ಫ್ಲೋರೊಸಿಸ್ ತಡೆಗೆ ಅರಿವು ಅಗತ್ಯ
Team Udayavani, Feb 28, 2019, 10:19 AM IST
ಚಿಕ್ಕಬಳ್ಳಾಪುರ: ಜಿಲ್ಲೆಯ ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಸ್ಥಾಪಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿನ ನೀರನ್ನು ಸಾರ್ವಜನಿಕರು ಕುಡಿಯಲಿಕ್ಕೆ ಮಾತ್ರವಲ್ಲದೇ ಮನೆಗಳಲ್ಲಿ ತಯಾರಿಸುವ ಅಡುಗೆಗೂ ಶುದ್ಧ ನೀರು ಬಳಕೆ ಮಾಡುವ ಮೂಲಕ ಫ್ಲೋರೊಸಿಸ್ ತಡೆಗೆ ಅರಿವು ಮೂಡಿಸಬೇಕಿದೆ ಎಂದು ಜಿಪಂ ಅಧ್ಯಕ್ಷ ಎಚ್.ವಿ.ಮಂಜುನಾಥ ತಿಳಿಸಿದರು.
ನಗರದ ತಾಪಂ ಸಭಾಂಗಣದಲ್ಲಿ ಬುಧವಾರ ಜಿಪಂ, ಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಪುಣ್ಯಕೋಟಿ ಸಮಗ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆ ತುಮಕೂರು ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ನೀರು ಮತ್ತು ನೈರ್ಮಲ್ಯ ಕುರಿತಾದ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಳವಳಕಾರಿ ಸಂಗತಿ: ಸಾರ್ವಜನಿಕರಿಗೆ ಆರೋಗ್ಯದ ದೃಷ್ಟಿಯಿಂದ ಶುದ್ಧ ನೀರು ಒದಗಿಸು ವುದು ಸರ್ಕಾರದ ಆದ್ಯ ಕರ್ತವ್ಯ ವಾಗಿದ್ದು, ಜಿಲ್ಲೆಯ ಮಟ್ಟಿಗೆ ಶುದ್ಧ ಕುಡಿಯುವ ನೀರು ಸಿಗುವುದೇ ಅಪರೂಪ ವಾಗಿದೆ. ಈಗಾಗಲೇ ಜಿಲ್ಲೆ ಯಲ್ಲಿ ಅಂತರ್ಜಲ ಅತಿಯಾದ ಬಳಕೆಯಿಂದ ನೀರಿನಲ್ಲಿ ಅಪಾಯಕಾರಿ ಲವಣಾಂಶಗಳ ಹೆಚ್ಚಳದಿಂದ ಫ್ಲೋರೈಡ್ ಅಂಶ ಅಧಿಕವಾಗಿ ಜಿಲ್ಲೆಯ ಬಾಗೇಪಲ್ಲಿ, ಗುಡಿ ಬಂಡೆ, ಗೌರಿಬಿದನೂರು ತಾಲೂಕುಗಳಲ್ಲಿ ಫ್ಲೋರೊಸಿಸ್ ಕಾಯಿಲೆ ವಿಪರೀತವಾಗಿ ಕಾಣಿಸಿಕೊಳ್ಳುತ್ತಿರುವುದು ಕಳವಳಕಾರಿ ಸಂಗತಿ ಎಂದರು.
ಅರಿವು ಮೂಡಿಸಲು ಸಲಹೆ: ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಸಾರ್ವಜನಿಕರು ಕುಡಿಯುವುದಕ್ಕೆ ಮಾತ್ರ ಶುದ್ಧ ನೀರು ಬಳಸುವುದರ ಜೊತೆಗೆ ಅಡುಗೆ ತಯಾರಿಸಲು ಶುದ್ಧ ನೀರನ್ನು ಬಳಸುವುದರಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಡೆಯಬಹುದು. ಶುದ್ಧ ಕುಡಿಯುವ
ನೀರಿನ ಘಟಕಗಳ ನೀರನ್ನು ಅಡುಗೆಗೆ ಬಳಸುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಅಧಿಕಾರಿಗಳು ಕ್ರಮ ವಹಿಸಬೇಕೆಂದ ಸಲಹೆ ನೀಡಿದರು.
