ಸಂಸ್ಕೃತಿ ಅಧ್ಯಯನಕ್ಕೆ ನಾಂದಿ: ಖಾದರ್
Team Udayavani, Mar 1, 2019, 1:00 AM IST
ಉಳ್ಳಾಲ: ಕರಾವಳಿಯಲ್ಲಿ ಬಳಕೆಯಲ್ಲಿರುವ ತುಳು, ಬ್ಯಾರಿ, ಕೊಂಕಣಿ ಭಾಷೆಗಳಿಗೆ ಲಿಪಿ ಇಲ್ಲದಿದ್ದರೂ ಆ ಸಮುದಾಯದ ಜನರ ಸಂಸ್ಕೃತಿ, ಆಚರಣೆ ಆಚಾರ ವಿಚಾರಗಳಿಂದ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯವಾಗಿ ಗಮನ ಸೆಳೆದಿವೆ. ವಿಶ್ವವಿದ್ಯಾನಿಲಯದಲ್ಲಿ ಸ್ಥಾಪನೆಗೊಂಡಿರುವ ಬ್ಯಾರಿ ಅಧ್ಯಯನ ಪೀಠದಿಂದ ಸಮುದಾಯದ ಸಂಸ್ಕೃತಿ ವಿಚಾರಗಳ ಅಧ್ಯಯನಕ್ಕೆ ನಾಂದಿಯಾಗಲಿ ಎಂದು ಸಚಿವ ಯು.ಟಿ. ಖಾದರ್ ಹೇಳಿದರು.
ವಿ.ವಿ.ಯ ಮಂಗಳಾ ಸಭಾಂಗಣದಲ್ಲಿ ಗುರುವಾರ ಬ್ಯಾರಿ ಅಧ್ಯಯನ ಪೀಠವನ್ನು ದಫ್ ಬಡಿದು ಉದ್ಘಾಟಿಸಿ ಅವರು ಮಾತನಾಡಿದರು.
ಶ್ರಮ ಸಂಸ್ಕೃತಿ
ಶ್ರಮ ಸಂಸ್ಕೃತಿಯೊಂದಿಗೆ ಬೆಳೆದು ಬಂದಿರುವ ಬ್ಯಾರಿಗಳ ಸಂಸ್ಕೃತಿ ವಿಶಿಷ್ಟವಾದುದು. ಜನರೊಂದಿಗೆ ಬೆರೆತು ಸಮಾಜಕ್ಕೆ ತನ್ನದೇ ಆದ ಕೊಡುಗೆ ನೀಡಿದೆ ಎಂದ ಅವರು ವಿ.ವಿ.ಯಲ್ಲಿ ಈಗಾಗಲೇ ತುಳು ಅಧ್ಯಯನ ಪೀಠ, ಕೊಡವ ಅಧ್ಯಯನ ಪೀಠ, ಕೊಂಕಣಿ ಪೀಠ ಸೇರಿದಂತೆ ಹಲವು ಪೀಠಗಳಿದ್ದು ಬ್ಯಾರಿ ಅಧ್ಯಯನ ಪೀಠ ಕೂಡ ಸ್ಥಾಪನೆಗೊಂಡು ಅಧ್ಯಯನದ ಅವಕಾಶಗಳು ಹೆಚ್ಚಿವೆ. ಮುಂದಿನ ದಿನಗಳಲ್ಲಿ ಎಲ್ಲ ಪೀಠಗಳು ಒಂದೇ ಸೂರಿನಡಿ ಬಂದು, ಒಂದೇ ರೀತಿಯ ಅನುದಾನ ಸಿಗುವಂತಾಗಲು ಈ ನಿಟ್ಟಿನಲ್ಲಿ ಪ್ರಯತ್ನಿಸೋಣ ಎಂದರು.
ವಿಶ್ವವಿದ್ಯಾನಿಲಯದ ಪ್ರಭಾರ ಕುಲಪತಿ ಪ್ರೊ| ಕಿಶೋರಿ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಬ್ಯಾರಿ ಸಾಹಿತ್ಯ ಅಕಾಡೆಮಿಯ ಕರಂಬಾರು ಮಹಮ್ಮದ್, ವಿಶ್ರಾಂತ ಪ್ರಾಧ್ಯಾಪಕ ಡಾ| ಸುರೇಂದ್ರ ರಾವ್, ಕರ್ನಾಟಕ ತುಳು ಮತ್ತು ಬ್ಯಾರಿ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಬಿ. ಚಂದ್ರಹಾಸ್ ರೈ, ಮಂಗಳೂರು ತಾ.ಪಂ. ಅಧ್ಯಕ್ಷ ಮಹಮ್ಮದ್ ಮೋನು, ಸಲಹಾ ಸಮಿತಿ ಸದಸ್ಯ ಇಬ್ರಾಹಿಂ ಕೋಡಿಜಾಲ್, ಕೊಣಾಜೆ ಗ್ರಾ.ಪಂ. ಅಧ್ಯಕ್ಷ ನಝರ್ ಷಾ ಪಟ್ಟೋರಿ, ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಬಿ.ಎ. ಮಹಮ್ಮದ್ ಹನೀಫ್, ಪೀಠಗಳ ಸಂಯೋಜಕ ಪ್ರಭಾಕರ ನೀರುಮಾರ್ಗ ಉಪಸ್ಥಿತರಿದ್ದರು.
ಬ್ಯಾರಿ ಅಧ್ಯಯನ ಪೀಠದ ಸಂಯೋಜಕರಾದ ಪ್ರೊ| ಇಸ್ಮಾಯಿಲ್ ಪ್ರಸ್ತಾವನೆಗೈದರು. ಕುಲಸಚಿವ ಪ್ರೊ| ಎ.ಎಂ. ಖಾನ್ ಸ್ವಾಗತಿಸಿದರು. ಪ್ರಾಧ್ಯಾಪಕ ಡಾ| ಧನಂಜಯ ಕುಂಬ್ಳೆ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.