ಬೆಸ್ಕಾಂನಿಂದ ರೈತರ ಸುಲಿಗೆ
Team Udayavani, Feb 26, 2019, 5:52 AM IST
ಹರಿಹರ: ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ, ಟಿಸಿ (ಪರಿವರ್ತಕ) ಮತ್ತಿತರೆ ಪರಿಕರ ಒದಗಿಸುವಾಗ ಬೆಸ್ಕಾಂ ಅಧಿಕಾರಿಗಳು ರೈತರ ಸುಲಿಗೆ ಮಾಡುತ್ತಿದ್ದಾರೆಂಬ ಆರೋಪ ಕೇಳಿಬರುತ್ತಿದೆ ಎಂದು ಶಾಸಕ ಎಸ್.ರಾಮಪ್ಪ ಕಿಡಿಕಾರಿದರು.
ನಗರದ ತಾಪಂ ಕಚೇರಿ ಸಭಾಂಗಣದಲ್ಲಿ ಸೋಮವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸರಿಯಾಗಿ ಮಳೆ-ಬೆಳೆ ಇಲ್ಲದೆ ತಾಲೂಕಿನ ರೈತರು ಕಂಗಾಲಾಗಿದ್ದಾರೆ. ಬಿತ್ತಿದ ಬೆಳೆ ಕಾಪಾಡಿಕೊಳ್ಳಲು ವಿದ್ಯುತ್ ಸಂಪರ್ಕಕ್ಕೋ, ಟಿಸಿಗಾಗಿಯೋ ನಿಮ್ಮಲ್ಲಿಗೆ ಓಡೋಡಿ ಬರುವ ರೈತರ ತುರ್ತು ಅಗತ್ಯವನ್ನೆ ಬಂಡವಾಳ ಮಾಡಿಕೊಂಡು ಅವರಿಂದ ಹಣ ಪೀಕುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
ಕೃಷಿ ಪಂಪ್‌ಸೆಟ್‌ಗಳಿಗೆ ಹೊಸದಾಗಿ ವಿದ್ಯುತ್ ಸಂಪರ್ಕ ನೀಡಲು 50 ಸಾವಿರ ರೂ., ಅಕ್ರಮ-ಸಕ್ರಮ ಯೋಜನೆಯಡಿ ಸಂಪರ್ಕಕ್ಕೆ 20ರಿಂದ 50 ಸಾವಿರ ಹಣ ವಸೂಲಿ ಮಾಡುತ್ತಿದ್ದೀರೆಂದು ದೂರುಗಳು ಬರುತ್ತಿವೆ. ಸರ್ಕಾರ ನೀಡಿರುವ ಯೋಜನೆಯ ಲಾಭ ಫಲಾನುಭವಿ ರೈತರಿಗೆ ತಲುಪಿಸಲು ನಿಮಗೇಕೆ ಹಣ ನೀಡಬೇಕು. ಸರ್ಕಾರ ನಿಮಗೆ ಸಂಬಳ, ಸವಲತ್ತು ನೀಡುತ್ತಿಲ್ಲವೆ? ಎಂದು ತರಾಟೆಗೆ ತೆಗೆದುಕೊಂಡರು.
ಇದಕ್ಕೆ ಪ್ರತಿಕ್ರಿಯಿಸಿದ ಬೆಸ್ಕಾಂ ಎಇಇ ಸಿ.ಎನ್.ರಮೇಶ್ ಹಾಗೂ ಇಂಜಿನಿಯರ್ ಕರಿಬಸಯ್ಯ, ಅಕ್ರಮ, ಸಕ್ರಮಕ್ಕೆ ಸರ್ಕಾರ ನಿಗದಿಗೊಳಿಸಿದ ಶುಲ್ಕವನ್ನಷ್ಟೆ ಪಡೆಯಲಾಗುತ್ತಿದೆ. ಉಳಿದಂತೆ ಟಿಸಿ, ಮತ್ತಿತರೆ ಪರಿಕರಗಳಿಗೆ ರೈತರಿಂದ ಯಾವುದೇ ಹಣ ಪಡೆಯುತ್ತಿಲ್ಲ. ನಿಯಮ ಬಾಹಿರವಾಗಿ ರೈತರಿಂದ ಏನಾದರೂ ಹಣ ವಸೂಲಿ ಮಾಡಿದ್ದರೆ ನಮ್ಮ ಮೇಲೆ ಕ್ರಮ ಜರುಗಿಸಬಹುದು. ಆಗ ಶಾಸಕರು, ಈ ಬಗ್ಗೆ ಸಾಕಷ್ಟು ರೈತರು ನನ್ನ ಬಳಿ ದೂರಿದ್ದಾರೆ. ಇದು ಹೀಗೇ ಮುಂದುವರಿದರೆ ಸಹಿಸುವುದಿಲ್ಲ ಎಂದರು.
