ರಾಮಜನ್ಮಭೂಮಿ ವಿವಾದ: “ಮಧ್ಯವರ್ತಿ’ ನೇಮಕಕ್ಕೆ ಚಿಂತನೆ
Team Udayavani, Feb 27, 2019, 12:30 AM IST
ಹೊಸದಿಲ್ಲಿ: ಅಯೋಧ್ಯೆಯ ರಾಮ ಜನ್ಮಭೂಮಿ – ಬಾಬ್ರಿ ಮಸೀದಿ ಭೂಮಿ ವಿವಾದ ಬಗೆಹರಿಸಲು ಸಂಧಾನವೇ ಸೂಕ್ತ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್, ಇದಕ್ಕಾಗಿ ಮಧ್ಯವರ್ತಿಯೊಬ್ಬರನ್ನು ನೇಮಕ ಮಾಡುವ ಬಗ್ಗೆ ಪರಿಶೀಲನೆ ನಡೆಸಲು ನಿರ್ಧರಿಸಿದೆ.
ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಸಂವಿಧಾನ ಪೀಠ, ಮಾರ್ಚ್ 5ರಂದು ನಡೆಯುವ ವಿಚಾರಣೆ ವೇಳೆ ಮಧ್ಯವರ್ತಿಯನ್ನು ನೇಮಕ ಮಾಡುವುದೇ, ಬೇಡವೇ ಎಂಬ ಬಗ್ಗೆ ಕೋರ್ಟ್ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದೆ. ಈ ವಿವಾದವನ್ನು ಸಂಧಾನ ಮೂಲಕ ಉತ್ತಮ ರೀತಿಯಲ್ಲಿ ಬಗೆಹರಿಸುವ ಕುರಿತು ಚಿಂತನೆ ನಡೆಸುತ್ತಿರುವುದಾಗಿ ಪೀಠ ಹೇಳಿದೆ.
ರಾಜಕೀಯವಾಗಿ ಅತ್ಯಂತ ಸೂಕ್ಷ್ಮ ಭೂ ವಿವಾದವಾದ ಇದನ್ನು ಮಧ್ಯಸ್ಥಿಕೆಯಿಂದ ಪರಿಹರಿಸುವ ಕೇವಲ ಶೇ.1ರಷ್ಟು ಅವಕಾಶ ಇದ್ದರೂ, ಆ ಅವಕಾಶವನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ ಎಂದ ನ್ಯಾಯಾಲಯ, ವಿವಾದಕ್ಕೆ ಸಂಬಂಧಿಸಿದ ಎಲ್ಲಾ ಅನು ವಾದಿತ ದಾಖಲೆಗಳನ್ನು 6 ವಾರಗಳಲ್ಲಿ ಕೋರ್ಟ್‌ಗೆ ಸಲ್ಲಿಸಲು ದೂರುದಾರರಿಗೆ ನಿರ್ದೇಶಿಸಿದೆ. ಜೊತೆಗೆ ದಾಖಲೆಗಳನ್ನು ಅಭ್ಯಸಿಸಿ ಏನಾದರೂ ಆಕ್ಷೇಪಣೆಗಳಿದ್ದರೆ ತಿಳಿಸುವಂತೆಯೂ ಸೂಚಿಸಿದೆ.
ಕೆಲವು ಮುಸ್ಲಿಂ ಅರ್ಜಿದಾರರು ಸುಪ್ರೀಂ ಕೋರ್ಟ್ ನೀಡಿರುವ ಮಧ್ಯಸ್ಥಿಕೆ ಆಯ್ಕೆಯನ್ನು ಒಪ್ಪಿಕೊಂಡಿವೆ. ಆದರೆ ರಾಮ್‌ಲಲ್ಲಾ ವಿರಾಜ್‌ಮಾನ್ ಸೇರಿದಂತೆ ಕೆಲ ಹಿಂದೂ ಅರ್ಜಿದಾರರಾರು ಮಧ್ಯಸ್ಥಿಕೆ ವಿಚಾರವನ್ನು ಒಪ್ಪಿಲ್ಲ ಎಂದು ಹೇಳಲಾಗಿದೆ. ಈ ಹಿಂದೆಯೂ ಮಧ್ಯಸ್ಥಿಕೆ ಪ್ರಸ್ತಾಪ ವಿಫಲವಾಗಿತ್ತು ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
MUST WATCH
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.