ಮೊಗೇರಡ್ಕ  ಶಾಲೆಗೆ ನೀರಿನ ಕೊರತೆ: ಸ್ಪಂದಿಸದ ಇಲಾಖೆ?


Team Udayavani, Feb 27, 2019, 5:42 AM IST

27-february-3.jpg

ಕಡಬ : ಕೊಂಬಾರು ಗ್ರಾಮದ ಮೊಗೇರಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದೊಂದು ತಿಂಗಳಿನಿಂದ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿಯವರು ಸಂಬಂಧಪಟ್ಟ ಇಲಾಖಾಧಿಕಾರಿಗೆ ನೀಡಿದ ಭರವಸೆಯೂ ಇದುವರೆಗೆ ಈಡೇರಿಲ್ಲ.

ಮೊಗೇರಡ್ಕ ಶಾಲೆ ಪರಿಸರದ ಬಡ ಕೂಲಿ ಕಾರ್ಮಿಕರ, ಮಧ್ಯಮ ವರ್ಗದವರ ಆಶಾಕಿರಣವಾಗಿದೆ. ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರೂ ಇದ್ದಾರೆ. ಆದರೆ ಮೂಲ ಸೌಕರ್ಯಗಳಾದ ಕೊಠಡಿ, ಪ್ರಯೋಗ ಪರಿಕರಗಳು, ಶಾಲಾ ಆವರಣ ಗೋಡೆ ಮೊದಲಾದ ಅಭಿವೃದ್ಧಿ ಕಾರ್ಯಗಳು ಆಗಬೇಕಿದೆ.

ಬಿಗಡಾಯಿಸಿದ ಸಮಸ್ಯೆ
ಇಲ್ಲಿನ ನೀರಿನ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳು ತೊಂದರೆ ಎದುರಿಸುತ್ತಿದ್ದಾರೆ. ಶಾಲಾ ಆವರಣದಲ್ಲಿದ್ದ ತೆರದ ಬಾವಿ ಬತ್ತಿ ಹೋಗಿ ತಿಂಗಳಾಗುತ್ತಾ ಬಂತು. ಬಳಿಕ ಕೈಪಂಪು ಅಳವಡಿಸಿದ್ದ ಕೊಳವೆ ಬಾವಿ ಕೂಡಾ ಬತ್ತಿ ಹೋಗಿದೆ. ಅದನ್ನು ದುರಸ್ತಿ ಮಾಡಿ ಅಥವಾ ನೂತನ ಕೊಳವೆ ಬಾವಿ ಕೊರೆಸಿಕೊಡಿ ಎಂದು ಇಲ್ಲಿನ ಶಾಲಾಭಿವೃದ್ಧಿ ಸಮಿತಿಯವರು ಕ್ಷೇತ್ರ ಶಿಕ್ಷಣಾಧಿಕಾರಿಯವರ ಮುಖಾಂತರ ಜಿಲ್ಲಾ ಪಂಚಾಯತ್‌ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಎರಡೆರಡು ಬಾರಿ ಮನವಿ ಸಲ್ಲಿಸಿದ್ದಾರೆ. ಸ್ಥಳೀಯ ಗ್ರಾಮ ಪಂಚಾಯತ್‌ಗೂ ಮನವಿ ಮಾಡಿದ್ದಾರೆ. ಆದರೆ ಇದ್ಯಾವುದೂ ಈವರೆಗೆ ಫಲ ನೀಡಿಲ್ಲ.

