ಪಾಕ್ ಮೇಲೆ ವಾಯು ದಾಳಿ: ಮುಂಬಯಿ ಶೇರು 240 ಅಂಕ ಡೌನ್
Team Udayavani, Feb 26, 2019, 10:49 AM IST
ಮುಂಬಯಿ : ಭಾರತೀಯ ವಾಯು ಪಡೆ ಇಂದು ಪಾಕಿಸ್ಥಾನದಲ್ಲಿನ ಉಗ್ರ ಶಿಬಿರಗಳ ಮೇಲೆ ವೈಮಾನಿಕ ಬಾಂಬ್ ದಾಳಿ ನಡೆಸಿರುವ ಕಾರಣ ಹೂಡಿಕೆದಾರರು ಮತ್ತು ವಹಿವಾಟುದಾರರ ಭಾವನೆಗಳು ದುರ್ಬಲಗೊಂಡಿದ್ದು ಇದರಿಂದಾಗಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಮಂಗಳವಾರದ ವಹಿವಾಟನ್ನು 239.67 ಅಂಕಗಳ ನಷ್ಟದೊಂದಿಗೆ 35,973.71 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಜಾಗತಿಕ ಮಾರುಕಟ್ಟೆಗಳಲ್ಲಿ ದೌರ್ಬಲ್ಯ ತೋರಿ ಬಂದಿರುವುದು ಕೂಡ ಮುಂಬಯಿ ಶೇರು ಪೇಟೆಯ ಮೇಲೆ ಪರಿಣಾಮ ಬೀರಿದ್ದು ಹಣಕಾಸು ಮತ್ತು ರಿಯಲ್ಟಿ ರಂಗದ ಶೇರುಗಳು ಇಂದು ಹೊಡೆತಕ್ಕೆ ಗುರಿಯಾದವು. ಇಂದು ಒಂದು ಹಂತದಲ್ಲಿ ಸೆನ್ಸೆಕ್ಸ್ 500 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು. ನಿನ್ನೆ ಸೋಮವಾರ ಸೆನ್ಸೆಕ್ಸ್ 342 ಅಂಕಗಳ ಏರಿಕೆಯನ್ನು ದಾಖಲಿಸಿತ್ತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಇಂದು 44.80 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 10,835.30 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. ಬ್ಯಾಂಕಿಂಗ್, ರಿಯಲ್ಟಿ ಮತ್ತು ಪಿಎಸ್ಯು ಶೇರುಗಳು ಇಂದು ತೀವ್ರ ಒತ್ತಡಕ್ಕೆ ಗುರಿಯಾದವು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,666 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 943 ಶೇರುಗಳು ಮುನ್ನಡೆ ಸಾಧಿಸಿದವು; 1,579 ಶೇರುಗಳು ಹಿನ್ನಡೆಗೆ ಗುರಿಯಾದವು; 144 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Cabinet ಸರ್ಜರಿ ಸದ್ಯ ಇಲ್ಲ:ಹೈಕಮಾಂಡ್ ಭೇಟಿ ಬಳಿಕ ಸಿಎಂ, ಡಿಸಿಎಂ ಸ್ಪಷ್ಟನೆ
Tamil Nadu;ಇಂದು ಅಪ್ಪಳಿಸಲಿದೆ ‘ಫೆಂಗಲ್’ ಚಂಡಮಾರುತ!: ಶ್ರೀಲಂಕಾದಲ್ಲಿ 12 ಸಾ*ವು
1.26 ಲಕ್ಷ ಅರ್ಹರಿಗೆ ವಾರದಲ್ಲಿ ಬಗರ್ ಹುಕುಂ ಚೀಟಿ
Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ
GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.