೆ. ಈ ಅವಧಿಯಲ್ಲಿ ಸರಾಸರಿ 89 ಸೆಂ.ಮೀ. ಮಳೆಯಾಗಿದೆ. ಈ ಬಾರಿ ಉತ್ತಮ ಮಳೆಯಾಗಿ ಅದರಿಂದ ಕೃಷಿ ವಲಯಕ್ಕೆ ಹೆಚ್ಚು ಲಾಭಕರವಾಗಲಿದೆ ಎಂಬುದು ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿ ಜತಿನ್ ಸಿಂಗ್ ಅಭಿಮತ. ಭಾರತದ ಆರ್ಥಿಕಾಭಿವೃದ್ಧಿಗೆ ಮುಂಗಾರು ತನ್ನದೇ ಆದ ಕಾಣಿಕೆ ನೀಡುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್!
Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ
Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
EVM ರದ್ದು ಆಗ್ರಹಿಸಿ ಜೋಡೋ ಮಾದರಿ ಯಾತ್ರೆ: ಎಐಸಿಸಿ ಅಧ್ಯಕ್ಷ ಖರ್ಗೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.