ರೈಲಿನಲ್ಲಿ ಗಾಂಜಾ ಸಾಗಣೆ: ಮಾರಾಟಗಾರನ ಬಂಧನ
Team Udayavani, Feb 28, 2019, 5:44 AM IST
ಬೆಂಗಳೂರು: ರೈಲಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಕೇರಳ ಮೂಲದ ಆರೋಪಿಯನ್ನು ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.ಕೇರಳದ ಕಾಸರಗೊಡು ಜಿಲ್ಲೆಯ ಇಕ್ಬಾಲ್ ಅಲಿಯಾಸ್ ಇಕ್ಕು (22) ಬಂಧಿತ. ಆತನಿಂದ 10 ಲಕ್ಷ ರೂ. ಮೌಲ್ಯದ 20 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ.ಆರೇಳು ವರ್ಷಗಳಿಂದ ಮಾದಕ ವಸ್ತು ಮಾರಾಟ ದಂಧೆಯಲ್ಲಿ ತೊಡಗಿರುವ ಇಕ್ಬಾಲ್, ಆಂಧ್ರ ಪ್ರದೇಶದ ಮಧ್ಯವರ್ತಿಯೊಬ್ಬನಿಂದ ಗಾಂಜಾ ಖರೀದಿಸುತ್ತಿದ್ದ.
ನಂತರ ಬಾಣಸವಾಡಿಯ ರೈಲು ನಿಲ್ದಾಣದಿಂದ ಕಣ್ಣೂರು ಎಕ್ಸ್‌ಪ್ರೆಸ್ ರೈಲು ಮೂಲಕ ಕೇರಳಕ್ಕೆ ಕೊಂಡೊಯ್ಯುತ್ತಿದ್ದ. ಅನಂತರ ಸಣ್ಣ-ಸಣ್ಣ ಪ್ಯಾಕೆಟ್‌ಗಳನ್ನಾಗಿ ಮಾಡಿ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಎಂದು ರೈಲ್ವೆ ಪೊಲೀಸರು ಹೇಳಿದರು.ಇತ್ತೀಚೆಗೆ ಕಣ್ಣೂರು ಎಕ್ಸ್‌ಪ್ರೆಸ್ ರೈಲು ಮೂಲಕ ಕೇರಳಕ್ಕೆ ಗಾಂಜಾ ಸಾಗಿಸುತ್ತಿರುವ ಬಗ್ಗೆ ದೊರೆತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ರೈಲ್ವೆ ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.