ಮುಂಬಯಿ ಶೇರು 196 ಅಂಕ ಜಿಗಿತ; ನಿಫ್ಟಿ 10,863ರ ಮಟ್ಟಕ್ಕೆ
Team Udayavani, Mar 1, 2019, 10:53 AM IST
ಮುಂಬಯಿ : ಮಾರ್ಚ್ ತಿಂಗಳ ವಾಯಿದೆ ವಹಿವಾಟು ಸರಣಿಗೆ ಶುಭಾರಂಭ ದೊರಕಿರುವುದರ ಸೂಚನೆಯಾಗಿ ಇಂದು ಶುಕ್ರವಾರದ ವಹಿವಾಟನ್ನು ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 196.37 ಅಂಕಗಳ ಜಿಗಿತದೊಂದಿಗೆ 36,063.81 ಅಂಕಗಳ ಮಟ್ಟದಲ್ಲಿ ಆಶಾದಾಯಕವಾಗಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 71 ಅಂಕಗಳ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 10,863.50 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಭಾರತ – ಪಾಕ್ ಉದ್ವಿಗ್ನತೆಯ ಹೊರತಾಗಿಯೂ ವಿದೇಶಿ ಬಂಡವಾಳ ಭಾರತೀಯ ಶೇರು ಮಾರುಕಟ್ಟೆಗೆ ಹರಿದು ಬರುತ್ತಿರುವ ಕಾರಣ ಬ್ಯಾಂಕಿಂಗ್, ಮೆಟಲ್, ಐಟಿ ಮುಂತಾದ ರಂಗಗಳ ಶೇರುಗಳು ಇಂದು ಉತ್ತಮ ಖರೀದಿಯನ್ನು ಕಂಡವು.
ಇಂದಿನ ಟಾಪ್ ಗೇನರ್ಗಳು : ಝೀ ಎಂಟರ್ಟೇನ್ಮೆಂಟ್, ಎಚ್ಪಿಸಿಎಲ್, ಎಸ್ ಬ್ಯಾಂಕ್, ಇಂಡಸ್ ಇಂಡ್ ಬ್ಯಾಂಕ್, ಇಂಡಿಯಾ ಬುಲ್ಸ್ ಹೌಸಿಂಗ್; ಟಾಪ್ ಲೂಸರ್ಗಳು : ಭಾರ್ತಿ ಏರ್ಟೆಲ್, ಬಜಾಜ್ ಆಟೋ, ಎಕ್ಸಿಸ್ ಬ್ಯಾಂಕ್, ಏಶ್ಯನ್ ಪೇಂಟ್ಸ್, ಯುಪಿಎಲ್.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,706 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,906 ಶೇರುಗಳು ಮುನ್ನಡೆ ಸಾಧಿಸಿದವು; 666 ಶೇರುಗಳು ಹಿನ್ನಡೆಗೆ ಗುರಿಯಾದವು; 134 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Bengaluru Airport: ಏರ್ ಪೋರ್ಟ್ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ
Crime: ಮೊಬೈಲ್ಗಾಗಿ ಜಗಳ; ಪುತ್ರನ ಕೊಂದ ಅಪ್ಪ!
Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ
AI ಆರೋಗ್ಯ ರಕ್ಷಣೆಯ ವ್ಯವಸ್ಥೆಯಲ್ಲಿ ಸ್ವೀಕಾರದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆಯೇ?
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.