ನಿಗಾ ವಹಿಸಬೇಕು: ಸೇವನೆ ಮಾಡುವ ಊಟಕ್ಕಿಂತ ಅರ್ಧ ಕಾಯಿಲೆಗಳು ಮನುಷ್ಯನಿಗೆ ನೀರಿನಿಂದ ಬರುತ್ತಿವೆ. ಶುದ್ಧ ಕುಡಿಯುವ ನೀರು ಸೇವನೆ ಆರೋಗ್ಯದ ದೃಷ್ಟಿಯಿಂದ ಮುಖ್ಯವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಪೈಪ್‌ಗ್ಳು ಚರಂಡಿಗಳಲ್ಲಿ ಹಾದು ಹೋಗುವುದರಿಂದ ಶುದ್ಧ
ನೀರಿಗೂ ಕಲುಷಿತ ನೀರು ಸೇರಿ ಕೊಳ್ಳುವ ಸಾಧ್ಯತೆಯು ಇರುತ್ತದೆ. ಗ್ರಾಮೀಣ ಹಾಗೂ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗಳ ಮೇಲೆ ಗುರುತ್ತರವಾದ ಜವಾಬ್ದಾರಿ ಇದ್ದು, ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಂಪರ್ಕಗಳ ಬಗ್ಗೆ ನಿಗಾವಹಿಸಬೇಕೆಂದರು.
ತಾಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಂ. ರಾಮುಸ್ವಾಮಿ, ಸ್ಥಾಯಿ ಸಮಿತಿ ಅಧ್ಯಕ್ಷ ತಿರುಮಳಪ್ಪ, ಜಿಪಂ ಉಪ ಕಾರ್ಯದರ್ಶಿ ಟಿ.ಎಂ.ಶಶಿಧರ್, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಡಾ.ನಾಗೇಶ್ , ತಾಪಂ ಇಒ ಕೆ.ಪಿ.ಸಂಜೀವಪ್ಪ, ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿ ಯಂತರರಾದ ಶಿವಕುಮಾರ್ ಲೋಕೂರ್, ಜಿಲ್ಲಾ ಪ್ಲೋರೋಸಿಸ್ ಸಮಾಲೋಕರಾದ ವಿನೋದ್ ಕುಮಾರ್, ಜಿಲ್ಲಾ ಪರಿಸರ ನಿಯಂತ್ರಣಾಧಿಕಾರಿ ಎಸ್.ಮಧುಸೂದನ್ ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.
ನೀರಿನ ನೈರ್ಮಲ್ಯದ ಕುರಿತು ಅರಿವು ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಜಿಲ್ಲೆಯ ತಾಪಂ ಇಒಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಹಾಯಕ ಕೃಷಿ ಅಧಿಕಾರಿಗಳು, ತೋಟಗಾರಿಕಾ ಅಧಿಕಾರಿಗಳು ಹಾಗೂ ತಾಲೂಕು ವೈದ್ಯಾಧಿಕಾರಿಗಳು ಭಾಗವಹಿಸಿದ್ದರು. ತುಮಕೂರಿನ ಪುಣ್ಯಕೋಟಿ ಸಮಗ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಡಾ.ಸಿ.ಸಿ.ಪಾವಟೆ ರವರು ನೀರು ಹಾಗೂ ನೈರ್ಮಲ್ಯದ ಕುರಿತು ಉಪನ್ಯಾಸ ನೀಡಿದರು. ಮಧ್ಯಾಹ್ನ ಅಧಿಕಾರಿಗಳ ಹಾಗೂ ತಜ್ಞರು ಸಂವಾದ ನಡೆಸಿ ಗ್ರಾಮೀಣ ಪ್ರದೇಶದಲ್ಲಿ ನೀರು ಹಾಗೂ ನೈರ್ಮಲ್ಯ ಕಾಪಾಡಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.