ಬೇಸಿಗೆಯಲ್ಲಿ ಕುಡಿವ ನೀರಿಗೆ ಸಮಸ್ಯೆಯಾಗದಿರಲಿ


Team Udayavani, Mar 1, 2019, 7:13 AM IST

besige.jpg

ಮಾಲೂರು: ಬೇಸಿಗೆಯಲ್ಲಿ ಪಟ್ಟಣದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ನಿರ್ಧರಿಸಲಾಯಿತು. ಪುರಸಭಾ ಅಡಳಿತದ ಅವಧಿ ಮಾ.9ಕ್ಕೆ ಪೂರ್ಣಗೊಳ್ಳಲಿದ್ದು, ಪಟ್ಟಣದ ಪುರಸಭಾ ಸಭಾಂಗಣದಲ್ಲಿ ಅಧ್ಯಕ್ಷ ಸಿ.ಪಿ.ನಾಗರಾಜು ಅಧ್ಯಕ್ಷತೆಯಲ್ಲಿ ಕೊನೆ ಸಾಮಾನ್ಯ ಸಭೆ ನಡೆಯಿತು.

ಕುಡಿಯುವ ನೀರು, ಬೀದಿ ದೀಪ, ಸ್ವತ್ಛತೆ ಹಾಗೂ ಅಗತ್ಯ ಸೌಲಭ್ಯಗಳ ಬಗ್ಗೆ ಚರ್ಚಿಸಲಾಯಿತು. ವಾರ್ಡ್‌ ನಂ.16ರ ಸದಸ್ಯೆ ಗುಲಾಬ್‌ ಜಾನ್‌ ಮಾತನಾಡಿ, ತಮ್ಮ ವಾರ್ಡ್‌ನಲ್ಲಿ ಸಮರ್ಪಕವಾಗಿ ಕುಡಿಯುವ ನೀರಿನ ಅನುಕೂಲ ಕಲ್ಪಿಸಿಲ್ಲ. ಈ ಬಗ್ಗೆ ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.

ಸರ್ವಾಧಿಕಾರಿ ಧೋರಣೆ: ಅಧ್ಯಕ್ಷರ ನಿಕಟವರ್ತಿ ಸದಸ್ಯರ ವಾರ್ಡ್‌ಗಳ ಅಭಿವೃದ್ಧಿಗೆ ಹೆಚ್ಚಿನ ಅದ್ಯತೆ ನೀಡುತ್ತಿದ್ದು, ಕೆಲ ವಾರ್ಡ್‌ಗಳ ಅಭಿವೃದ್ಧಿಯ ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಮಾಡುತ್ತಿರುವುದಾಗಿ ಸದಸ್ಯ ರಾಮಮೂರ್ತಿ ಅರೋಪಿಸಿದರು. ಪಟ್ಟಣದಲ್ಲಿ ಕುಡಿಯುವ ನೀರಿನ ಲಭ್ಯತೆ ಉತ್ತಮವಾಗಿದ್ದರೂ ವಿತರಣೆಯು ಸಮರ್ಪಕವಾಗಿಲ್ಲದ ಕಾರಣ ಅನೇಕ ವಾರ್ಡ್‌ಗಳಲ್ಲಿ ನೀರಿನ ಸಮಸ್ಯೆ ಇದೆ. ಇನ್ನೂ ಕೆಲ ವಾರ್ಡ್‌ಗಳಲ್ಲಿ ನೀರುಗಂಟಿಗಳು ಸರ್ವಾಧಿಕಾರಿಗಳಾಗಿ ವರ್ತಿಸುತ್ತಿದ್ದಾರೆ ಎಂದು ದೂರಿದರು.

ಸೂಕ್ತ ಕ್ರಮ: ಸದಸ್ಯ ಎನ್‌.ವಿ.ಮುರಳೀಧರ ಮಾತನಾಡಿ, ಜನನ ಮತ್ತು ಮರಣ ಪ್ರಮಾಣ ಪತ್ರಗಳಿಗೆ ಅರ್ಜಿ ಸಲ್ಲಿದ್ದರೂ ನೀಡಲು ವಿಳಂಬ ಮಾಡುತ್ತಿರುವುದಾಗಿ ದೂರಿದರು. ಈ ಬಗ್ಗೆ ಮಾತನಾಡಿದ ಮುಖ್ಯಾಧಿಕಾರಿ ಪ್ರಸಾದ್‌, ಸೂಕ್ತ ಕ್ರಮವಹಿಸುವುದಾಗಿ ತಿಳಿಸಿದರು.

