ಚಿಕ್ಕೋಡಿಯಲ್ಲಿ ನಾಳೆ ಬೃಹತ್ ಉಚಿತ ಆರೋಗ್ಯ ಮೇಳ
Team Udayavani, Mar 2, 2019, 9:36 AM IST
ಚಿಕ್ಕೋಡಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಬೃಹತ್ ಉಚಿತ ಆರೋಗ್ಯ ಮೇಳವನ್ನು ಮಾ.3ರಂದು ನಗರದ ಆರ್‌ಡಿ ಕಾಲೇಜು ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ|ವಿ.ವಿ.ಶಿಂಧೆ ಹೇಳಿದರು.
ಶುಕ್ರವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಬೆಳಗಾವಿ, ಅಪರ ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಚಿಕ್ಕೋಡಿ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಭಾರತೀಯ ವೈದ್ಯಕೀಯ ಸಂಘ ಚಿಕ್ಕೋಡಿ, ನಿಪ್ಪಾಣಿ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಚಿಕ್ಕೋಡಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭೆ ಕ್ಷೇತ್ರದ ಜನರಿಗೆ ಆರೋಗ್ಯ ಮೇಳ ಸದುಪಯೋಗವಾಗಬೇಕೆನ್ನುವ ಉದ್ದೇಶದಿಂದ ಆರೋಗ್ಯ ಮೇಳ ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಕಾರ್ಯಕ್ರದಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಆರೋಗ್ಯ ಸಚಿವ ಶಿವಾನಂದ ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಆಗಮಿಸಲಿದ್ದಾರೆ.
ಸಂಸದ ಪ್ರಕಾಶ ಹುಕ್ಕೇರಿ ಆರೋಗ್ಯ ಮೇಳ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಸರ್ಕಾರಿ ಮುಖ್ಯ ಸಚೇತಕ ಗಣೇಶ ಹುಕ್ಕೇರಿ ವಹಿಸಲಿದ್ದಾರೆ. ಅತಿಥಿಗಳಾಗಿ ಪರಿಷತ್ ವಿರೋಧ ಪಕ್ಷದ ಮುಖ್ಯಸಚೇತಕ ಮಹಾಂತೇಶ
ಕವಟಗಿಮಠ, ಶಾಸಕರಾದ ಲಕ್ಷ್ಮೀ ಹೆಬ್ಟಾಳಕರ, ಡಾ|ಅಂಜಲಿ ನಿಂಬಾಳಕರ, ಮಹಾಂತೇಶ
ಕೌಜಲಗಿ, ರಾಜ್ಯಸಭೆ ಸದಸ್ಯ ಡಾ. ಪ್ರಭಾಕರ ಕೋರೆ, ಸಂಸದ ಸುರೇಶ ಅಂಗಡಿ, ಶಶಿಕಲಾ ಜೊಲ್ಲೆ, ದುರ್ಯೋಧನ ಐಹೊಳೆ, ಪಿ.ರಾಜೀವ, ಉಮೇಶ ಕತ್ತಿ, ಮಹೇಶ ಕುಮಠಳ್ಳಿ, ಶ್ರೀಮಂತ ಪಾಟೀಲ, ಜಿ.ಪಂ.ಅಧ್ಯಕ್ಷೆ ಆಶಾ ಐಹೋಳೆ
ಸೇರಿದಂತೆ ಜಿಲ್ಲೆಯ ಶಾಸಕರು, ಪರಿಷತ್ ಸದಸ್ಯರು, ಜಿ.ಪಂ.ಸದಸ್ಯರು ಆಗಮಿಸಲಿದ್ದಾರೆ
ಎಂದರು.
ಆರೋಗ್ಯ ಮೇಳದಲ್ಲಿ ಸೂಪರ್ ಸ್ಪೆಷಾಲಿಟಿ ತಜ್ಞ ವೈದ್ಯರು ಆಗಮೀಸಲಿದ್ದು, ಹೃದಯ
ರೋಗ, ಚಿಕ್ಕ ಮಕ್ಕಳ ಶಸ್ತ್ರಚಿಕಿತ್ಸೆ, ನರರೋಗ, ಸ್ಟಿಕ್ ಸರ್ಜರಿ,ಆಥೋìಪೆಡಿಕ್, ಕ್ಯಾನ್ಸರ್
ನಂತರ ರೋಗದ ಸೇವೆಗಳನ್ನು ತಜ್ಞ ವೈದ್ಯರು ನೀಡಲಿದ್ದು, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ| ಶೈಲಜಾ ತಮ್ಮಣ್ಣವರ, ಡಾ|ಸಂತೋಷ ಕೊಣ್ಣೂರ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.