ಗಾಳಿ ಸುದ್ದಿಯಿಂದ ದೂರವಿರಿ : ಕಾಶ್ಮೀರ ಪ್ರಜೆಗಳಿಗೆ ಮನವಿ, ಕಟ್ಟೆಚ್ಚರ
Team Udayavani, Feb 27, 2019, 1:23 PM IST
ಜಮ್ಮು: ಭಾರತೀಯ ವಾಯುಪಡೆ ಬಾಲ್ಕೋಟ್ನಲ್ಲಿ ಜೈಶ್ ಉಗ್ರರನ್ನು ನಾಶಗೈದ ಬಳಿಕ ಪಾಕಿಸ್ಥಾನದೊಂದಿಗೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಕಣಿವೆ ರಾಜ್ಯ ಕಾಶ್ಮೀರದಲ್ಲೂ ಆತಂಕಕಾರಿ ಸ್ಥಿತಿ ನಿರ್ಮಾಣವಾಗಿದ್ದು ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ. ಸಾರ್ವಜನಿಕರು ಸಾಮಾಜಿಕ ತಾಣಗಳಲ್ಲಿ ಬರುವ ಗಾಳಿ ಸುದ್ದಿಗಳಿಂದ ಗೊಂದಲಕ್ಕೆ ಗುರಿಯಾಗಬಾರದು ಎಂದು ಪೊಲೀಸರು ಮನವಿ ಮಾಡಿದ್ದಾರೆ.
ಗಾಳಿ ಸುದ್ದಿಗಳಿಂದ ಸಾರ್ವಜನಿಕರು ದೂರ ಇರಿ. ಯಾವುದೇ ಕ್ಷಣದಲ್ಲಿ ನಾವು ನೆರವು ನೀಡುತ್ತೇವೆ ಎಂದು ಪೊಲೀಸರು ಟ್ವೀಟ್ ಮೂಲಕ ತಿಳಿಸಿದ್ದಾರೆ. ಸಾರ್ವಜನಿಕರಿಗಾಗಿ ತುರ್ತು ಸಹಾಯವಾಣಿಯನ್ನೂ ತೆರೆಯಲಾಗಿದೆ. 100 ಅಥವಾ 01942451515 ಕರೆ ಮಾಡಿ ತಿಳಿಸಲು ಮನವಿ ಮಾಡಿದ್ದಾರೆ.
ಗಾಳಿ ಸುದ್ದಿ ಹಬ್ಬಿಸಿ ಶಾಂತಿ ಕದಡಿಸಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಕೆಲವರು ಸುಳ್ಳು ಸುದ್ದಿಗಳನ್ನು ಹಬ್ಬಿಸುವಲ್ಲಿ ನಿರತವಾಗಿದ್ದು, ಬಂದ್ ಕರೆ , ಕರ್ಫ್ಯೂ ಕುರಿತಾಗಿ ಸುದ್ದಿ ಹಬ್ಬಿಸಿ ಗೊಂದಲ ನಿರ್ಮಾಣ ಮಾಡಿದ ಬೆನ್ನಲ್ಲೇ ಪೊಲೀಸರು ಈ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
MUST WATCH
ಹೊಸ ಸೇರ್ಪಡೆ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ
Udupi: ಸಿಎನ್ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.