ಒಳಾಂಗಣ ಸ್ಟೇಡಿಯಂ ನಿರ್ಮಾಣಕ್ಕೆ ಚಿಂತನೆ

Team Udayavani, Mar 3, 2019, 7:47 AM IST

olangana.jpg

ರಾಮನಗರ: ಜಿಲ್ಲಾ ಕೇಂದ್ರ ರಾಮನಗರದಲ್ಲಿ ಸುಸಜ್ಜಿತ ಒಳಾಂಗಣ ಸ್ಟೇಡಿಯಂ ನಿರ್ಮಾಣಕ್ಕೆ ಚಿಂತನೆ ನಡೆದಿದೆ ಎಂದು ಶಾಸಕಿ ಅನಿತಾ ಭರವಸೆ ನೀಡಿದರು. ನಗರದ ಅಂಬೇಡ್ಕರ್‌ ಭವನದಲ್ಲಿ ಜಿಲ್ಲಾಡಳಿತ ಹಾಗೂ ನಗರಸಭೆ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ವಿವಿಧ ಯೋಜನೆಯಡಿ ಸೌಲಭ್ಯಗಳ ವಿತರಣಾ ಸಮಾರಂಭ,

ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಗೂ ಶಹರಿ ಸಮೃದ್ಧಿ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಗರ ವ್ಯಾಪ್ತಿಯ ಅರ್ಕಾವತಿ ನದಿ ಪಾತ್ರದ ಅಭಿವೃದ್ಧಿಗೆ ಈಗಾಗಲೇ ನಿರ್ಧರಿಸಲಾಗಿದೆ. ಇದೇ ಯೋಜನೆಯಲ್ಲಿ ವ್ಯಾಯಾಮ ಶಾಲೆ, ವಾಕಿಂಗ್‌ ಪಾಥ್‌ ನಿರ್ಮಾಣಕ್ಕೂ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಕ್ಷೇತ್ರದ ಅಭಿವೃದ್ಧಿಗೆ 380ಕೋಟಿ ರೂ. ಅನುದಾನ: ಕ್ಷೇತ್ರದಲ್ಲಿ ಮೂಲ ಸೌಕರ್ಯಗಳ ವೃದ್ಧಿಗೆ ಸರ್ಕಾರ 380 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಎಸ್‌ಎಸ್‌ಸಿ ಅನುದಾನದಡಿಯಲ್ಲಿ ನಗರದಲ್ಲಿ ಕುಡಿಯುವ ನೀರು ಹಾಗೂ ಚರಂಡಿ ನಿರ್ಮಾಣಕ್ಕೆ ಕಾಮಗಾರಿಗಾಗಿ 10 ಕೋಟಿ ರೂ. ಅನುದಾನ, ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ 10 ಕೋಟಿ ರೂ. ಹಣ ಮಂಜೂರಾಗಿದೆ. ತಾಲೂಕಿನ ಸಮಗ್ರ ಅಭಿವೃದ್ಧಿಗೆ ವಿವಿಧೆಡೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಲಾಗಿದೆ. ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಗ್ರಾಮೀಣಾಭಿವೃದ್ಧಿ ಹಾಗೂ ನಗರಾಭಿವೃದ್ಧಿಗೆ ಬದ್ಧರಾಗಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದಲ್ಲೇ ಶಾಸಕಿಯಾಗಿ ಜನರ ಸೇವೆ ಮಾಡುವುದಾಗಿ ತಿಳಿಸಿದರು. 

