ಜಿಲ್ಲೆಯ 20 ಆರೋಗ್ಯ ಕೇಂದ್ರಗಳಿಗೆ ಕಾಯಕಲ್ಪ ಪ್ರಶಸ್ತಿ
Team Udayavani, Feb 28, 2019, 10:38 AM IST
ಚಿಕ್ಕಬಳ್ಳಾಪುರ: ಕಾಯಕಲ್ಪ ಕಾರ್ಯಕ್ರಮದಡಿಯಲ್ಲಿ ಉತ್ತಮ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಆಸ್ಪತ್ರೆಗಳಿಗೆ ಕೇಂದ್ರ ಸರ್ಕಾರ ನೀಡುವ 2018-19ನೇ ಸಾಲಿಗೆ ಕಾಯಕಲ್ಪ ಪ್ರಶಸ್ತಿಗೆ ಚಿಕ್ಕಬಳ್ಳಾಪುರದ ಜಿಲ್ಲಾ ಆಸ್ಪತ್ರೆ ಸೇರಿ ಒಟ್ಟು 20 ಆರೋಗ್ಯ ಕೇಂದ್ರಗಳು ಜಿಲ್ಲೆಯಿಂದ ಆಯ್ಕೆಯಾಗಿವೆ.
ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ ಮಾತ್ರ ಉತ್ತಮ ಪ್ರಶಸ್ತಿ ಪಡೆದುಕೊಂಡಿದ್ದು, ಉಳಿದ ಆಸ್ಪತ್ರೆಗಳು ಸಮಾಧಾನಕರ ಪ್ರಶಸ್ತಿಗೆ ಆಯ್ಕೆಯಾಗಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆ ಪ್ರಧಾನ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ರಾಜ್ಯ ಮಟ್ಟದ ಪ್ರಶಸ್ತಿಯನ್ನು ಜಿಲ್ಲಾ ಆಸ್ಪತ್ರೆ ಚಿಕ್ಕಬಳ್ಳಾಪುರ, ಸಾರ್ವಜನಿಕ ಆಸ್ಪತ್ರೆ, ಚಿಂತಾಮಣಿ, ಸಾರ್ವಜನಿಕ ಆಸ್ಪತ್ರೆ ಬಾಗೇಪಲ್ಲಿ, ಸಮುದಾಯ ಆರೋಗ್ಯ ಕೇಂದ್ರ ಗೂಳೂರು, ಸಮುದಾಯ ಆರೋಗ್ಯ ಕೇಂದ್ರ ಬಟ್ಲಹಳ್ಳಿ ಪಡೆದುಕೊಂಡಿದೆ.
ಜಿಲ್ಲಾ ಮಟ್ಟದ ಪ್ರಶಸ್ತಿಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರ, ಮಂಡಿಕಲ್, ಜಂಗಮಕೋಟೆ, ದಿಬ್ಬೂರು, ಗೆದರೆ, ಯಗವಕೋಟೆ, ಕುರುಡಿ, ಇಡಗೂರು, ಕೆ.ಮುತ್ತುಕದಹಳ್ಳಿ, ನಗರಗೆರೆ, ಸಂತೇ ಕಲ್ಲಹಳ್ಳಿ, ಕುಂದಲಗುರ್ಕಿ, ಕುರುಬೂರು, ಈ ತಿಮ್ಮಸಂದ್ರ, ಹುದುಗೂರು ಪ್ರಾಥಮಿಕ ಆರೋಗ್ಯ
ಕೇಂದ್ರಗಳು ಪಡೆದುಕೊಂಡಿವೆ.
ಕಂದವಾರ ಉತ್ತಮ ಆರೋಗ್ಯ ಕೇಂದ್ರ: ಚಿಕ್ಕಬಳ್ಳಾಪುರ ನಗರದ ಕಂದವಾರ ಉತ್ತಮ ಆರೋಗ್ಯ ಕೇಂದ್ರ ಪ್ರಶಸ್ತಿ ಪಡೆದುಕೊಂಡಿದ್ದು, 2018-19ನೇ ಸಾಲಿನ ಕಾಯಕಲ್ಪ ಪ್ರಶಸ್ತಿಗೆ ಆಯ್ಕೆಯಾಗಿರುವ ಮೇಲ್ಕಂಡ ಆರೋಗ್ಯ ಕೇಂದ್ರಗಳ ಆಡಳಿತ ವೈದ್ಯಾಧಿಕಾರಿಗಳಿಗೆ ಮತ್ತು ಕ್ವಾಲಿಟಿ ಅಶ್ಯೂರೆನ್ಸ್ ತಂಡಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಿ.ಎಂ. ರವಿಶಂಕರ್, ಆರ್. ಸಿ.ಹೆಚ್ ಅಧಿಕಾರಿ ಡಾ. ಚನ್ನಕೇಶವರೆಡ್ಡಿ, ಅರವಳಿಕೆ ತಜ್ಞರು ಹಾಗೂ ಕ್ವಾಲಿಟಿ ಕೋ ಆರಿನೇಟರ್ ಡಾ. ಸಂತೋಷ್ ಬಾಬು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಪ್ರಶಸ್ತಿಗೆ ಆಯ್ಕೆಗೊಂಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೂಪಿಸಿದ ಆರೋಗ್ಯ ಕಾರ್ಯ ಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿರುವುದರ ಜೊತೆಗೆ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ವೈದ್ಯಕೀಯ ಸೇವೆಗ ಳನ್ನು ನೀಡಿ ರುವುದರಿಂದ ಈ ಆಸ್ಪತ್ರೆಗಳನ್ನು ರಾಜ್ಯದ ಮಟ್ಟದ ತಜ್ಞರ ಸಮಿತಿ ಕಾಯಕಲ್ಪ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎಂ.ರವಿಶಂಕರ್ ಉದಯವಾಣಿಗೆ ತಿಳಿಸಿದರು.
ಕಳೆದ ವರ್ಷ ಜಿಲ್ಲೆಯಲ್ಲಿ ಕೇವಲ 7 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮಾತ್ರ ಕಾಯಕಲ್ಪ ಪ್ರಶಸ್ತಿಗೆ ಆಯ್ಕೆಗೊಂಡಿದ್ದವು. ಈ ವರ್ಷ ಜಿಲ್ಲೆಯಲ್ಲಿ ಜಿಲ್ಲಾಸ್ಪತ್ರೆ ಸೇರಿ ಒಟ್ಟು 20 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಆಯ್ಕೆಗೊಂಡಿರುವುದು ಉತ್ತಮ ಸಾಧನೆ. ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಜನತೆಗೆ ಉತ್ತಮ ವೈದ್ಯಕೀಯ ಸೌಲಭ್ಯಗಳು ಸಿಗುತ್ತಿರುವುದೇ ಇದಕ್ಕೆ ಸಾಕ್ಷಿ.
ಡಾ.ಬಿ.ಎಂ.ರವಿಶಂಕರ್, ಜಿಲ್ಲಾ ಆರೋಗ್ಯಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.