ಜಿಲ್ಲಾಧಿಕಾರಿಗಳಿಗೆ ಮನವಿ
ವಿದ್ಯಾಭಿಮಾನಿಗಳು ಸ್ಥಳೀಯ ಸಾಮಾಜಿಕ ಮುಂದಾಳು ರಾಮಕೃಷ್ಣ ಹೊಳ್ಳಾರು ಅವರ ನೇತೃತ್ವದಲ್ಲಿ ತಾಲೂಕು ಪಂಚಾಯತ್‌ ಸದಸ್ಯೆ ಆಶಾ ಲಕ್ಷ್ಮಣ ಅವರನ್ನೊಳಗೊಂಡ ನಿಯೋಗವೊಂದು ಫೆ. 11ರಂದು ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ತಮ್ಮ ಅಹವಾಲು ಸಲ್ಲಿಸಿದ್ದಾರೆ. ಮನವಿಗೆ ಸ್ಪಂದಿಸಿ ಜಿಲ್ಲಾಧಿಕಾರಿಯವರು ಜಿಲ್ಲಾ ಪಂಚಾಯತ್‌ ಸಿಇಒ ಅವರಿಗೆ ದೂರವಾಣಿ ಕರೆ ಮಾಡಿ ಬತ್ತಿ ಹೋದ ಕೊಳವೆ ಬಾವಿಯನ್ನು ಕೂಡಲೇ ದುರಸ್ತಿ ಮಾಡಿ ವಿದ್ಯುತ್‌ ಪಂಪು ಅಳವಡಿಸಬೇಕು. ಮಾತ್ರವಲ್ಲ ಶಾಲಾ ವಠಾರದಲ್ಲಿ ನೂತನ ಕೊಳವೆ ಬಾವಿ ಕೊರೆದು ಶಾಶ್ವತವಾಗಿ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ಸೂಚನೆ ನೀಡಿದ್ದಾರೆ. ಆದರೆ ಆ ಬಳಿಕ ಯಾವ ಅಧಿಕಾರಿಗಳೂ ಈ ಬಗ್ಗೆ ಗಮನಹರಿಸಿಲ್ಲ. ಸಮಸ್ಯೆಗೆ ಪರಿಹಾರ ದೊರೆಯಲೇ ಇಲ್ಲ. ವಿದ್ಯಾರ್ಥಿಗಳು ಹಾಗೂ ಅಕ್ಷರ ದಾಸೋಹ ಸಿಬಂದಿಗಳು ಶಾಲೆಯ ಸಮೀಪದ ಖಾಸಗಿಯವರ ಕೊಳವೆ ಬಾವಿಯಿಂದ ನೀರು ಹೊತ್ತು ತರುತ್ತಿದ್ದಾರೆ. ಶೌಚಾಲಯ ನಿರ್ವಹಣೆಗೆ, ಕುಡಿಯುವುದಕ್ಕಾಗಿ ಅಡುಗೆ ಬೇಯಿಸಲು, ಪಾತ್ರೆ ತೊಳೆಯಲು ಎಲ್ಲದಕ್ಕೂ ಬೇರೆಡೆಯಿಂದ ನೀರು ಹೊತ್ತು ತರುವ ಅನಿವಾರ್ಯತೆ ಎದುರಾಗಿದೆ.

ಯಾವುದೇ ಕ್ರಮವಾಗಿಲ್ಲ
ಶಾಲೆಯಲ್ಲಿ ನೀರಿನ ಸಮಸ್ಯೆ ಉಂಟಾಗಿ ತಿಂಗಳಾಗುತ್ತಾ ಬಂದಿದೆ. ತೆರೆದ ಬಾವಿ ಕೂಡಾ ಬತ್ತಿ ಹೋಗಿದೆ. ಕೆಟ್ಟುಹೋದ ಕೊಳವೆ ಬಾವಿ ದುರಸ್ತಿ ಮಾಡಿಕೊಡಿ ಅಥವಾ ನೂತನ ಕೊಳವೆ ಬಾವಿ ಕೊರೆದು ಕುಡಿಯುವ ನೀರಿನ ಸಮಸ್ಯೆ ಪರಿಸಹರಿಸಬೇಕು ಎಂದು ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಲಾಗಿದೆ. ಜಿಲ್ಲಾಧಿಕಾರಿಯವರು ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರಿಗೆ ಸಮಸ್ಯೆ ಪರಿಹರಿಸಲು ಸೂಚನೆ ನೀಡಿದ್ದಾರೆ. ಆದರೆ ಈವರೆಗೆ ಕ್ರಮ ಕೈಗೊಂಡಿಲ್ಲ ಎಂದು ಮುಂದಾಳು ರಾಮಕೃಷ್ಣ ಹೊಳ್ಳಾರು ಹೇಳಿದ್ದಾರೆ.

ಅಧಿಕಾರಿಗಳೊಂದಿಗೆ ಚರ್ಚೆ
ಮೊಗೇರಡ್ಕ ಶಾಲಾ ನೀರಿನ ಸಮಸ್ಯೆ ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಕೂಡಲೇ ನೀರಿನ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾವುದು.
– ಪಿ.ಪಿ. ವರ್ಗೀಸ್‌
ಜಿ.ಪಂ. ಸದಸ್ಯರು, ಕಡಬ

ಡಿಸಿಗೆ ಪತ್ರ
ಮೊಗೇರಡ್ಕ ಶಾಲೆಯ ನೀರಿನ ಸಮಸ್ಯೆ ಬಗೆಹರಿಸುವಂತೆ ಜಿಲ್ಲಾಧಿಕಾರಿಗೆ ಪಂಚಾಯತ್‌ನಿಂದ ಪತ್ರ ಬರೆಯಲಾಗಿದೆ. ಶಾಸಕರಿಗೂ ಮನವಿ ಸಲ್ಲಿಸಲಾಗಿದೆ. ಸಮಸ್ಯೆ ಬಗೆ ಹರಿಸಲು ಅನುದಾನ ನೀಡುವಂತೆ ಸಂಬಂಧ ಪಟ್ಟವರಿಗೆ ಒತ್ತಡ ಹೇರಲಾಗುವುದು.
-ಅಜಿತ್‌ ಎಸ್‌.
ಅಧ್ಯಕ್ಷರು, ಕೊಂಬಾರು ಗ್ರಾ.ಪಂ

ಟಾಪ್ ನ್ಯೂಸ್

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.