ವಿವಿಧ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ 


Team Udayavani, Mar 1, 2019, 7:12 AM IST

vivida.jpg

ಮಾಗಡಿ: ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಸಿಡಿಪಿಒ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾ ಸಂಘದ ಅಧ್ಯಕ್ಷೆ ಎಚ್‌. ಯಶೋಧಮ್ಮ ಮಾತನಾಡಿ, ಕಾರ್ಯಕರ್ತೆಯರಿಗೆ ಗೌರವ ಧನವನ್ನು ಶೀಘ್ರವಾಗಿ ಬಿಡುಗಡೆ ಮಾಡಬೇಕು.

ಬಾಲವಿಕಾಸ ಸಮಿತಿ ಪುನರ್‌ ರಚಿಸುವಲ್ಲಿ ಗ್ರಾಮ, ನಗರ ಪ್ರದೇಶಗಳಲ್ಲಿ ತಾಯಂದಿರ ಜೊತೆ ಖಾತೆ ತೆರೆಯಲು ಕಡ್ಡಾಯ ಮಾಡಿರುವುದನ್ನು ಕೂಡಲೇ ವಾಪಸ್ಸು ಪಡೆಯಬೇಕು. ಪ್ರತಿ ತಿಂಗಳು 5ನೇ ತಾರೀಕಿನೊಳಗೆ ಗೌರವ ಧನ ನೀಡಬೇಕು.

ಮಕ್ಕಳಿಗೆ ಮೊಟ್ಟೆ, ತರಕಾರಿ ಹಣ ನಿಲ್ಲಿಸಿರುವುದನ್ನು ಕೂಡಲೇ ಕೊಡಬೇಕು. ಕಾರ್ಯಕರ್ತೆಯರ ಖಾತೆಗೆ ಒಂದು ತಿಂಗಳ ಮುಂಚಿತವಾಗಿ ಹಣ ಹಾಕಬೇಕು. ಇಲ್ಲದಿದ್ದರೆ ಇಲಾಖೆಯವರೇ ಸರಬರಾಜು ಮಾಡಬೇಕು. ಕಾರ್ಯಕರ್ತೆಯರನ್ನು ಬಿಎಲ್‌ಒಗಳಿಂದ ವಜಾಗೊಳಿಸಿ ಅಂಗನವಾಡಿ ಕೆಲಸಕ್ಕೆ ಸೀಮಿತ ಮಾಡಬೇಕು. ಬೇರೆ ಇಲಾಖೆ ಕೆಲಸಗಳನ್ನು ಕಾರ್ಯಕರ್ತೆಯರಿಗೆ ವಹಿಸಬಾರದು ಎಂದು ಆಗ್ರಹಿಸಿದರು. 

ತಾಲೂಕಿನ 290 ಅಂಗನವಾಡಿಗಳ ಸುಮಾರು 400 ಕಾರ್ಯಕರ್ತೆಯರು ಮಾಗಡಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಶಿಶು ಅಭಿವೃದ್ಧಿ ಅಧಿಕಾರಿಗಳ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಿದ ನಂತರ ಸಿಡಿಪಿಒ ಭಾರತಿದೇವಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮೀನಮ್ಮ, ದಲಿತ ಮುಖಂಡ ಸಿ.ಜಯರಾಂ, ಕಾರ್ಯದರ್ಶಿ ಜಿ.ಸಿ.ಲಲಿತಾ, ಖಜಾಂಚಿ ಎ.ಎನ್‌.ಲಲಿತಾ, ಎಂ.ಹೇಮಾವತಿ, ಶ್ರೀದೇವಿ, ಅನ್ನಪೂರ್ಣಮ್ಮ, ವಿಜಯಾ, ಕಲ್ಪನಾ, ಶರಾವತಿ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

Forest

2 ವರ್ಷಗಳಲ್ಲಿ ಕರ್ನಾಟಕದಲ್ಲಿ 459 ಚ.ಕಿ.ಮೀ. ಅರಣ್ಯ ನಾಶ

congress

Ambedkar; ಅವಮಾನ ಖಂಡಿಸಿ ಕಾಂಗ್ರೆಸ್‌ ಆಂದೋಲನ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

suicide

Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು

hk-patil

C.T. Ravi ಗೈರು; ಸಾಹಿತ್ಯ ಕ್ಷೇತ್ರದಲ್ಲಿ ರಾಜಕೀಯ ಮಾಡಬಾರದು: ಎಚ್‌.ಕೆ.ಪಾಟೀಲ್‌

6

ಮಮ್ತಾಜ್‌ ಅಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ: ಜಾಮೀನು ವಿಚಾರಣೆ ಅರ್ಜಿ ಮುಂದೂಡಿಕೆ

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.