ಮೋದಿ ವಿಡಿಯೋ ಸಂವಾದ ಇಂದು
Team Udayavani, Feb 28, 2019, 1:32 AM IST
ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಬಲಪಡಿಸಲು ಬಿಜೆಪಿ ರೂಪಿಸಿರುವ ಕಾರ್ಯಕ್ರಮದಲ್ಲಿ ಒಂದಾದ “ಮೇರಾ ಬೂತ್ ಸಬ್‌ಸೆ ಮಜಬೂತ್’ಕಾರ್ಯಕ್ರಮದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ಏಕಕಾಲಕ್ಕೆ ದೇಶಾದ್ಯಂತ 15,000 ಕಡೆಗಳಲ್ಲಿ ಒಟ್ಟುಗೂಡಿದ ಕಾರ್ಯಕರ್ತರೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.
ದೇಶಾದ್ಯಂತ 4000ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಕನಿಷ್ಠ ಒಂದು ಕಾರ್ಯಕ್ರಮ ಹಾಗೂ ಪಕ್ಷ ಸದೃಢವಾಗಿರುವ ಕಡೆಗಳಲ್ಲಿ ಒಂದಕ್ಕಿಂತ ಹೆಚ್ಚು ಕಾರ್ಯಕ್ರಮಗಳನ್ನು ಗುರುವಾರ ಆಯೋಜಿಸಲಾಗಿದೆ. ದೇಶದಲ್ಲಿ ಒಟ್ಟು 15,000 ಸ್ಥಳಗಳಲ್ಲಿ ವಿಡಿಯೋ ಕಾನ್ಫರೆನ್ಸ್‌ಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ಆಯ್ದ ಕೆಲವು ಕ್ಷೇತ್ರಗಳ ಕಾರ್ಯಕರ್ತರೊಂದಿಗೆ ಮೋದಿಯವರು ಸಂವಾದ ನಡೆಸಲಿದ್ದಾರೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ 300ಕ್ಕೂ ಹೆಚ್ಚು ಕಾರ್ಯಕ್ರಮ ಆಯೋಜನೆಯಾಗಿದೆ. ಎರಡೂವರೆ ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ವಿಧಾನಸಭಾ ಕ್ಷೇತ್ರಗಳಲ್ಲಿ 1000ವರೆಗೆ, ಜಿಲ್ಲಾ ಕೇಂದ್ರಗಳಲ್ಲಿ ಸಾವಿರಕ್ಕಿಂತ ಹೆಚ್ಚು ಹಾಗೂ ಮಹಾನಗರದಲ್ಲಿ 2000ಕ್ಕಿಂತ ಹೆಚ್ಚು ಕಾರ್ಯಕರ್ತರನ್ನು ಒಟ್ಟುಗೂಡಿಸುವಂತೆ ಪಕ್ಷದಿಂದ ಸೂಚನೆ ನೀಡಲಾಗಿದೆ ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.