ಇಸ್ರೇಲ್‌ ಮಾದರಿ ಕೃಷಿ ಸಿಎಂ ಕನಸು: ರಾಜ್ಯದಲ್ಲಿ ಇಸ್ರೇಲ್‌ ಮಾದರಿ ಕೃಷಿ ಕೈಗೊಳ್ಳವುದು ಸಿಎಂ ಅವರ ಕನಸಾಗಿದೆ. ರೈತರ ಬಗ್ಗೆ ಅವರಿಗೆ ಅತೀವ ಕಾಳಜಿ ಇರುವುದರಿಂದಲೇ 48 ಸಾವಿರ ಕೋಟಿ ರೂ. ಸಾಲ ಮನ್ನ ಮಾಡಿದ್ದಾರೆ. ರೈತರಿಗೆ ಋಣ ಮುಕ್ತ ಪತ್ರ ಸದ್ಯದಲ್ಲೇ ದೊರೆಯಲಿದೆ. ಸಿಎಂ ಕುಮಾರಸ್ವಾಮಿಗೆ ಬಡವರ ಬಗ್ಗೆಯೂ ಕಾಳಜಿ ಹೆಚ್ಚಿದೆ. ರಸ್ತೆ ಬದಿಯ ವ್ಯಾಪಾರಿಗಳು ಅನಧಿಕೃತ ವ್ಯಕ್ತಿಗಳಿಂದ ಹೆಚ್ಚಿನ ಬಡ್ಡಿದರಕ್ಕೆ ಸಾಲ ಪಡೆಯುವದನ್ನು ತಪ್ಪಿಸಲು ಬ್ಯಾಂಕುಗಳ ಮೂಲಕವೇ ಬಡ್ಡಿರಹಿತ ಸಾಲ ಪಡೆಯಲು ಬಡವರ ಬಂಧು ಯೋಜನೆಯನ್ನು ಜಾರಿಗೆ ತಂದಿದ್ದಾರೆ ಎಂದು ಹೇಳಿದರು.

ಅರ್ಹರಿಗೆ ಶೀಘ್ರ ಮಂಜೂರಾತಿ ಪತ್ರ ವಿತರಣೆ: ತಾಲೂಕಿನಲ್ಲಿ ವಸತಿ ರಹಿತರಿಗೆ ನಿವೇಶನ ಮತ್ತು ಮನೆ ನಿರ್ಮಿಸಿಕೊಳ್ಳಲು ತಾವು ಬದ್ಧರಾಗಿದ್ದೇವೆ. ಶೀಘ್ರದಲ್ಲೇ ಫ‌ಲಾನುಭವಿಗಳಿಗೆ ಮಂಜೂರಾತಿ ಪತ್ರಗಳನ್ನು ವಿತರಣೆ ಮಾಡಲಾಗುವುದು. ಲೋಕಸಭಾ ಚುನಾವಣೆಗೆ ಏ.5ರೊಳಗೆ ನೀತಿ ಸಂಹಿತಿ ಜಾರಿಗೆ ಬರಲಿದೆಎಂದು ಹೇಳಲಾಗುತ್ತಿದೆ. ಹೀಗಾಗಿ ತಾಲೂಕು ಅಭಿವೃದ್ಧಿ ಕಾಮಗಾರಿಗಳನ್ನು ತರಾತುರಿಯಲ್ಲೇ ಆರಂಭಿಸಲಾಗುತ್ತಿದೆ ಎಂದರು. 

ರಾಮನಗರ ಅಭಿವೃದ್ಧಿಗೆ ಶ್ರಮ: ಉಪಚುನಾವಣೆಯ ವೇಳೆ ಹಲವು ಭಾಗಗಳಲ್ಲಿ ಮಹಿಳೆಯರು ಕುಡಿಯುವ ನೀರು ಹಾಗೂ ಚರಂಡಿ ವ್ಯವಸ್ಥೆ ಕುರಿತು ತಮ್ಮ ಗಮನ ಸೆಳೆದಿದ್ದರು. ಈ ಸಮಸ್ಯೆ ನಿವಾರಣೆಗಾಗಿ ಶ್ರಮಿಸುತ್ತಿರುವುದಾಗಿ ಹೇಳಿದರು. ತಾವು ಶಾಸಕಿಯಾಗಿ ಆಯ್ಕೆಯಾಗಿ 100 ದಿನ ಕಳೆದಿದೆ, ರಾಮನಗರ ಅಭಿವೃದ್ಧಿಗೆ ಶ್ರಮಿಸುವ ಭರವಸೆ ನೀಡಿದರು.

