ಸಾಮಾಜಿಕ ಮಾಧ್ಯಮಗಳ ನಿಯಂತ್ರಣ: ಹೈ ನೋಟಿಸ್
Team Udayavani, Feb 27, 2019, 6:00 AM IST
ಬೆಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರಗೊಳ್ಳುವ ಚಲನಚಿತ್ರ, ಧಾರಾವಾಹಿ, ಕಿರುಚಿತ್ರ ಮತ್ತಿತರ ಮಲ್ಟಿ ಮೀಡಿಯಾ ವಿಡಿಯೋಗಳನ್ನು ನಿಯಂತ್ರಿಸಲು ಸೂಕ್ತ ಕಾನೂನು ರೂಪಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿಗೊಳಿಸಿದೆ.
ಈ ಸಂಬಂಧ ಬೆಂಗಳೂರಿನ ಎಚ್ಎಎಲ್ ನಿವಾಸಿ ಪದ್ಮನಾಭ ಶಂಕರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಹಾಗೂ ನ್ಯಾ. ಪಿ.ಎಸ್. ದಿನೇಶ್ಕುಮಾರ್ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಈ ಸಂದರ್ಭದಲ್ಲಿ ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿರುವ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಸೇರಿದಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ, ರಾಜ್ಯ ಮಾಹಿತಿ ತಂತ್ರಜ್ಞಾನ ಇಲಾಖೆ, ನೆಟ್ಫ್ಲಿಕ್ಸ್ ಎಂಟರ್ಟೇನ್ಮೆಂಟ್ ಸರ್ವೀಸಸ್,
ಯೂಟ್ಯೂಬ್ ಗೂಗಲ್ ಇಂಡಿಯಾ ಪ್ರವೈಟ್ ಲಿಮಿಟೆಡ್, ಹಾಟ್ ಸ್ಟಾರ್ ಇಂಡಿಯಾ, ಅಮೆಜಾನ್ ಪ್ರೈಮ್, ಅಮೇಜಾನ್ ಡೆವಲಪ್ಮೆಂಟ್ ಸೆಂಟರ್ (ಇಂಡಿಯಾ) ಪ್ರೈವೆಟ್ ಲಿಮಿಟೆಡ್, ಆಲ್ಟ್ ಡಿಜಿಟಲ್ ಮೀಡಿಯಾ ಎಂಟರ್ಟೈನ್ಮೆಂಟ್ ಲಿಮಿಟೆಡ್ಗೆ ನೋಟಿಸ್ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.