ಬೆಂಕಿ ಬೀಳದಂತೆ ಮುನ್ನೆಚ್ಚರವಹಿಸಿ
Team Udayavani, Mar 3, 2019, 7:47 AM IST
ಚಾಮರಾಜನಗರ: ಬೇಸಿಗೆ ವೇಳೆ ಹೆಚ್ಚು ಅರಣ್ಯ ಸಿಬ್ಬಂದಿ ನಿಯೋಜಿಸಿ, ಅರಣ್ಯದಲ್ಲಿ ಬೆಂಕಿ ಅನಾಹುತಗಳು ಸಂಭವಿಸದಂತೆ ನೋಡಿಕೊಳ್ಳಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ, ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಂಡೀಪುರ ಹುಲಿ ರಕ್ಷಿತ ಅರಣ್ಯದಲ್ಲಿ ಬೃಹತ್ ಪ್ರಮಾಣದ ಕಾಡ್ಗಿಚ್ಚು ಸಂಭವಿಸಿದೆ. ಇನ್ನೂ ಹಲವೆಡೆ ಬೇಸಿಗೆ ಸಂದರ್ಭದಲ್ಲಿ ಅಗ್ನಿ ಅನಾಹುತ ಪ್ರಕರಣಗಳು ವರದಿಯಾಗುತ್ತಿವೆ. ಹೀಗಾಗಿ ಬೇಸಿಗೆ ವೇಳೆ ಯಾವುದೇ ಅವಘಡಗಳಿಗೆ ಅವಕಾಶವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಬೆಂಕಿ ತೀವ್ರವಾಗಿ ಹರಡದಂತೆ ಸಾಕಷ್ಟು ಪೂರ್ವ ಕ್ರಮಗಳಿಗೆ ಸಿದ್ಧತೆ ಮಾಡಿಕೊಂಡಿರಬೇಕು ಎಂದರು.
ವಿಶೇಷ ಗಮನ: ಅರಣ್ಯ ಪ್ರದೇಶದಲ್ಲಿ ಇರುವ ಕೆರೆ, ಇತರೆ ನೀರಿನ ಮೂಲಗಳ ಸಮರ್ಪಕ ನಿರ್ವಹಣೆ ಮಾಡಬೇಕು. ಪ್ರಾಣಿಪಕ್ಷಿಗಳಿಗೆ ನೀರು ಲಭ್ಯ ಆಗಬೇಕು. ನೀರಿನ ಸೌಕರ್ಯಗಳಿಗೆ ವಿಶೇಷ ಗಮನ ನೀಡಬೇಕೆಂದು ತಾಕೀತು ಮಾಡಿದರು.
ಮೇವು ಕಿಟ್: ಜಿಲ್ಲೆಯಲ್ಲಿ ಮೇವು ದಾಸ್ತಾನು ಮಾಡಬೇಕು. ಈಗಾಗಲೇ ಮೇವು ಕಿಟ್ ಅನ್ನು ಎಷ್ಟು ಪ್ರಮಾಣದಲ್ಲಿ ವಿತರಿಸಲಾಗಿದೆ. ಎಷ್ಟು ಪ್ರಮಾಣದಲ್ಲಿ ಬೆಳೆಯಲಾಗಿದೆ ಎಂಬ ಬಗ್ಗೆ ವರದಿ ನೀಡುವಂತೆ ಪಶುಸಂಗೋಪನೆ ಉಪನಿರ್ದೇಶಕರಿಗೆ ಸೂಚಿಸಿದರು.
ಫೋಟೋದೊಂದಿಗೆ ವರದಿ: ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಮಾತನಾಡಿ, ಮೇವು ಕಿಟ್ ವಿತರಣೆ ಹಾಗೂ ಮೇವು ಬೆಳೆದ ಕುರಿತು ಸಮಗ್ರವಾಗಿ ಛಾಯಾಚಿತ್ರಗಳೊಂದಿಗೆ ವರದಿ ಸಲ್ಲಿಸಬೇಕು. ಮುಂದೆ ಜಿಲ್ಲೆಯ ಯಾವ ಯಾವ ಭಾಗಗಳಲ್ಲಿ ಮೇವು ಕಿಟ್ ವಿತರಣೆ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡುವಂತೆ ತಿಳಿಸಿದರು.
ಕೃಷಿ ಇಲಾಖೆ ಕೈಗೊಂಡಿರುವ ಇಲಾಖೆ ಕಾರ್ಯಕ್ರಮಗಳ ಕುರಿತು ಮಾಹಿತಿ ಪಡೆದ ಸಚಿವರು, ಬಾಕಿ ಇರುವ ಬೆಳೆ ವಿಮೆ ಪರಿಹಾರ ವಿತರಣೆಗೆ ಕ್ರಮ ವಹಿಸಬೇಕು. ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ನೆರವು ಇಲಾಖೆ ವತಿಯಿಂದ ನೀಡಬೇಕೆಂದು ತಿಳಿಸಿದರು.
ಕಾಮಗಾರಿ ಪೂರ್ಣಗೊಳಿಸಿ: ಚಾಮರಾಜನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕೈಗೊಂಡಿರುವ ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಚಾಮರಾಜನಗರದಲ್ಲಿ ಅಪೂರ್ಣಗೊಂಡಿರುವ ಕಡೆ ರಸ್ತೆ ಕೆಲಸ ಶೀಘ್ರವಾಗಿ ಪೂರೈಸಬೇಕು. ನಗರಸಭೆ ಅಧಿಕಾರಿಗಳು, ಹೆದ್ದಾರಿ ಇಲಾಖೆ ಅಧಿಕಾರಿಗಳು ಚರ್ಚಿಸಿ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಉಸ್ತುವಾರಿ ಸಚಿವರು ಸೂಚಿಸಿದರು.
ಕುಡಿವ ನೀರು: ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಯಾವುದೇ ಅಭಾವ ಉಂಟಾಗದಂತೆ ನೋಡಿಕೊಳ್ಳಬೇಕು. ಸಮಸ್ಯೆ ಇರುವ ಪ್ರದೇಶಗಳಿಗೆ ಆದ್ಯತೆ ಮೇರೆಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು. ಸಣ್ಣ ನೀರಾವರಿ ಇಲಾಖೆ, ಕಾವೇರಿ ನೀರಾವರಿ ನಿಗಮದ ವತಿಯಿಂದ ಕೈಗೆತ್ತಿಕೊಂಡಿರುವ ಕುಡಿಯುವ ನೀರಿನ ಕಾಮಗಾರಿ ಸಹ ತ್ವರಿತವಾಗಿ ಪೂರ್ಣಗೊಳಿಸಬೇಕೆಂದರು.
ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕೊಳಚೆ ನಿರ್ಮೂಲನಾ ಮಂಡಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಲೋಕೋಪಯೋಗಿ ಇಲಾಖೆ, ಸಾಮಾಜಿಕ ಅರಣ್ಯ ಸೇರಿದಂತೆ ವಿವಿಧ ಇಲಾಖೆಗಳು ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲಿಸಲಾಯಿತು. ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.