ಚಿಕ್ಕಬಳ್ಳಾಪುರ ಕ್ಷೇತ್ರ “ಕೈ’ ಭದ್ರಕೋಟೆ: ಶಿವಶಂಕರರೆಡ್ಡಿ
Team Udayavani, Mar 4, 2019, 1:37 AM IST
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಕಾಂಗ್ರೆಸ್ಗೆ ಮೊದಲಿನಿಂದಲೂ ಭದ್ರಕೋಟೆ. ಹಾಗಾಗಿ, ಕ್ಷೇತ್ರವನ್ನು ಜೆಡಿಎಸ್ ಪಕ್ಷ ಕೇಳುವುದಿಲ್ಲ ಎಂಬ ವಿಶ್ವಾಸ ತಮಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ಪ್ರತಿಪಾದಿಸಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿ, ಸಾಮರಸ್ಯದಿಂದ ಎರಡೂ ಪಕ್ಷಗಳ ಉಭಯ ನಾಯಕರು ಶೀಘ್ರದಲ್ಲಿಯೆ ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಸಿ, ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಈ ಕ್ಷೇತ್ರ ಕಾಂಗ್ರೆಸ್ಗೆ ಮೊದಲಿನಿಂದಲೂ ಭದ್ರಕೋಟೆ. ಹಾಗಾಗಿ, ಕ್ಷೇತ್ರವನ್ನು ಜೆಡಿಎಸ್ ಪಕ್ಷ ಕೇಳುವುದಿಲ್ಲ ಎಂಬ ವಿಶ್ವಾಸ ತಮಗಿದೆ. ಒಂದು ವೇಳೆ, ಜೆಡಿಎಸ್ ಪಕ್ಷ ಚಿಕ್ಕಬಳ್ಳಾಪುರ ಕ್ಷೇತ್ರ ಬಿಟ್ಟು ಕೊಡುವಂತೆ ಮನವಿ ಮಾಡಿದರೆ, ನಾವೂ ಕೂಡ ಕ್ಷೇತ್ರಕ್ಕಾಗಿ ಪಟ್ಟು ಹಿಡಿಯುತ್ತೇವೆ ಎಂದರು.
ಕೇಂದ್ರ ಸರ್ಕಾರ ರಾಜ್ಯದ ಬರ ಪರಿಸ್ಥಿತಿಗೆ ಪರಿಹಾರ ಕೊಡುವಲ್ಲಿ ತಾರತಮ್ಯ ಧೋರಣೆ ಅನುಸರಿಸುತ್ತಿದೆ ಎಂದು ಟೀಕಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.