ಕಳಪೆ ಪರಿಕರ: ತಾಲೂಕಿನಲ್ಲಿ ಬೆಸ್ಕಾಂ ಕಾಮಗಾರಿಗಳು ಆಮೆಗತಿಯಲ್ಲಿ ನಡೆಯುತ್ತಿವೆ. ಗುತ್ತಿಗೆದಾರರು ಅಳವಡಿಸುವ ವಿದ್ಯುತ್ ಪರಿಕರಗಳು ಕಳಪೆಯಾಗಿವೆ. ಈ ಪರಿಕರಗಳನ್ನು ಒದಗಿಸುವವರು ಯಾರು, ಅಳವಡಿಸುವವರು ಯಾರು, ನೀವು ಗುಣಮಟ್ಟ ಪರಿಶೀಲಿಸುವುದಿಲ್ಲವೇ? ಎಂದು ಇಇ
ವಿಜಯಲಕ್ಷ್ಮೀಯವರನ್ನು ತರಾಟೆಗೆ ತೆಗೆದುಕೊಂಡರು.
ಇದಕ್ಕೆ ಪ್ರತಿಕ್ರಿಯಿಸಿದ ವಿಜಯಲಕ್ಷ್ಮೀ, ಗುತ್ತಿಗೆದಾರರ ಟೆಂಡರ್ ಪ್ರಕ್ರಿಯೆ ಕಂಪನಿ ಮಟ್ಟದಲ್ಲಿ ನಡೆಯುತ್ತದೆ. ಹರಿಹರ, ಹೊನ್ನಾಳಿ, ಹರಪನಹಳ್ಳಿ ತಾಲೂಕುಗಳ ಪರಿಕರ ಸರಬರಾಜಿಗೆ 50 ಕೋಟಿ ರೂ. ಟೆಂಡರ್ ಆಗಿದ್ದು, ಎರಡು ವರ್ಷಗಳಿಂದ ಆ ಗುತ್ತಿಗೆದಾರರು 15 ತಂಡಗಳಲ್ಲಿ ಕೆಲಸ ಮಾಡುತ್ತಿದ್ದು, 3334 ಕಾಮಗಾರಿ ವಹಿಸಲಾಗಿದೆ. ತಾಲೂಕಿನ 778 ಕಾಮಗಾರಿಗಳ ಪೈಕಿ 528 ಮುಗಿಸಿದ್ದಾರೆ. ಆದಷ್ಟು ಬೇಗ ಕಾಮಗಾರಿ ಮುಗಿಸಲು ಒತ್ತಡ ಹೇರುತ್ತಿದ್ದೇವೆ ಎಂದರು.
ಕುಡಿಯುವ ನೀರಿನ ಕೊಳವೆಬಾವಿಗಳ ವಿದ್ಯುತ್ ಸಂಪರ್ಕಕ್ಕೂ ತಿಂಗಳುಗಟ್ಟಲೆ ಅಲೆದಾಡಿಸಬೇಡಿ. ಯಲವಟ್ಟಿ ಗ್ರಾಮದಲ್ಲಿ ಕೊಳವೆಬಾವಿಗೆ ಮೂರು ತಿಂಗಳಿಂದ ವಿದ್ಯುತ್ ಸಂಪರ್ಕ ಕೊಟ್ಟಿಲ್ಲ ಎಂಬ ಆರೋಪವಿದೆ. ಕೂಡಲೆ ವಿದ್ಯುತ್ ಸಂಪರ್ಕ ಕಲ್ಪಿಸಿ, ಬೇಸಿಗೆಯಲ್ಲಿ ಜನರಿಗೆ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ತಾಕೀತು ಮಾಡಿದರು.
ನಂತರ ಪಿಡಿಒಗಳ ಪ್ರಗತಿ ಪರಿಶೀಲನೆಯಲ್ಲಿ ಉದ್ಯೋಗ ಖಾತ್ರಿ, ಬಸವ ವಸತಿ ಯೋಜನೆಗಳ ಬಗ್ಗೆ ಮಾಹಿತಿ ಪಡೆದರು. ಸಭೆಯಲ್ಲಿ ತಾಪಂ ಇಒ ಅನಂತರಾಜ್, ರಾಘವೇಂದ್ರ, ವಿವಿಧ ಇಲಾಖೆ ಅಧಿಕಾರಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.