ಸ್ಮಾರ್ಟ್‌ಸಿಟಿ ಎಲ್ಲ ಅನುದಾನ ದಕ್ಷಿಣಕ್ಕೆ ಮಾತ್ರ
Team Udayavani, Feb 26, 2019, 5:38 AM IST
ದಾವಣಗೆರೆ: ಉತ್ತರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಸ್ಮಾರ್ಟ್‌ಸಿಟಿ ಅನುದಾನ ದೊರೆತಿಲ್ಲ. ಹಾಗಾಗಿ ಈ ಕ್ಷೇತ್ರವನ್ನು ಇನ್ನೂ ಅಭಿವೃದ್ಧಿಪಡಿಸುವ ಅವಶ್ಯಕತೆ ಇದೆ ಎಂದು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ. ರವೀಂದ್ರನಾಥ್ ಹೇಳಿದರು.
ವಿದ್ಯಾನಗರದ ಎಸ್.ಎ. ರವೀಂದ್ರನಾಥ್ ಉದ್ಯಾನದಲ್ಲಿ ಸೋಮವಾರ ಬಿಜೆಪಿ ಉತ್ತರ ವಿಧಾನಸಭಾ ಕ್ಷೇತ್ರದಿಂದ ಏರ್ಪಡಿಸಿದ್ದ ಪ್ರಧಾನಿ ನರೇಂದ್ರಮೋದಿ ಮನ್ ಕೀ ಬಾತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆ ಇದ್ದು, ಈ ಕ್ಷೇತ್ರವೂ ಅಭಿವೃದ್ಧಿಯಾಗಬೇಕಿದೆ. ಆದರೆ, ನಮ್ಮ ಕ್ಷೇತ್ರಕ್ಕೆ ಸ್ಮಾರ್ಟ್‌ಸಿಟಿ ಅನುದಾನ ನೀಡಿಲ್ಲ. ಎಲ್ಲವನ್ನೂ ದಕ್ಷಿಣ ಕ್ಷೇತ್ರಕ್ಕೆ ನೀಡಲಾಗಿದೆ. ಇದರಿಂದ ನಾವು ಜನರಿಗೆ ಉತ್ತರ ನೀಡುವುದೇ ಕಷ್ಟವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಮುಂಬರುವ ಮಹಾನಗರಪಾಲಿಕೆ ಚುನಾವಣೆಯಲ್ಲಿ ನಾವೇ ಗೆದ್ದು ಅಧಿಕಾರ ಹಿಡಿಯುತ್ತೇವೆ. ಗೆದ್ದ ಮೇಲೆ ಸ್ವತ್ಛತೆ, ಪಾರ್ಕ್ ಅಭಿವೃದ್ಧಿ, ಕುಡಿಯುವ ನೀರು ಸೇರಿದಂತೆ ಜನರಿಗೆ ಅತ್ಯವಶ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಮೊದಲ ಆದ್ಯತೆ ನೀಡಲಾಗುವುದು. ಟಿಕೆಟ್‌ಗಾಗಿ ಈಗಾಗಲೇ ಸಾಕಷ್ಟು ಮಂದಿ ಮನವಿ ಸಲ್ಲಿಸಿದ್ದು, ವಾರ್ಡ್‌ನಲ್ಲಿ ಅವರಿಗಿರುವ ಅರ್ಹತೆ ಆಧಾರದ ಮೇಲೆ ಜನರ ಅಭಿಪ್ರಾಯ ಸಂಗ್ರಹಿಸಿ ಟಿಕೆಟ್ ವಿತರಿಸುತ್ತೇವೆ ಎಂದು ಹೇಳಿದರು.
ಇದೇ ವೇಳೆ ಉದ್ಯಾನದಲ್ಲಿನ ನೂರಾರು ವಾಯುವಿಹಾರಿಗಳು, ಮಹಿಳೆಯರು, ಜನರು ತಮ್ಮ ಅಭಿಪ್ರಾಯಗಳನ್ನು ಪೆಟ್ಟಿಗೆಯಲ್ಲಿ ಹಾಕುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಿದರು. ಬಿಜೆಪಿ ಮುಖಂಡರಾದ ಕಡ್ಲೆಬಾಳು ಧನಂಜಯ್, ದಿಳ್ಳೆಪ್ಪ, ಬಾಮಾ ಬಸವರಾಜ್, ಮಾಜಿ ಮೇಯರ್ ವಸಂತ್‌ಕುಮಾರ್, ಎ.ಜಿ. ವೀರೇಶ್, ಕಂದಗಲ್ ಪಾಟೀಲ್, ಕಡ್ಲೆಬಾಳು ಶಿವಕುಮಾರ್, ಕರಿಯಪ್ಪ, ಮುಕುಂದಪ್ಪ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್ 2ನೇ ಪಂದ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.