ಈ ವೇಳೆಯಲ್ಲಿ ನಗರಸಭೆ ಅಧ್ಯಕ್ಷೆ ರತ್ನಮ್ಮ, ಉಪಾಧ್ಯಕ್ಷೆ ಮಂಗಳಾ, ಸದಸ್ಯರಾದ ಚೇತನ್‌ ಕುಮಾರ್‌, ಲೋಹಿತ್‌ ಬಾಬು, ರವಿ, ಮಂಜುನಾಥ್‌, ತಾಲೂಕು ಜೆಡಿಎಸ್‌ ಘಟಕದ ಅಧ್ಯಕ್ಷ ರಾಜಶೇಖರ್‌, ಜೆಡಿಎಸ್‌ ರಾಜ್ಯ ವಕ್ತಾರ ಬಿ.ಉಮೇಶ್‌, ತಹಶೀಲ್ದಾರ್‌ ರಾಜು, ನಗರಸಭೆ ಪೌರಾಯುಕ್ತೆ ಶುಭಾ ಭಾಗವಹಿಸಿದ್ದರು. 
 
ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ: ರಾಮನಗರ ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿ, ಕಟ್ಟಡ ನಿರ್ಮಾಣ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಅನಿತಾ ಶನಿವಾರ ಭೂಮಿ ಪೂಜೆ ನೆರವೇರಿಸಿದರು. ತಾಲೂಕಿನ ಕೆಂಪನಹಳ್ಳಿ ಗೇಟ್‌ ಬಳಿ 2.30 ಕೋಟಿ ರೂ. ವೆಚ್ಚದ ಕೆಂಜಿಗನಹಳ್ಳಿ ಕಾಲೋನಿ ಮೂಲಕ ಕೆಂಪನಹಳ್ಳಿ ಬಿಎಂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕರು,

ಬಾಲಕರ ಸರ್ಕಾರ ಪದವಿ ಪೂರ್ವ ಕಾಲೇಜು ಎ ಮತ್ತು ಬಿ ಬ್ಲಾಕ್‌ಗಳ ಕಟ್ಟಡ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ 9 ಕೋಟಿ 90 ಲಕ್ಷ ರೂ. ವೆಚ್ಚದಲ್ಲಿ ಎ ಮತ್ತು ಬಿ ಬ್ಲಾಕ್‌ಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಹಾಗೂ ಮಹಿಳಾ ಸರ್ಕಾರಿ ಪಾಲಿಟೆಕ್ನಿಕ್‌ನ 3 ಮತ್ತು 4ನೇ ಮಹಡಿ ಹಾಗೂ ವಸತಿ ನಿಲಯ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರೆವೇರಿಸಿದರು. 

ಜಾನಪದ ಲೋಕದಲ್ಲಿ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನ ಹಾಸ್ಟೆಲ್‌ ಲೈಬ್ರರಿ ಹಾಗೂ ಕಾರ್ಯಾಗಾರ ಉದ್ಘಾಟಿಸಿದರು. ನಗರಸಭೆಯ 31ನೇ ವಾರ್ಡ್‌ನ ಮಾರಮ್ಮನ ದೇವಾಲಯದ ಬಳಿ ವಾಟರ್‌ ಟ್ಯಾಂಕ್‌, ರಾಯರದೊಡ್ಡಿ ಬಸ್‌ ನಿಲ್ದಾಣ ಸೇರಿದಂತೆ ಕೆಲ ವಾರ್ಡ್‌ಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರೆವೇರಿಸಿದರು. 

ಟಾಪ್ ನ್ಯೂಸ್

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.