ಜಿಲ್ಲೆಯಲ್ಲಿ ಆರೋಗ್ಯಕಾರ್ಡ್‌ ವಿತರಣೆ ಆರಂಭ


Team Udayavani, Mar 3, 2019, 7:47 AM IST

jill-arog.jpg

ಹಾಸನ: ಆಯುಷ್ಮಾನ್‌ ಭಾರತ – ಆರೋಗ್ಯ ಕರ್ನಾಟಕ ಯೋಜನೆಯ ಫ‌ಲಾನುಭವಿಗಳು ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ( ಹಿಮ್ಸ್‌) ಬೋಧಕ ಆಸ್ಪತ್ರೆಯಲ್ಲಿ ನೋಂದಣಿ ಮಾಡಿಕೊಂಡು ಆರೋಗ್ಯ ಕಾರ್ಡ್‌ ಪಡೆಯುವ ವ್ಯವಸ್ಥೆ ಮಾಡಲಾಗಿದೆ ವೈದ್ಯಕೀಯ ಕಾಲೇಜು ನಿರ್ದೇಶಕ ಡಾ.ಬಿ.ಸಿ.ರವಿಕುಮಾರ್‌ ತಿಳಿಸಿದರು.

ಫ‌ಲಾನುಭವಿಗಳಿಗೆ ಆರೋಗ್ಯ ಕಾರ್ಡ್‌ ವಿತರಿಸಿ ಮಾತನಾಡಿದ ಅವರು, ಈ ಹಿಂದೆ ಇದ್ದ ಯಶಸ್ವಿನಿ, ಮುಖ್ಯಮಂತ್ರಿ ಹರೀಶ್‌ ಸಾಂತ್ವನ, ವಾಜಪೇಯಿ ಆರೋಗ್ಯಶ್ರೀ ಮತ್ತಿತರ ಆರೋಗ್ಯ ಕಾರ್ಯಕ್ರಮಗಳನ್ನು ವಿಲೀನಗೊಳಿಸಿ ರಾಜ್ಯ ಸರ್ಕಾರ ಕಳೆದ ವರ್ಷದ ಜೂನ್‌ 1 ರಿಂದ ಆರೋಗ್ಯ ಕರ್ನಾಟಕ ಯೋಜನೆಯನ್ನು ಪ್ರಾರಂಭಿಸಿತು. ಕೇಂದ್ರ ಸರ್ಕಾರವು ಇದೇ ಮಾದರಿಯಲ್ಲಿ ಆಯುಷ್ಮಾನ್‌ ಭಾರತ ಎಂಬ ಆರೋಗ್ಯ ಯೋಜನೆಯನ್ನು ಕಳೆದ ವರ್ಷ ಸೆ.23 ರಂದು ಜಾರಿಗೆ ತಂದಿತು.

ಒಂದೇ ಉದ್ದೇಶ ಹೊಂದಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರದ ಆರೋಗ್ಯ ಸೇವಾ ಕಾರ್ಯಕ್ರಮಗಳನ್ನು ಸೇರಿಸಿ ಆಯುಷ್‌ ಭಾರತ – ಆರೋಗ್ಯ ಕರ್ನಾಟಕ ಯೋಜನೆಯನ್ನು ಕಳೆದ ವರ್ಷ ಡಿಸೆಂಬರ್‌ 20 ರಂದು ಘೋಷಣೆ ಮಾಡಲಾಗಿದೆ ಎಂದರು. ಈ ಯೋಜನೆಯಲ್ಲಿ ನೋಂದಾಯಿಸಿಕೊಂಡವರು ದೇಶದ ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ವಿವರ ನೀಡಿದರು.

ಹಿಮ್ಸ್‌ನಲ್ಲಿ ಕಾರ್ಡ್‌ ವಿರಣೆ: ಹಾಸನ ನಗರದಲ್ಲಿ ಆಯುಷ್‌ ಭಾರತ – ಆರೋಗ್ಯ ಕರ್ನಾಟಕ ಯೋಜನೆಯ ಆರೋಗ್ಯ ಕಾರ್ಡ್‌ನ್ನು ಹಾಸನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಫೆ.20 ರಿಂದ ವಿತರಿಸಲಾಗುತ್ತಿದೆ. ಕಾರ್ಡ್‌ ಪಡೆಯಬೇಕಾದರೆ ಫ‌ಲಾನುಭವಿಗಳು ಆಧಾರ್‌ ಕಾರ್ಡ್‌, ಬಿಪಿಎಲ್‌ ಕಾರ್ಡ್‌ ಅಥವಾ ಎಪಿಎಲ್‌ ಕಾರ್ಡ್‌ ಪ್ರತಿಯೊಂದಿಗೆ 10 ರೂ. ಪಾವತಿಸಿ ಆರೋಗ್ಯ ಕಾರ್ಡ್‌ ಪಡೆಯಬಹುದು.

