ಮೂವರು ಹೆಣ್ಣು ಮಕ್ಕಳನ್ನು ಬಿಟ್ಟುಹೋದ ನಿರ್ದಯಿ ಪಾಲಕರು

Team Udayavani, Mar 2, 2019, 7:16 AM IST

hennu.jpg

ಹೊಸಕೋಟೆ: ಪಟ್ಟಣದ ಬಳಿಯ ಆವಲಹಳ್ಳಿಯಲ್ಲಿ ಪೋಷಕರು ಬಿಟ್ಟುಹೋದ ಮೂವರು ಬಾಲಕಿಯರನ್ನು ಪೊಲೀಸರು ರಕ್ಷಿಸಿ ಬೆಂಗಳೂರಿನ ಮಕ್ಕಳ ಪಾಲನಾ ಕೇಂದ್ರಕ್ಕೆ ಒಪ್ಪಿಸಿದ್ದಾರೆ. ತಮ್ಮದೇ ಆದ ಮೂವರು ಬಾಲಕಿಯರನ್ನು ತೊರೆದು ಗಂಡು ಮಗನೊಂದಿಗೆ ಪೋಷಕರು ಪರಾರಿಯಾದ ಘಟನೆ ನಡೆದಿದ್ದು, ಜಾರ್ಖಂಡ್‌ ಮೂಲದ ರಿಯಾ(10), ರಿತೀಕಾ(9), ರಾಜನಂದಿನಿ(8) ಪತ್ತೆಯಾದ ಬಾಲಕಿಯರು. 

 ಇವರು 2 ತಿಂಗಳ ಹಿಂದೆ ತಮ್ಮ ತಂದೆ, ತಾಯಿಯೊಂದಿಗೆ ಬೆಂಗಳೂರಿಗೆ ಬಂದಿದ್ದು, ಗುರುವಾರ ಆವಲಹಳ್ಳಿ ಬಸ್‌ ನಿಲ್ದಾಣದ ಬಳಿಯ ಹೋಟೆಲ್‌ನಲ್ಲಿ ಮಕ್ಕಳಿಗೆ ಊಟ ಕೊಡಿಸಿ ನಂತರ ತಂದೆ, ತಾಯಿ ಹಾಗೂ ಮಗ ಹೆಣ್ಣುಮಕ್ಕಳ ಎದುರಿನಲ್ಲಿಯೇ ಬಸ್‌ ಹತ್ತಿ ಪರಾರಿಯಾಗಿದ್ದಾರೆ.

ಕೆಲ ಸಮಯದ ನಂತರ ದಿಕ್ಕು ಕಾಣದ ಬಾಲಕಿಯರು ರಸ್ತೆಯುದ್ದಕ್ಕೂ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದುಕೊಂಡು ಬರುತ್ತಿದ್ದರು. ಬೂದಿಗೆರೆ ಕ್ರಾಸ್‌ ಬಳಿಯ ಮೇಲ್ಸೇತುವೆ ಮೇಲೆ ಇವರನ್ನು ಕಂಡ ಸಾರ್ವಜನಿಕರೊಬ್ಬರು ಪೊಲೀಸ್‌ ಠಾಣೆಗೆ ಕರೆತಂದಿದ್ದಾರೆ. ಬಾಲಕಿಯರನ್ನು ವಿಚಾರಿಸಿದಾಗ ತಮ್ಮ ತಂದೆ ಟ್ಯಾಕ್ಸಿ ಚಾಲಕನಾಗಿದ್ದು, ಮೂವರು ಹೆಣ್ಣು, ಒಬ್ಬ ಗಂಡು ಮಗನಿದ್ದಾನೆ.

ಜಾರ್ಖಂಡ್‌ನಿಂದ ಬೆಂಗಳೂರಿಗೆ ಬಂದು ಎರಡು ತಿಂಗಳಾಗಿದೆ. ಗ‌ುರುವಾರ ಬೆಳಗ್ಗೆ ಬಸ್‌ನಲ್ಲಿ ಆವಲಹಳ್ಳಿಗೆ ಕರೆತಂದು ಹೋಟೆಲ್‌ನಲ್ಲಿ ಊಟ ಕೊಡಿಸಿ ನಂತರ ತಮ್ಮ ತಂದೆ, ತಾಯಿ, ಅಣ್ಣ ಬಸ್‌ನಲ್ಲಿ ಬೆಂಗಳೂರು ಕಡೆಗೆ ಹೊರಟುಹೋಗಿದ್ದಾರೆ.

ಜಾರ್ಖಂಡ್‌ನ‌ಲ್ಲಿ ತಮ್ಮನ್ನು ಶಾಲೆಗೆ ದಾಖಲಿಸಲಾಗಿದ್ದು, ಅಜ್ಜ, ಅಜ್ಜಿ ಸಹ ತಮ್ಮೊಂದಿಗೆ ವಾಸಿಸುತ್ತಿದ್ದರು ಎಂದು ಹೇಳಿದ್ದಾರೆ. ಪೊಲೀಸರು ವಿಷಯವನ್ನು ಬೆಂಗಳೂರಿನ ಮಕ್ಕಳ ಶುಶ್ರೂಷಾ ಕೇಂದ್ರಕ್ಕೆ ತಿಳಿಸಿದ್ದು, ಅಧಿಕಾರಿಗಳು ಮಾಹಿತಿ ಪಡೆದು ತಮ್ಮೊಂದಿಗೆ ಕರೆದೊಯ್ದಿದ್ದಾರೆ. ಈ ಬಗ್ಗೆ ಆವಲಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಟಾಪ್ ನ್ಯೂಸ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

156

Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.