BSYಗೆ ಮುಳುವಾಗುತ್ತಾ 22 ಸೀಟಿನ ಹೇಳಿಕೆ?
Team Udayavani, Feb 28, 2019, 7:54 AM IST
ಬೆಂಗಳೂರು: ಒಂದು ಕಡೆಯಿಂದ ಪುಲ್ವಾಮ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಪಡೆಯು ಪಾಕ್ ನೆಲದಲ್ಲಿರುವ ಉಗ್ರ ಶಿಬಿರಗಳನ್ನು ನಾಶ ಮಾಡುವ ಮೂಲಕ ದೇಶವಾಸಿಗಳ ಪ್ರಶಂಸೆಗೆ ಕಾರಣವಾಗಿದೆ. ಆದರೆ ಇನ್ನೊಂದು ಕಡೆ ಇದೇ ವಿಷಯವನ್ನು ನಮ್ಮ ರಾಜಕೀಯ ಪಕ್ಷಗಳು ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದೆ. ಇದಕ್ಕೆ ಪೂರಕವೆಂಬಂತೆ ಮಾಜೀ ಮುಖ್ಯಮಂತ್ರಿ ಮತ್ತು ಕರ್ನಾಟಕ ರಾಜ್ಯ ಬಿ.ಜೆ.ಪಿ. ಅಧ್ಯಕ್ಷರಾಗಿರುವ ಬಿ.ಎಸ್. ಯಡಿಯೂರಪ್ಪ ಅವರು ಮಂಗಳವಾರ ಕೊಟ್ಟಿರುವ ಒಂದು ಹೇಳಿಕೆ ಇದೀಗ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ.
‘ಉಗ್ರ ಶಿಬಿರಗಳ ಮೇಲೆ ನಮ್ಮ ಸೇನೆ ದಾಳಿ ಮಾಡಿದ ಬಳಿಕ ಇದೀಗ ದೇಶದಲ್ಲಿ ನರೇಂದ್ರ ಮೋದಿ ಅವರ ಅಲೆ ಇದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ನಾವು 22 ಸೀಟು ಗೆಲ್ಲಲು ಇದು ನೆರವಾಗಲಿದೆ’ ಎಂಬ ಅರ್ಥದಲ್ಲಿ ಆಡಿರುವ ಮಾತು ಇದೀಗ ಅವರಿಗೆ ಮುಳುವಾಗುವ ಸಾಧ್ಯತೆ ಕಂಡುಬರುತ್ತಿದೆ.
ಒಂದು ಕಡೆ ನರೇಂದ್ರ ಮೋದಿ ಅವರು ‘ನಮ್ಮ ಸೇನೆ ಹಾಗೂ ಸೈನಿಕರ ವಿಚಾರದಲ್ಲಿ ಯಾರೂ ರಾಜಕೀಯ ಮಾಡುವುದು ಬೇಡ ; ನಾವೂ ಸಹ ಈ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ’ ಎಂದು ಪದೇಪದೇ ಹೇಳುತ್ತಿದ್ದರೂ ಬಿ.ಎಸ್.ವೈ. ಸೇರಿದಂತೆ ಬಿ.ಜೆ.ಪಿ.ಯ ಹಲವು ನಾಯಕರು ಈ ವಿಷಯವನ್ನು ರಾಜಕೀಯ ಲಾಭಕ್ಕೆ ಬಳಸುತ್ತಿರುವ ಅಂಶ ಸ್ಪಷ್ಟವಾಗುತ್ತಿದೆ. ಈ ವಿಷಯ ಇದೀಗ ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕ ವಲಯದಲ್ಲಿ ಚರ್ಚೆಯ ವಿಷಯವಾಗಿದೆ.
‘ನಮ್ಮ ಯೋಧರು ಗಡಿಯಲ್ಲಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಪಾಕಿಸ್ಥಾನಕ್ಕೆ ಪ್ರತ್ಯುತ್ತರ ನೀಡುತ್ತಿದ್ದಾರೆ. ಆದರೆ ಈ ಬಿ.ಜೆ.ಪಿ.ಯವರು ತಾವೇ ಗಡಿಯಲ್ಲಿ ಕಾದಾಡಿ ದೇಶವನ್ನು ಕಾಪಾಡುತ್ತಿರುವ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಇದು ನಾಚಿಕೆಗೇಡಿನ ವಿಚಾರ’ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ.
.@BSYBJP ji, I beg to differ. We stand as one nation, action taken by our government is to safeguard our nation & ensure safety of our citizens, not to win a few extra seats. https://t.co/V06LBMAJH3
This speech by Atal ji highlights our position:https://t.co/UyhobIpAny
— Vijay Kumar Singh (@Gen_VKSingh) February 28, 2019
ಸೇನಾ ವಿಚಾರವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವ ರೀತಿಯಲ್ಲಿ ಬಿ.ಎಸ್.ವೈ. ನೀಡಿರುವ ಹೇಳಿಕೆಗೆ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗಿದೆ. ನಿವೃತ್ತ ಭೂ ಸೇನಾ ಮುಖ್ಯಸ್ಥ ಮತ್ತು ವಿದೇಶಾಂಗ ವ್ಯವಹಾರಗಳ ರಾಜ್ಯಸಚಿವರಾಗಿರುವ ಜನರಲ್ ವಿ.ಕೆ.ಸಿಂಗ್ ಅವರು ಸೇನಾ ಕಾರ್ಯಾಚರಣೆಯಂತಹ ಸೂಕ್ಷ್ಮ ವಿಚಾರಗಳನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳದಂತೆ ಟ್ವೀಟ್ ಮೂಲಕ ಬಿ.ಎಸ್.ವೈ. ಅವರಿಗೆ ಕಿವಿಮಾತು ಹೇಳಿದ್ದಾರೆ. ‘ಯಡಿಯೂರಪ್ಪನವರೇ ನಾನು ನಿಮ್ಮಲ್ಲಿ ಬೇಡಿಕೊಳ್ಳುತ್ತಿದ್ದೇನೆ ದಯವಿಟ್ಟು ಇಂತಹ ಹೇಳಿಕೆಗಳಿಂದ ದೂರವಿರಿ. ನಾವೀಗ ಒಂದಾಗಿದ್ದೇವೆ. ಕೇಂದ್ರ ಸರಕಾರವು ಉಗ್ರ ನಿಗ್ರಹ ಸೇನಾ ಕಾರ್ಯಾಚರಣೆಯನ್ನು ನಡೆಸಿದ್ದು ನಮ್ಮ ದೇಶವನ್ನು ಕಾಪಾಡಲು ಹಾಗೂ ನಮ್ಮ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಲೇ ಹೊರತು ಹೆಚ್ಚಿನ ಸೀಟುಗಳನ್ನು ಗೆಲ್ಲಲು ಅಲ್ಲ’ ಎಂದವರು ಯಡಿಯೂರಪ್ಪನವರನ್ನು ನಯವಾಗಿ ತಿವಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.