ಕುಪ್ವಾರದಲ್ಲಿ ಸೇನೆ ಮತ್ತು ಉಗ್ರಗಾಮಿಗಳ ನಡುವೆ ಫೈರಿಂಗ್
Team Udayavani, Mar 1, 2019, 2:58 AM IST
ಶ್ರೀನಗರ: ಒಂದು ಕಡೆ ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಶಾಂತಿ ಸಂದೇಶದ ದ್ಯೋತಕವಾಗಿ ನಮ್ಮ ವಶದಲ್ಲಿರುವ ಭಾರತೀಯ ವಾಯುಪಡೆಯ ಪೈಲಟ್ ಅಭಿನಂದನ್ ಅವರನ್ನು ಭಾರತಕ್ಕೆ ವಾಪಾಸು ಕಳುಹಿಸುತ್ತಿರುವುದಾಗಿ ಪಾಕ್ ಸಂಸತ್ತಿನಲ್ಲಿ ಹೇಳಿಕೆ ನೀಡಿದರೆ, ಇತ್ತ ಭಾರತ – ಪಾಕ್ ಗಡಿಯಲ್ಲಿ ಉಗ್ರ ಚಟುವಟಿಕೆಗಳು ಅಬಾಧಿತವಾಗಿ ಮುಂದುವರೆದಿದೆ.
ಜಮ್ಮು ಕಾಶ್ಮೀರದ ಹಂದ್ವಾರ ಎಂಬಲ್ಲಿ ಶುಕ್ರವಾರ ಬೆಳಗ್ಗೆ ಭಾರತೀಯ ಸೇನೆ ಮತ್ತು ಉಗ್ರಗಾಮಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಪ್ರದೇಶದಲ್ಲಿ ಅಡಗಿಕೊಂಡಿದ್ದ ಮೂವರು ಉಗ್ರರನ್ನು ನಮ್ಮ ಸೇನೆ ಸುತ್ತುವರೆದಿದೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.
ಬುಧವಾರವಷ್ಟೇ ಶೋಫಿಯಾನ ಜಿಲ್ಲೆಯಲ್ಲಿ ಜೈಶ್ ಸಂಘಟನೆಯ ಇಬ್ಬರು ಉಗ್ರರನ್ನು ನಮ್ಮ ಸೇನೆ ಹೊಡೆದುರುಳಿಸಿತ್ತು. ಖಚಿತ ಮಾಹಿತಿಯ ಮೇರೆಗೆ ಈ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದ ನಮ್ಮ ಭದ್ರತಾ ಪಡೆಗಳು ಸುದೀರ್ಘ ಕಾರ್ಯಾಚರಣೆಯ ಬಳಿಕ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಸಫಲವಾಗಿರುವುದಾಗಿ ಕಾಶ್ಮೀರದ ಇನ್ ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಆಗಿರುವ ಎಸ್. ಪಿ. ಪಾಣಿ ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದವರು ತಿಳಿಸಿದರು. ಗುಂಡಿಗೆ ಬಲಿಯಾದ ಇಬ್ಬರು ಉಗ್ರರಲ್ಲಿ ಓರ್ವ ಪಾಕಿಸ್ಥಾನದವನಾಗಿದ್ದರೆ ಇನ್ನೋರ್ವ ಸ್ಥಳೀಯ ವ್ಯಕ್ತಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.