ಮೂರು ಪಟ್ಟು ಹೆಚ್ಚಳ: ಸದಸ್ಯ ಹನುಮಂತರೆಡ್ಡಿ ಮಾತನಾಡಿ, ಪಟ್ಟಣದಲ್ಲಿ ಐಟಿಎಸ್‌ಎಂಟಿ ಯೋಜನೆ ಅಡಿಯಲ್ಲಿ ನಿರ್ಮಿಸಿರುವ ತರಕಾರಿ ಮಾರುಕಟ್ಟೆಯ ವಾಣಿಜ್ಯ ಸಂಕೀರ್ಣದಲ್ಲಿ ಅನೇಕ ಮಳಿಗೆಗಳು ಖಾಲಿ ಇದ್ದು, ವಿದ್ಯುತ್‌ ಸಂಪರ್ಕವಾಗಿ ಕಲ್ಪಿಸಿಲ್ಲ. ಪಟ್ಟಣದ ಬೀದಿದೀಪಗಳ ನಿರ್ವಹಣೆಯಲ್ಲಿ ಬಾರಿ ಭ್ರಷ್ಟಾಚಾರ ನಡೆಯುತ್ತಿದ್ದು, ಗುತ್ತಿಗೆದಾರರು ಸರ್ಕಾರ ನಿಗದಿಪಡಿಸಿರುವ ದರಕ್ಕಿಂತ ಎರಡು ಮೂರು ಪಟ್ಟು ಹೆಚ್ಚು ಪಡೆದು ಅಳವಡಿಸುತ್ತಿದ್ದಾರೆ ಎಂದರು.

ಮುಖ್ಯಾಧಿಕಾರಿ ಪ್ರಸಾದ್‌ ಮಾತನಾಡಿ, ಫ‌ುಟ್‌ಪಾತ್‌ ಅಂಗಡಿಗಳನ್ನು ತೆರವುಗೊಳಿಸುವವರೆಗೂ ಪುರಸಭೆ ತರಕಾರಿ ಮಾರುಕಟ್ಟೆಯ ಅಂಗಡಿಗಳಿಂದ ಬಾಡಿಗೆ ವಸೂಲಿ ಸಾಧ್ಯವಾಗದು. ಈ ಬಗ್ಗೆ ಸೂಕ್ತ ಕ್ರಮ ವಹಿಸುವುದಾಗಿ ತಿಳಿಸಿದರು.

ಸದಸ್ಯರಾದ ಅಲೂಮಂಜು, ಸಿ.ಲಕ್ಷ್ಮೀನಾರಾಯಣ್‌ ಮಾತನಾಡಿ, ಮಾಲೂರು ಪಟ್ಟಣದಲ್ಲಿ ಎಪಿಎಂಸಿಯಿಂದ ಹರಾಜುಕಟ್ಟೆಗಳ ನಿರ್ಮಾಣ ಕಾಮಗಾರಿಯು ಅರಂಭವಾಗುತ್ತಿದ್ದು, ಎಪಿಎಂಸಿಯು ಈ ಬಗ್ಗೆ ಪುರಸಭೆಯ ಗಮನಕ್ಕೆ ತಂದಿಲ್ಲ ಎಂದು ಅರೋಪಿಸಿದರು. ಸಭೆಯಲ್ಲಿ ಉಪಾಧ್ಯಕ್ಷೆ ಗೀತಾ ರಮೇಶ್‌, ಸ್ಥಾಯಿ ಸಮಿತಿ ಅಧ್ಯಕ್ಷೆ ವಿಜಯಲಕ್ಷ್ಮಿ, ಸೇರಿದಂತೆ ಸದಸ್ಯರು ಇದ್ದರು.

ಟಾಪ್ ನ್ಯೂಸ್

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

16

Pro Kabaddi: ಗುಜರಾತ್‌ಗೆ ರೋಚಕ ಜಯ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.