ಅರಣ್ಯವಾಸಿಗಳ ತೆರವು ಆದೇಶಕ್ಕೆ ತಡೆ
Team Udayavani, Mar 1, 2019, 1:05 AM IST
ಹೊಸದಿಲ್ಲಿ: ಅರಣ್ಯವಾಸಿಗಳನ್ನು ತೆರವುಗೊಳಿಸುವುದಕ್ಕೆ ಸಂಬಂಧಿಸಿದಂತೆ ಫೆ. 13 ರಂದು ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ಗುರುವಾರ ತಡೆ ನೀಡಿದೆ. ಈ ಆದೇಶದಿಂದಾಗಿ 21 ರಾಜ್ಯಗಳ 11.8ಲಕ್ಷ ಜನರಿಗೆ ಸ್ಥಳಾಂತರ ಆತಂಕ ಮೂಡಿತ್ತು. ನ್ಯಾಯಮೂರ್ತಿ ಅರುಣ್ ಮಿಶ್ರಾ ಮತ್ತು ನವೀನ್ ಸಿನ್ಹಾ ಪೀಠ ಗುರುವಾರ ಈ ಆದೇಶವನ್ನು ನೀಡಿದ್ದು, ಅರಣ್ಯವಾಸಿಗಳು ಸಲ್ಲಿಸಿದ ಕ್ಲೇಮ್ಗಳನ್ನು ರಾಜ್ಯ ಸರಕಾರ ತಿರಸ್ಕರಿಸಿದ ಪ್ರಕ್ರಿಯೆಯ ವಿವರ ನೀಡುವಂತೆ ಆದೇಶಿಸಿದೆ. ಅಲ್ಲದೆ, ಜುಲೈ 10ಕ್ಕೆ ವಿಚಾರಣೆಯನ್ನು ನಿಗದಿಸಿದೆ.
ತೀರ್ಪಿಗೆ ಸಂಬಂಧಿಸಿದಂತೆ ದೇಶಾದ್ಯಂತ ಅರಣ್ಯವಾಸಿಗಳಲ್ಲಿ ಆತಂಕ ಮನೆ ಮಾಡುತ್ತಿ ದ್ದಂತೆಯೇ, ತೀರ್ಪು ಮರುಪರಿಶೀಲಿ ಸುವಂತೆ ಸುಪ್ರೀಂಕೋರ್ಟ್ಗೆ ಬುಧವಾರ ಕೇಂದ್ರ ಸರಕಾರ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಪರಿಗಣಿಸಿದ ಸುಪ್ರೀಂಕೋರ್ಟ್, ತೀರ್ಪು ಮರುಪರಿಶೀಲಿಸಲು ಒಪ್ಪಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ವಿಚಾರಣೆ ನಡೆಸಿದ ಕೋರ್ಟ್, ಈ ಹಿಂದೆ ಅರಣ್ಯವಾಸಿಗಳನ್ನು ಸ್ಥಳಾಂತರಗೊಳಿಸುವಾಗ ತೆಗೆದುಕೊಂಡ ವಿವಿಧ ಕ್ರಮಗಳ ವಿವರ ನೀಡುವಂತೆಯೂ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.