ಎಚ್‌1ಎನ್‌1 ಬಗ್ಗೆ ಎಚ್ಚರ ವಹಿಸಲು ಸೂಚನೆ


Team Udayavani, Mar 1, 2019, 6:10 AM IST

h1n1-echchara.jpg

ಬೆಂಗಳೂರು: ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಅಧಿಕ ಸಂಖ್ಯೆಯಲ್ಲಿ ಎಚ್‌-1, ಎನ್‌-1 ಪ್ರಕರಣಗಳು ಪತ್ತೆಯಾಗುತ್ತಿದ್ದು, ಸಾರ್ವಜನಿಕರು ಎಚ್ಚರ ವಹಿಸುವಂತೆ ಬೆಂಗಳೂರು ನಗರ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಗಳ ನಿಯಂತ್ರಣಾಧಿಕಾರಿ ಡಾ.ಟಿ.ಕೆ.ಸುನಂದಾ ಮನವಿ ಮಾಡಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವರಿಯಿಂದ ಫೆಬ್ರವರಿ ಅಂತ್ಯದವರೆಗೆ 39 ಎಚ್‌-1 ಎನ್‌-1 ಪ್ರಕರಣಗಳು ದಾಖಲಾಗಿದ್ದು, ಕಳೆದ ವರ್ಷ 64 ಪ್ರಕರಣಗಳು ಪತ್ತೆಯಾಗಿ, ನಾಲ್ವರು ಮೃತಪಟ್ಟಿದ್ದರು. ಪ್ರಸಕ್ತ ವರ್ಷ ಆರಂಭದಲ್ಲೇ ಸೋಂಕು ಪತ್ತೆಯಾಗಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಪಿಡಿಒಗಳಿಗೆ  ಸೂಚನೆ ನೀಡಲಾಗಿದೆ ಎಂದು ಹೇಳಿದರು.

ವಲಸಿಗರಿಂದ ಎಚ್‌1ಎನ್‌1: ನಗರಕ್ಕೆ ವಲಸೆ ಬಂದಿರುವವರಲ್ಲಿಯೇ ಅಧಿಕ ಸಂಖ್ಯೆಯಲ್ಲಿ ಎಚ್‌1ಎನ್‌1 ಪ್ರಕರಣ ಕಾಣಿಸಿಕೊಂಡಿವೆ. ಇದರ ಸೋಂಕು ಗಾಳಿಯಿಂದ ಹರಡಲಿದ್ದು 2ರಿಂದ 8 ಗಂಟೆಯ ಕಾಲ ವೈರಾಣು ಜೀವಂತವಾಗಿರುತ್ತವೆ. ರೋಗ ನಿಯಂತ್ರಕ್ಕೆ ಈಗಾಗಲೇ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜನರು ಭಯ ಪಡುವ ಅಗತ್ಯವಿಲ್ಲ ಎಂದರು.

ನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಸ್‌.ಪ್ರಕಾಶ್‌ ಮಾತನಾಡಿ, ಸೋಂಕು  ಪತ್ತೆಯಾದ ರೋಗಿಯ ಮನೆಯನ್ನು ಕೇಂದ್ರ ವಾಗಿಸಿಕೊಂಡು ಸುತ್ತ ಮುತ್ತಲ ಸುಮಾರು 150 ಮನೆಯ ನಿವಾಸಿಗಳನ್ನು ತಪಾಸಣೆಯ ಲಾರ್ವಾ ಸರ್ವೆ ಮಾಡಲಾಗುತ್ತಿದೆ. ನಗರದ 12 ಸರ್ಕಾರಿ ವೈದ್ಯಕೀಯ ಕಾಲೇಜು, ಖಾಸಗಿ ಕಾಲೇಜುಗಳು ಸೇರಿದಂತೆ ಒಟ್ಟು 1,658 ವೈದ್ಯರಿಗೆ ಈ ಕಾಯಿಲೆಗಳ ಬಗ್ಗೆ ಸಭೆಗಳ ಮೂಲಕ ಅರಿವು ಮೂಡಿಸಲಾಗಿದೆ ಎಂದು ಹೇಳಿದರು.

ಬೃಹತ್‌ ಆರೋಗ್ಯ ಮೇಳ: ಬಿಪಿಎಲ್‌ ಕಾರ್ಡುದಾರರಿಗೆ ಆರೋಗ್ಯ ಸೇವೆಗಳ ಬಗ್ಗೆ ಅರಿವು ಮೂಡಿಸಲು ಮಾರ್ಚ್‌ 3, 5 ಹಾಗೂ 7 ರಂದು ಬೃಹತ್‌ ಆರೋಗ್ಯ ಮೇಳವನ್ನು ಹಮ್ಮಿಕೊಳ್ಳಲಾಗಿದೆ.  ಬಸವನಗುಡಿ, ಸರ್‌ ಸಿ.ವಿ. ರಾಮನ್‌ ನಗರ ಹಾಗೂ ದಾಸರಹಳ್ಳಿಯಲ್ಲಿ ಆರೋಗ್ಯ ಮೇಳ ನಡೆಯಲಿದೆ ಎಂದರು.  ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಆರ್‌.ಸಿ.ಎಚ್‌ ಅಧಿಕಾರಿಗಳಾದ ಡಾ. ಮಹೇಶ್‌ ಉಪಸಿತ್ಥರಿದ್ದರು.

ಮಂಗನ ಜ್ವರ ಪತ್ತೆಯಾಗಿಲ್ಲ: ನಗರದಲ್ಲಿ ಮಂಗನ ಜ್ವರ ಪ್ರಕರಣ ಬೆಳಕಿಗೆ ಬಂದಿಲ್ಲ.ಆದರೆ ಆನೇಕಲ್‌ ತಾಲೂಕಿನ ದೊಮ್ಮಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 2 ಮಂಗಗಳು ಮರಣ ಹೊಂದಿದ್ದು ಹಿರಿಯ ಆರೋಗ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಮರಣೋತ್ತರ ಪರೀಕ್ಷೆ ಮಾಡಿ ಮಾದರಿಗಳನ್ನು ಪೂಣೆ ಪ್ರಯೋಗಾಲಕ್ಕೆ ಕಳುಹಿಸಿ ಕೊಡಲಾಗಿದೆ ಎಂದು ಆರೋಗ್ಯ ಅಧಿಕಾರಿ ಪ್ರಕಾಶ್‌ ಹೇಳಿದರು. ಈ ಸಂಬಂಧ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮನೆ ಮನೆಗೆ ಭೇಟಿ ಜನರಿಗೆ ತಿಳುವಳಿಕೆ ನೀಡುತ್ತಿದ್ದಾರೆ.ಅಲ್ಲದೆ ಜ್ವರ ಸಮೀಕ್ಷೆಯನ್ನು ಮುಂದುವರಿಸಿದ್ದಾರೆ ಎಂದು ತಿಳಿಸಿದರು.

ಟಾಪ್ ನ್ಯೂಸ್

police

Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್‌ ಸೋಮನ ವಿರುದ್ಧ ಕೇಸ್‌

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

1-lokk

Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Yakshagana

Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police

Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್‌ ಸೋಮನ ವಿರುದ್ಧ ಕೇಸ್‌

Lokayukta

Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

1-lokk

Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.