‘ಮೋದಿಯವರಿಂದ ಜನಪರ ಯೋಜನೆ’
Team Udayavani, Mar 2, 2019, 8:07 AM IST
ಬಂಟ್ವಾಳ : ಪ್ರಧಾನಿ ಮೋದಿ ಅವರು ನೂರಕ್ಕೂ ಅಧಿಕ ಜನಪರ ಯೋಜನೆಗಳನ್ನು ಜನರಿಗೆ ನೀಡಿದ್ದಾರೆ. ಅದರಲ್ಲಿ 60ಕ್ಕಿಂತಲೂ ಅಧಿಕ ಯೋಜನೆಗಳು ಮಹಿಳೆಯರಿಗೆ ಸಂಬಂಧಪಟ್ಟಂತಹ ಯೋಜನೆಗಳು. ಉಜ್ವಲ ಯೋಜನೆ ಭಾರೀ ಮಹತ್ವವನ್ನು ಪಡೆದಿದೆ ಎಂದು ಸಂಸದ ನಳಿನ್‌ಕುಮಾರ್ ಕಟೀಲು ಹೇಳಿದರು.
ಅವರು ಫೆ. 27ರಂದು ಕಳ್ಳಿಗೆ ಗ್ರಾಮದ ಜಾರಂದಗುಡ್ಡೆಯಲ್ಲಿ ಉಜ್ವಲ ಫಲಾನುಭವಿ ಗಳಿಗೆ ಉಚಿತ ಗ್ಯಾಸ್ ಕಿಟ್ ವಿತರಿಸಿ, ಮಹಿಳೆಯರಿಗೆ ಸ್ಥೈರ್ಯ ನೀಡುವಂತಹ ಕೆಲಸವನ್ನು ಕಳೆದ 5 ವರ್ಷಗಳ ಅವಧಿಯಲ್ಲಿ ಮೋದಿ ಮಾಡಿದ್ದಾರೆ. ಹೊಗೆಮುಕ್ತ ದೇಶದ ನಿರ್ಮಾಣಕ್ಕಾಗಿ ಉಜ್ವಲ ಯೋಜನೆಯನ್ನು ಪ್ರಕಟಿಸಿದ್ದಾರೆ ಎಂದರು.
ಮೂರು ಹಂತಗಳಲ್ಲಿ ಇಲ್ಲಿಯವರೆಗೆ ಒಟ್ಟು 70 ಫಲಾನುಭವಿಗಳಿಗೆ ಉಜ್ವಲ ಅನಿಲ ಕಿಟ್ ವಿತರಿಸಲಾಯಿತು. ಕಳ್ಳಿಗೆ ಬಿಜೆಪಿ ಮಹಿಳಾ ಕಾರ್ಯಕರ್ತರು ಕಮಲ ದೀಪ ನೆರವೇರಿಸಿದರು.
ದ.ಕ. ಜಿಲ್ಲಾ ಬಿಜೆಪಿ ವಕ್ತಾರ ಕೆ. ಹರಿಕೃಷ್ಣ ಬಂಟ್ವಾಳ, ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವದಾಸ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಾಮ್‌ದಾಸ್ ಬಂಟ್ವಾಳ, ಕಳ್ಳಿಗೆ ಬಿಜೆಪಿ ಪ್ರಭಾರಿ ಪುರುಷೋತ್ತಮ ಶೆಟ್ಟಿ ವಾಮದಪದವು, ಪ್ರಮುಖರಾದ ಮೋನಪ್ಪ ದೇವಸ್ಯ, ಪಂ. ಸದಸ್ಯೆ ಯಶೋದಾ ಜಾರಂದಗುಡ್ಡೆ, ರೇವತಿ ಮಾಡಂಗೆ, ಸರಸ್ವತಿ ನೆತ್ರಕೆರೆ, ಸ್ಥಳೀಯ ನೇತಾರ ಪುರುಷೋತ್ತಮ ಕೊಟ್ಟಾರಿ ಮಾಡಂಗೆ, ಹರಿಣಾಕ್ಷಿ ಜಾರಂದಗುಡ್ಡೆ, ಶಶಿಪ್ರಭಾ ಗುತ್ತೆತ್ತಿಲ್, ಮನೋಜ್ ವಳವೂರು, ಗಣೇಶ್ ಪಚ್ಚಿನಡ್ಕ, ವಿಕ್ಟರ್ ಡಿ’ಸೋಜಾ, ರಾಹುಲ್ ಪಚ್ಚಿನಡ್ಕ ಉಪಸ್ಥಿತರಿದ್ದರು. ದೇವಿಪ್ರಸಾದ್ ಎಂ. ಸ್ವಾಗತಿಸಿ, ಮನೋಹರ ಕಂಜತ್ತೂರು ವಂದಿಸಿದರು.
ಸಮರ್ಥ ನಾಯಕತ್ವ
ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಕಿಟ್ ವಿತರಿಸಿ, ದೇಶಕ್ಕೆ ಸಮರ್ಥ ನಾಯಕತ್ವ ದೊರೆತಿದೆ. ಪಾರದರ್ಶಕ ಆಡಳಿತ ವ್ಯವಸ್ಥೆ ನಿರ್ಮಾಣವಾಗಿದೆ. ಜನರ ತೆರಿಗೆ ಹಣ ಸದ್ವಿನಿಯೋಗವಾಗುತ್ತಿದೆ. ಹೀಗಾಗಿ ಭಾರತ ಪ್ರಬಲ ರಾಷ್ಟ್ರವಾಗಿ ಬೆಳೆಯುತ್ತಿದೆ. ಕಳೆದ ಐದು ವರ್ಷಗಳ ಮೋದಿ ಅವರ ಆಡಳಿತ ಭಾರತವನ್ನು ಅಭಿವೃದ್ಧಿಯಲ್ಲಿ ನಂ. 5ನೇ ಸ್ಥಾನಕ್ಕೆ ತಂದಿದೆ. ಮುಂದಿನ ಐದು ವರ್ಷಗಳಿಗೆ ಮತ್ತೊಮ್ಮೆ ಮೋದಿ ಪ್ರಧಾನಿಯಾಗಿ ಪ್ರಗತಿಯಲ್ಲಿ ಭಾರತ ಜಗತ್ತಿನ ನಂ. 1 ದೇಶವಾಗಿ ಸ್ಥಾನ ಪಡೆಯುವುದರಲ್ಲಿ ಸಂಶಯವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.