ಎಫ್16: ಮಾಹಿತಿ ಕೇಳಿದ ಅಮೆರಿಕ
Team Udayavani, Mar 3, 2019, 12:30 AM IST
ಅಮೆರಿಕ ನೀಡಿದ ಎಫ್ 16 ಯುದ್ಧ ವಿಮಾನಗಳನ್ನು ಭಾರತದ ಮೇಲೆ ದಾಳಿ ನಡೆಸುವ ಉದ್ದೇಶಕ್ಕೆ ಬಳಸಿದ ಪಾಕಿಸ್ಥಾನಕ್ಕೆ ಈಗ ನಡುಕ ಶುರುವಾಗಿದೆ. ಒಪ್ಪಂದ ಉಲ್ಲಂ ಸಿ ಈ ಯುದ್ಧ ವಿಮಾನಗಳನ್ನು ಭಾರತದ ಗಡಿಯಲ್ಲಿ ಬಳಸಿದ್ದಕ್ಕೆ ವಿವರಣೆ ಹಾಗೂ ಹೆಚ್ಚಿನ ಮಾಹಿತಿ ನೀಡುವಂತೆ ಪಾಕಿಸ್ಥಾನವನ್ನು ಅಮೆರಿಕ ಕೇಳಿದೆ. ಎಫ್ 16 ಯುದ್ಧ ವಿಮಾನವನ್ನು ಬಳಸಿಲ್ಲ ಎಂದು ಪಾಕಿಸ್ಥಾನ ನೀಡಿದ್ದ ಹೇಳಿಕೆಗೆ ತಕ್ಕ ಸಾಕ್ಷ್ಯಗಳನ್ನು ಭಾರತ ಈಗಾಗಲೇ ನೀಡಿದೆ. ಎಫ್ 16 ಗಳಲ್ಲಿ ವಿಶೇಷವಾಗಿ ಬಳಸಲಾಗುವ ಅಮ್‌ರಾಮ್ ಎಂಬ ಸಾಧನಗಳು ಭಾರತೀಯ ಗಡಿ ಪ್ರದೇಶದಲ್ಲಿ ಲಭ್ಯವಾಗಿದ್ದವು. ಇದರ ವಿವರಗಳನ್ನು ಅಮೆರಿಕಕ್ಕೆ ಭಾರತ ನೀಡಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಅಮೆರಿಕದ ವಿದೇಶಾಂಗ ಸಚಿವಾಲಯದ ವಕ್ತಾರರು, ಈ ವರದಿಗಳ ಬಗ್ಗೆ ನಮಗೆ ಮಾಹಿತಿಯಿದೆ ಮತ್ತು ಹೆಚ್ಚಿನ ವಿವರಗಳನ್ನು ನಾವು ನಿರೀಕ್ಷಿಸುತ್ತಿದ್ದೇವೆ ಎಂದಿದ್ದಾರೆ. ಮೂಲಗಳ ಪ್ರಕಾರ ಒಪ್ಪಂದಗಳ ಉಲ್ಲಂಘನೆಯ ಬಗ್ಗೆ ಕಠಿನವಾಗಿ ಮೇಲ್ವಿಚಾರಣೆ ನಡೆಸಲಾಗುತ್ತದೆ. ಅಲ್ಲದೆ ದುರ್ಬಳಕೆ ಆರೋಪವನ್ನು ಗಂಭೀರವಾಗಿ ಪರಿಗಣಿಸುತ್ತದೆ. ಮೂಲಗಳ ಪ್ರಕಾರ ಎಫ್ 16 ಯುದ್ಧ ವಿಮಾನಗಳನ್ನು ಪಾಕಿಸ್ಥಾನವು ತನ್ನ ದೇಶದೊಳಗಿನ ಉಗ್ರರ ದಮನಕ್ಕೆ ಬಳಸಬೇಕು. ಇತರ ದೇಶಗಳ ಮೇಲೆ ದಾಳಿ ಅಥವಾ ಇತರ ಉದ್ದೇಶಕ್ಕೆ ಬಳಸುವುದಾದರೆ ಅಮೆರಿಕದ ಅನುಮತಿ ಪಡೆಯಬೇಕು ಎಂಬುದೂ ಸೇರಿದಂತೆ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಆದರೆ ಭಾರತದ ಮೇಲೆ ದಾಳಿಗೆ ಎಫ್16 ಬಳಸಿರುವುದು ಸಾಬೀತಾದರೆ ಪಾಕಿಸ್ಥಾನದ ವಿರುದ್ಧ ಅಮೆರಿಕ ಕೈಗೊಳ್ಳುವ ಕ್ರಮ ಯಾವುದು ಎಂಬುದು ಕುತೂಹಲ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.