ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ
Team Udayavani, Mar 1, 2019, 7:38 AM IST
ರಾಯಚೂರು: ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಳ್ಳಲಿದ್ದು, ಜಿಲ್ಲೆಯಲ್ಲಿ 36 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮಾರ್ಚ್ 18ರವರೆಗೆ ಪರೀಕ್ಷೆ ನಡೆಯಲಿದ್ದು, ಕಲಾ ವಿಭಾಗದಿಂದ 11,172, ವಾಣಿಜ್ಯ 5,966 ಮತ್ತು ವಿಜ್ಞಾನ ವಿಭಾಗದಲ್ಲಿ 3,349 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು.
ಜಿಲ್ಲೆಯಲ್ಲಿ ಒಟ್ಟು 20,847 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತಿದ್ದು, 11,524 ವಿದ್ಯಾರ್ಥಿಗಳು, 8,963 ವಿದ್ಯಾರ್ಥಿನಿಯರಿದ್ದಾರೆ. ಅದರಲ್ಲಿ 15,187 ವಿದ್ಯಾರ್ಥಿಗಳು ಪ್ರಥಮ ಬಾರಿಗೆ ಪರೀಕ್ಷೆ ಎದುರಿಸಿದರೆ, 4,376 ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆಯುತ್ತಿದ್ದಾರೆ. 1,070 ಜನ ಖಾಸಗಿಯಾಗಿ ಪರೀಕ್ಷೆ ಬರೆಯುತ್ತಿದ್ದಾರೆ.
ನಗರದಲ್ಲಿ 12 ಕೇಂದ್ರಗಳನ್ನು ಸ್ಥಾಪಿಸಿದರೆ, ಲಿಂಗಸುಗೂರು-8, ಸಿಂಧನೂರು-8, ಮಾನ್ವಿ-5, ದೇವದುರ್ಗದ-3 ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿದೆ. ಈಗಾಗಲೇ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
16 ಸಾಮಾನ್ಯ ಪರೀಕ್ಷಾ ಕೇಂದ್ರಗಳಾದರೆ 20 ಸೂಕ್ಷ್ಮ ಕೇಂದ್ರಗಳು ಎಂದು ಗುರುತಿಸಲಾಗಿದೆ. ಎಲ್ಲ ಕೇಂದ್ರಗಳಲ್ಲೂ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ರಾಯಚೂರು ತಾಲೂಕಿನಲ್ಲಿ 3 ಸೂಕ್ಷ್ಮ ಕೇಂದ್ರಗಳಿದ್ದರೆ, ಸಿಂಧನೂರು-4, ಮಾನ್ವಿ-4, ಲಿಂಗಸುಗೂರು-7 ಹಾಗೂ ದೇವದುರ್ಗ-2 ಕೇಂದ್ರಗಳನ್ನು ಸೂಕ್ಷ್ಮ ಎಂದು ಗುರುತಿಸಲಾಗಿದೆ.
72 ಜನ ವಿಶೇಷ ವಿಚಕ್ಷಕರು: ಈ ಬಾರಿ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಇಬ್ಬರಂತೆ 72 ಜನ ವಿಶೇಷ ವಿಚಕ್ಷಕರನ್ನು ನಿಯೋಜಿಸಲಾಗಿದೆ. ಇವರು ಯಾರು ಕೂಡ ಸ್ಥಳೀಯ ಜಿಲ್ಲೆಯವರಾಗಿಲ್ಲ. ಅದರ ಜತೆಗೆ ಪ್ರತಿ ಕೇಂದ್ರಕ್ಕೆ ಒಬ್ಬರಂತೆ ವಿಶೇಷ ನಿರೀಕ್ಷಕರನ್ನು ನಿಯೋಜಿಸಲಾಗಿದೆ. ಪರೀಕ್ಷೆಗಳನ್ನು ನಕಲುರಹಿತವಾಗಿ ನಡೆಸುವ ಉದ್ದೇಶದಿಂದ ಈ ಕ್ರಮ ಕೈಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಉಚಿತ ಸಾರಿಗೆ: ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ಸೌಲಭ್ಯ ಇರಲಿದ್ದು, ಪರೀಕ್ಷಾ ಪ್ರವೇಶ ಪತ್ರ ಹಾಗೂ ಆಧಾರ್ ಕಾರ್ಡ್ ತೋರಿಸಿದರೆ ಸಾರಿಗೆ ಬಸ್‌ಗಳಲ್ಲಿ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ.
ಯಾವ ದಿನ, ಯಾವ ವಿಷಯ?
ಮಾ.1ರಂದು ಅರ್ಥಶಾಸ್ತ್ರ, ಭೌತಶಾಸ್ತ್ರ, 2ರಂದು ಮಾಹಿತಿ ತಂತ್ರಜ್ಞಾನ, ಆಟೋಮೊಬೈಲ್ ಹೆಲ್ತ್‌ಕೇರ್, 5ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೆಬಿಕ್, ಫ್ರೆಂಚ್, 6ರಂದು ತರ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ, ಗೃಹ ವಿಜ್ಞಾನ, 7ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಗಣಿತ, 8ರಂದು ಉರ್ದು, ಸಂಸ್ಕೃತ, 9ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, 11ರಂದು ವ್ಯವಹಾರ ಅಧ್ಯಯನ, ಸಮಾಜ ಶಾಸ್ತ್ರ, ರಸಾಯನ ಶಾಸ್ತ್ರ, 12ರಂದು ಭೂಗೋಳ ಶಾಸ್ತ್ರ, ಕರ್ನಾಟಕ ಸಂಗೀತ, ಹಿಂದುಸ್ಥಾನಿ ಸಂಗೀತ, 13ರಂದು ಮನಶಾಸ್ತ್ರ, ಇಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ, 14ರಂದು ಇತಿಹಾಸ, ಜೀವಶಾಸ್ತ್ರ, ಬೇಸಿಕ್ ಮ್ಯಾಥ್ಸ್, 15ರಂದು ಹಿಂದಿ, 16ರಂದು ಕನ್ನಡ, 18ರಂದು ಇಂಗ್ಲಿಷ್ ವಿಷಯಗಳ ಪರೀಕ್ಷೆ ನಡೆಯಲಿವೆ.
ಈ ಬಾರಿ ನಕಲು ರಹಿತ ಪರೀಕ್ಷೆ ನಡೆಸುವ ಉದ್ದೇಶದಿಂದ ಸರ್ಕಾರ ಹೆಚ್ಚು ಕ್ರಮ ಕೈಗೊಂಡಿದೆ. ವಿಶೇಷ ನಿರೀಕ್ಷಕರನ್ನು ನಿಯೋಜಿಸಲಾಗಿದೆ. ಎಲ್ಲ ಕಡೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡದಂತೆ ಸೂಕ್ತ ಬಂದೋಬಸ್ತ್ ಮಾಡಲಾಗಿದೆ. ವಿದ್ಯಾರ್ಥಿಗಳು ನಿರ್ಭಯದಿಂದ ಪರೀಕ್ಷೆ ಎದುರಿಸಬೇಕು.
ಸಿ.ಟಿ. ಕಲ್ಲಯ್ಯ ,ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.