ಆಸ್ಪತ್ರೆಯ ಮೊದಲ ಮಹಡಿಯ ಕೊಠಡಿ ಸಂಖ್ಯೆ 147 ರಲ್ಲಿ ಹೊರ ರೋಗಿಗಳು, ಕೊಠಡಿ ಸಂಖ್ಯೆ 173 ರಲ್ಲಿ ಒಳ ರೋಗಿಗಳು ನೋಂದಾಯಿಸಿಕೊಂಡು ಆರೋಗ್ಯ ಕಾರ್ಡ್‌ ಪಡೆಯಬಹುದು. ಹಾಸನ ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಗಳು, ಹಿರಿಸಾವೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕೆಲವು ಸಮುದಾಯ ಆಸ್ಪತ್ರೆಗಳು ಸೇರಿ ಜಿಲ್ಲೆಯ 15 ಸರ್ಕಾರಿ ಆಸ್ಪತ್ರೆಗಳಲ್ಲಿ ನೋಂದಾಯಿಸಿಕೊಂಡು ಆರೋಗ್ಯ ಕಾರ್ಡ್‌ ಪಡೆಯುವ ವ್ಯವಸ್ಥೆ ಮಾಡಲಾಗಿದೆ ರಾಜ್ಯದ ಯಾವುದೇ ತಾಲೂಕು ಅಥವಾ ಜಿಲ್ಲಾ ಆಸ್ಪತ್ರೆಯಲ್ಲಿಯಾದರೂ ಹೆಸರು ನೋಂದಾಯಿಸಿಕೊಂಡು ಆರೋಗ್ಯ ಕಾರ್ಡ್‌ ಪಡೆಯಬಹುದಾಗಿದೆ ಎಂದು ತಿಳಿಸಿದರು. 

ಶಿಫಾರಸು ಪಡೆಯಲೇಬೇಕು: ಆರೋಗ್ಯ ಕಾರ್ಡ್‌ ಹೊಂದಿರುವ ಫ‌ಲಾನುಭವಿಗಳು ಸರ್ಕಾರ ನಿಗದಿಪಡಿಸಿರುವ ಉಚಿತ ಹಾಗೂ ರಿಯಾಯ್ತಿ ದರದ ಚಿಕಿತ್ಸೆ ಪಡೆಯಬೇಕಾದರೆ ಮೊದಲು ಸರ್ಕಾರಿ ಆಸ್ಪತ್ರೆಯ ವೈದ್ಯರ ಬಳಿ ಬಂದು ಸಲಹೆ ಪಡೆಯಬೇಕು.

ಸಂಬಂಧಿಸಿದ ರೋಗಕ್ಕೆ ಸರ್ಕಾರಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಸೌಲಭ್ಯವಿದ್ದರೆ ಸರ್ಕಾರ ಗುರ್ತಿಸಿರುವ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಹೋಗಲು ಅವಕಾಶವಿಲ್ಲ. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸಾ ಸೌಲಭ್ಯವಿಲ್ಲ ಎಂದು ಸಂಬಂಧಿಸಿದ ಸರ್ಕಾರಿ ಆಸ್ಪತ್ರೆಯ ವೈದ್ಯರು ಶಿಫಾರಸು ಮಾಡಿದರೆ ಮಾತ್ರ ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಆರೋಗ್ಯ ಕಾರ್ಡಿನ ನಿಬಂಧನೆಗಳಿಗೆ ಒಳಪಟ್ಟು ಉಚಿತ ಅಥವಾ ರಿಯಾಯ್ತಿ ದರದ ಚಿಕಿತ್ಸೆ ಪಡೆಯಬಹುದಾಗಿದೆ ಎಂದರು.

ಹಾಸನದಲ್ಲಿ ಮಂಗಳಾ ಆಸ್ಪತ್ರೆ, ಜನಪ್ರಿಯ ಆಸ್ಪತ್ರೆ, ಮಂಜುನಾಥ ಆಸ್ಪತ್ರೆ, ಎಸ್‌ಎಸ್‌ಎಂ ಆಸ್ಪತ್ರೆ ಆರೋಗ್ಯ ಕಾರ್ಡ್‌ ಹೊಂದಿರುವ ಫ‌ಲಾನುಭವಿಗಳಿಗೆ ಚಿಕಿತ್ಸೆ ನೀಡಲು ಆಯ್ಕೆಯಾಗಿವೆ. ಈ ಆಸ್ಪತ್ರೆಗಳಿಗೆ ರೋಗಿಗಳು ನೇರವಾಗಿ ಹೋಗಿ ಚಿಕಿತ್ಸೆ ಪಡೆದರೆ ಅಥವಾ ದಾಖಲಾದರೆ ಆರೋಗ್ಯ ಕಾರ್ಡ್‌ನಲ್ಲಿ ನಿಗದಿಪಡಿಸಿರುವ ಮೊತ್ತದ ಉಚಿತ ಆಥವಾ ರಿಯಾಯ್ತಿ ಚಿಕಿತ್ಸೆ ಸಿಗುವುದಿಲ್ಲ.

