ಹದಿನೈದು ದಿನ ಮೊದಲೇ ಬಂದ ಸುಡುಬೇಸಿಗೆ


Team Udayavani, Feb 26, 2019, 12:30 AM IST

ban26021901medn.jpg

ಬೆಂಗಳೂರು: ರಾಜ್ಯದಲ್ಲಿ ಹದಿನೈದು ದಿನಗಳ ಮೊದಲೇ ಬೇಸಿಗೆ ಆರಂಭವಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್‌ ತಲುಪಿದೆ.ವಾತಾವರಣ ಹಾಗೂ ಮಣ್ಣಿನಲ್ಲಿ ತೇವಾಂಶ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕಳೆದ ಹದಿನೈದು ದಿನಗಳಿಂದ ಗರಿಷ್ಠ ಉಷ್ಣಾಂಶದಲ್ಲಿ ಏರಿಕೆಯಾಗಿದ್ದು, ವಾಡಿಕೆಗಿಂತಲೂ 4-5 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಹೆಚ್ಚಳವಾಗಿರುವುದು ಕಂಡುಬಂದಿದೆ.

ಫೆಬ್ರವರಿ ತಿಂಗಳಲ್ಲಿ ಸಾಮಾನ್ಯವಾಗಿ 30-35 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗುತ್ತದೆ. ಆದರೆ, ರಾಜ್ಯ ಕೆಲವು ಜಿಲ್ಲೆಗಳಲ್ಲಿ ಈಗಾಗಲೇ 38-39 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ. ಒಣಹವೆ ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಉಷ್ಣಾಂಶ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಶುಭ್ರ ಆಕಾಶ ಹಾಗೂ ವಾತಾವರಣದಲ್ಲಿ ತೇವಾಂಶ ಪ್ರಮಾಣ ಕಡಿಮೆಯಾದಂತೆ ಬಿಸಿಲಿನ ತಾಪಮಾನವೂ ಹೆಚ್ಚಾಗಲಿದೆ. ಜತೆಗೆ ಯಾವುದೇ ಭಾಗದಲ್ಲಿ ಟ್ರಫ್ ಹಾಗೂ ವಾಯು ಕುಸಿತವಾಗದ ಪರಿಣಾಮ ಅವಧಿಗೆ ಮೊದಲೇ ಬೇಸಿಗೆಯ ಅನುಭವವಾಗುತ್ತಿದೆ ಎಂದು ಬೆಂಗಳೂರು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್‌.ಪಾಟೀಲ್‌ ಹೇಳಿದ್ದಾರೆ.

ಮಂಗಳೂರು, ರಾಯಚೂರು, ಕಲಬುರಗಿ, ಚಿತ್ರದುರ್ಗ, ಗದಗ, ಬಳ್ಳಾರಿ, ಬೆಂಗಳೂರು, ಕಾರವಾರ, ವಿಜಯಪುರ, ಧಾರವಾಡ, ಮೈಸೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್‌ ಮೀರಿದ್ದು, ಸೋಮವಾರ ಬಳ್ಳಾರಿಯಲ್ಲಿ 40 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ. ಇದರೊಂದಿಗೆ ಕಳೆದ ಶನಿವಾರ ಮಂಗಳೂರಿನಲ್ಲಿ 39 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ರಾಜಧಾನಿಯಲ್ಲಿಯೂ ಹೆಚ್ಚಿನ ಉಷ್ಣಾಂಶ
ಬೆಂಗಳೂರಿನಲ್ಲಿಯೂ ಗರಿಷ್ಠ ತಾಪಮಾನ ಫೆಬ್ರವರಿ ಅಂತ್ಯಗೊಳ್ಳುವ ಮೊದಲೇ 35 ಡಿಗ್ರಿ ಸೆಲ್ಸಿಯಸ್‌ ತಲುಪಿದ್ದು, ಇನ್ನು ಕೆಲವು ದಿನಗಳಲ್ಲಿ 38 ಡಿಗ್ರಿ ಸೆಲ್ಸಿಯಸ್‌ ಏರುವ ಸಾಧ್ಯತೆಯಿದೆ. ಜತೆಗೆ ಮುಂಜಾನೆ 15-17 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ತಾಪಮಾನವಿದ್ದರೆ, ಮಧ್ಯಾಹ್ನದ ವೇಳೆ 30 ಡಿಗ್ರಿ ಸೆಲ್ಸಿಯಸ್‌ಗಿಂತಲೂ ಹೆಚ್ಚಿನ ತಾಪಮಾನ ದಾಖಲಾಗುತ್ತಿದೆ.

ಫೆ.25ರಂದು ದಾಖಲಾದ ತಾಪಮಾನ
ಕೇಂದ್ರ            ಗರಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌ಗಳಲ್ಲಿ)

ಬಳ್ಳಾರಿ            40
ಕಲಬುರಗಿ        39
ರಾಯಚೂರು        38.5
ಗದಗ            36.4
ಮಂಡ್ಯ            36.4
ವಿಜಯಪುರ        36.5
ಮೈಸೂರು        35.5
ಬೆಂಗಳೂರು        35.5

ಹದಿನೈದು ದಿನಗಳ ಮೊದಲೇ ರಾಜ್ಯದಲ್ಲಿ ಬೇಸಿಗೆ ಆರಂಭವಾಗಿದ್ದು, ಶುಭ್ರ ಆಕಾಶ ಹಾಗೂ ವಾತಾವರಣದಲ್ಲಿ ತೇವಾಂಶವಿಲ್ಲದ ಕಾರಣದಿಂದ ಉಷ್ಣಾಂಶ ಹೆಚ್ಚಾಗಿದ್ದು, ರಾಜ್ಯ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತಲೂ 4-5 ಡಿಗ್ರಿ ಸೆಲ್ಸಿಯಸ್‌ ಹೆಚ್ಚಿನ ಉಷ್ಣಾಂಶ ದಾಖಲಾಗಿದೆ.
– ಶ್ರೀನಿವಾಸರೆಡ್ಡಿ, ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಅಧ್ಯಕ್ಷ

– ವೆಂ. ಸುನೀಲ್‌ಕುಮಾರ್‌

ಟಾಪ್ ನ್ಯೂಸ್

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ

IPL 2024: Pant has the ambition to become India’s cricket captain: Parth Jindal

IPL 2025: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.