ಸಂಶೋಧನೆಗೆ ಆದ್ಯತೆ ಅಗತ್ಯ: ಡಾ| ವಿನೋದ ಭಟ್‌

Team Udayavani, Mar 3, 2019, 12:50 AM IST

0203mlr35.jpg

ಮಂಗಳೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪರಿವರ್ತನೆ ಗಳು ಕ್ಷಿಪ್ರಗತಿಯಲ್ಲಿ ಘಟಿಸುತ್ತಿವೆ. ಈ ಕಾಲಘಟ್ಟದಲ್ಲಿ ಸಂಶೋಧನೆಗಳಿಗೆ ಹೆಚ್ಚಿನ ಆದ್ಯತೆ ನೀಡುವುದು ಅಗತ್ಯ ಎಂದು ಮಾಹೆ ಕುಲಪತಿ ಡಾ| ಎಚ್‌. ವಿನೋದ ಭಟ್‌ ಹೇಳಿದರು.

ಮಣಿಪಾಲ ದಂತ ವೈದ್ಯಕೀಯ ವಿದ್ಯಾಲಯವು ಉನ್ನತ ವ್ಯಾಸಂಗ ಸಂಸ್ಥೆಯ ವಿದ್ಯಾರ್ಥಿ ಸಂಶೋಧನ ವೇದಿಕೆಯ ಆಶ್ರಯದಲ್ಲಿ ಶನಿವಾರ ನಗರದ ಟಿಎಂಎ ಪೈ ಕನ್ವೆನ್ಶನ್‌ ಸೆಂಟರ್‌ನಲ್ಲಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ “ಸ್ಟೂಡೆಂಟ್‌ ಕಾನ್ಫರೆನ್ಸ್‌ ಆಫ್‌ ರಿಸರ್ಚ್‌ ಇನ್‌ ಎಜುಕೇಶನ್‌’ (ಸ್ಕೋರ್‌-2) ದ್ವಿದಿನ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಸಂಶೋಧನೆಗಳು ಪ್ರಸ್ತುತ ಹೆಚ್ಚು ಮಹತ್ವವನ್ನು ಪಡೆದುಕೊಂಡಿವೆ. ಆದುದರಿಂದ ವಿದ್ಯಾರ್ಥಿಗಳು ಶೈಕ್ಷಣಿಕ ಅವಧಿಯಲ್ಲಿ ಸಂಶೋಧನೆಗಳತ್ತಲೂ ಒಲವು ಹೊಂದಿರಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಮಾಹೆ ಸಹ ಕುಲಪತಿಗಳಾದ ಡಾ| ವಿ. ಸುರೇಂದ್ರ ಶೆಟ್ಟಿ, ಡಾ| ಪೂರ್ಣಿಮಾ ಬಾಳಿಗಾ ಭಾಗವಹಿಸಿದ್ದರು.ಮಣಿಪಾಲ ಕಾಲೇಜ್‌ ಆಫ್‌ ಡೆಂಟಲ್‌ ಸೈನ್ಸಸ್‌ನ ಡೀನ್‌ ಡಾ| ದಿಲೀಪ್‌ ಜಿ. ನಾಯಕ್‌ ಅಧ್ಯಕ್ಷತೆ ವಹಿಸಿದ್ದರು. ಸಮ್ಮೇಳನದ ಸಲಹಾ ಮಂಡಳಿಯ ಡಾ| ರವಿಕಿರಣ ಒಂಗೋಲ್‌,ವಿದ್ಯಾರ್ಥಿ ಸಮಿತಿಯ ವಿದುಷಿ ಗುಪ್ತ, ಪಾವಸ್‌ ಶರ್ಮ ಉಪಸ್ಥಿತರಿದ್ದರು.

ನಾರಾಯಣ ಹೃದಯಾಲಯದ ಪ್ರಾಯೋಗಿಕ ಸಂಶೋಧನ ಘಟಕದ ಮುಖ್ಯಸ್ಥ ಡಾ| ಅಲೆºàನ್‌ ಸಿಗಮನಿ, ಕೆಎಲ್‌ಇ ದಂತ ವಿದ್ಯಾಲಯದ ಡಾ| ಪ್ರವೀಣ ಬೀರೂರ್‌, ಮಣಿಪಾಲದ ಡಾ| ಸಿರಾಜ್‌ ಎಂ., ಡಾ| ಅರುಣ್‌ ಶಾನಭಾಗ್‌ ಮತ್ತು ವಿದ್ಯಾರ್ಥಿ ಅನುಸಂಧಾನ ವೇದಿಕೆಯ ಸ್ಥಾಯಿ ಸಮಿತಿಯ ಸದಸ್ಯರಾದ ಡಾ| ಸಂಚಿತಾ ಚಂದರ್‌, ಡಾ| ಸಾನಾ ಚಾವ್ಲಾ ಹಾಗೂ ಡಾ| ಹುಸೈನ್‌ ಲೋಖಂಡವಾಲಾ ವಿವಿಧ ವಿಷಯಗಳ ಕುರಿತಾಗಿ ಉಪನ್ಯಾಸ ನೀಡಿದರು.ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

“ಸ್ಕೋರ್‌-2′ ಸಮಾವೇಶದಲ್ಲಿ ದೇಶದ ವಿವಿಧ ಕಾಲೇಜುಗಳಿಂದ ಆಗಮಿಸಿದ ಸುಮಾರು 500 ಮಂದಿ ವಿದ್ಯಾರ್ಥಿ ಪ್ರತಿನಿಧಿಗಳು ಭಾಗವಹಿಸಿದ್ದರು. ಸಮ್ಮೇಳನದಲ್ಲಿ ಡೆಂಟಲ್‌ ಒಲಿಂಪಿಕ್ಸ್‌, ಶೈಕ್ಷಣಿಕ ವೀಡಿಯೋ ಪ್ರಸ್ತುತಿ, ಆರೋಗ್ಯ ಶಿಕ್ಷಣ ಮತ್ತಿತರ ವಿಷಯಗಳ ಬಗ್ಗೆ ವಿಚಾರಮಂಡನೆ ನಡೆಯಿತು. 
 
ಟಾಪ್ ನ್ಯೂಸ್

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.