ಮೊದಲು ಹಾಸನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಹೋಗಿ ಅಲ್ಲಿನ ವೈದ್ಯರು ರೋಗ ಪರೀಕ್ಷೆ ಮಾಡಿ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸಾ ಸೌಲಭ್ಯವಿಲ್ಲವೆಂದು ಶಿಫಾರಸು ಪತ್ರ ಕೊಟ್ಟರೆ ಮಾತ್ರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯಬಹುದಾಗಿದೆ ಎಂದು ವಿವರ ನೀಡಿದರು. 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್‌ಕುಮಾರ್‌, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಕೆ.ಶಂಕರ್‌, ಹಾಸನ ವೈದ್ಯಕೀಯ ಕಾಲೇಜು ಆಡಳಿತಾಧಿಕಾರಿ ಕಲ್ಪಶ್ರೀ, ಸನಿವಾಸ ವೈದ್ಯ ಡಾ.ಕೃಷ್ಣಮೂರ್ತಿ, ಡಾ.ವೇಣುಗೋಪಾಲ್‌, ಡಾ.ಪ್ರವೀಣ್‌ ಅವರೂ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು. 

ಆರೋಗ್ಯ ಕಾರ್ಡ್‌ ಸೌಲಭ್ಯಗಳು: ಆಯುಷ್‌ ಭಾರತ – ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾಯಿಸಿಕೊಳ್ಳುವ ಬಿಪಿಎಲ್‌ ಕಾರ್ಡ್‌ ಹೊಂದಿರುವ ಒಂದು ಕುಟುಂಬಕ್ಕೆ ವಾರ್ಷಿಕ 5 ಲಕ್ಷ ರೂ. ವರೆಗೆ, ಎಪಿಎಲ್‌ ಕಾರ್ಡ್‌ ಹೊಂದಿರುವ ಕುಟುಂಬಕ್ಕೆ 1.50 ಲಕ್ಷ ರೂ. ವರೆಗೂ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. 1,650 ರೋಗಗಳಿಗೆ ಆರೋಗ್ಯ ಕಾರ್ಡ್‌ ಹೊಂದಿರುವವರು ದೇಶದ ಯಾವುದೇ ಆಸ್ಪತ್ರೆಯಲ್ಲಿ ಸರ್ಕಾರ ನಿಗದಿಪಡಿಸಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ವೈದ್ಯಕೀಯ ಕಾಲೇಜು ನಿರ್ದೇಶಕ ಡಾ.ಬಿ.ಸಿ.ರವಿಕುಮಾರ್‌ ಹೇಳಿದರು. 

ಕಾರ್ಡ್‌ ವಿತರಣೆ ನಿರಂತರ: ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಿರಂತರವಾಗಿ ಆರೋಗ್ಯ ಕಾರ್ಡ್‌ ವಿತರಿಸಲಾಗುತ್ತದೆ. ಹಾಗಾಗಿ ಸಾರ್ವಜನಿಕರು ನೂಕು ನುಗ್ಗಲಿನಲ್ಲಿ ಕಾರ್ಡ್‌ ಪಡೆಯುವ ಅಗತ್ಯವಿಲ್ಲ. ಪ್ರತಿದಿನ 200 ರಿಂದ 300 ಕಾರ್ಡ್‌ ವಿತರರಣೆ ಮಾಡುವ ವ್ಯವಸ್ಥೆ ಮಾಡಲಾಗಿದೆ.

ತಾಲೂಕು ಆಸ್ಪತ್ರೆಗಳಲ್ಲೂ ಪಡೆಯಬಹುದಾಗಿದೆ ಎಂದು ಸ್ಪಷ್ಟಪಡಿಸಿದ ಅವರು, ಹಾಸನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಆರೋಗ್ಯ ಕಾರ್ಡ್‌ ವಿತರಣೆಗೆ ಡಾ.ಪ್ರವೀಣ್‌ ಅವರು ನೋಡಲ್‌ ಅಧಿಕಾರಿಯಾಗಿದ್ದು, ನಾಲ್ವರು ಗುಮಾಸ್ತರು, 10 ಡಾಟಾ ಎಂಟ್ರಿ ಆಪರೇಟರ್‌ಗಳು, 10 ಮಂದಿ ಆರೋಗ್ಯ ಮಿತ್ರ ಕಾರ್ಯಕರ್ತರು, 15 ಕಂಪ್ಯೂಟರ್‌, ಪ್ರಿಂಟರ್‌, ಸ್ಕಾನರ್‌ಗಳನ್ನು ಒದಗಿಸಲಾಗಿದೆ ಎಂದು ಡಾ.ಬಿ.ಸಿ.ರವಿಕುಮಾರ್‌ ತಿಳಿಸಿದರು. 

ಟಾಪ್ ನ್ಯೂಸ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

highcourt

ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ಸೂಚನೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.