ಬಿಜೆಪಿಯಲ್ಲಿ ರಣೋತ್ಸಾಹ ಮೂಡಿಸಿದ ಏರ್ ಸ್ಟ್ರೈಕ್
Team Udayavani, Mar 5, 2019, 12:30 AM IST
ಬೆಂಗಳೂರು: ಲೋಕಸಭಾ ಚುನಾವಣೆ ಸಿದ್ಧತೆಗೆ ಆರಂಭಿಕ ಹಿನ್ನಡೆ, ಪಕ್ಷದಿಂದ ಆಯೋಜಿಸಿದ್ದ ಅಭಿಯಾನ, ಕಾರ್ಯಕ್ರಮಗಳು ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಕಾಣದಿರುವ ಬಗ್ಗೆ ಆತಂಕಗೊಂಡಿದ್ದ ರಾಜ್ಯ ಬಿಜೆಪಿಗೆ ಭಾರತೀಯ ವಾಯುಸೇನೆಯ “ಏರ್ ಸ್ಟ್ರೈಕ್’ ವರದಾನವಾಗಿ ಪರಿಣಮಿಸಿದಂತಿದೆ.
ಪಕ್ಷದ ಕಾರ್ಯಕರ್ತರನ್ನು ಸಂಘಟನೆ ಕಾರ್ಯಕ್ಕೆ ಉತ್ತೇಜಿಸಲು ರಾಜ್ಯ ಬಿಜೆಪಿ ನಾನಾ ಕಸರತ್ತು ನಡೆಸಿತ್ತು. ಈ ನಡುವೆ ಸಂಭವಿಸಿದ “ಏರ್‌ಸ್ಟ್ರೈಕ್’ ವೈಮಾನಿಕ ದಾಳಿ ಬಳಿಕ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗುವ ಮೂಲಕ ಪಕ್ಷ ಸಂಘಟನೆಗೆ ಮುಂದಾಗಿರುವುದು ಬಿಜೆಪಿಗೆ ಅನುಕೂಲಕರವಾಗಿ ಪರಿಣಮಿಸಿದೆ. ಜತೆಗೆ ಬಿಜೆಪಿಯೇತರರು, ತಟಸ್ಥರಾಗಿ ಉಳಿದವರು, ಸಾರ್ವಜನಿಕರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಬಿಜೆಪಿಯತ್ತ ವಾಲುತ್ತಿರುವ ಲಕ್ಷಣ ಕಾಣುತ್ತಿರುವುದು ಪಕ್ಷದ ಚುನಾವಣಾ ರಣೋತ್ಸಾಹ ಇಮ್ಮಡಿಗೊಳಿಸಿದೆ.
ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಳೆದ ಡಿಸೆಂಬರ್ ಅಂತ್ಯ, ಜನವರಿ ಆರಂಭದಿಂದಲೇ ಬಿಜೆಪಿ ರಾಷ್ಟ್ರಾದ್ಯಂತ ಚುನಾವಣೆ ಪೂರ್ವ ಸಿದ್ಧತೆಗೆ ಚಾಲನೆ ನೀಡಿತ್ತು. ಅದರಂತೆ ಬಹಳಷ್ಟು ರಾಜ್ಯಗಳಲ್ಲಿ ಪಕ್ಷ ಸಂಘಟನೆ ಕಾರ್ಯವೂ ಆರಂಭವಾಗಿತ್ತು. ಆದರೆ ರಾಜ್ಯ ಬಿಜೆಪಿ ಶಾಸಕರ ದೆಹಲಿ ರೆಸಾರ್ಟ್ ವಾಸ್ತವ್ಯ. ಮೈತ್ರಿ ಸರ್ಕಾರದ ಸಂಖ್ಯಾಬಲ ಇಳಿಕೆ ಮಾಡುವ ಪ್ರಯತ್ನ, ರಾಜ್ಯಪಾಲರ ಜಂಟಿ ಅಧಿವೇಶನ, ಬಜೆಟ್ ಅಧಿವೇಶನದಲ್ಲಿ ಪಾಲ್ಗೊಳ್ಳುವುದರಲ್ಲೇ ರಾಜ್ಯ ಬಿಜೆಪಿ ನಾಯಕರು ಸಕ್ರಿಯರಾಗಿದ್ದರು. ಇನ್ನೊಂದೆಡೆ “ಆಪರೇಷನ್ ಕಮಲ’ದ ಭಾಗವಾಗಿ ನಡೆದ “ಆಡಿಯೋ ಪ್ರಕರಣ’ದಿಂದಾಗಿ ಬಿಜೆಪಿ ಸಾಕಷ್ಟು ಮುಜುಗರಕ್ಕೆ ಒಳಗಾಗಿದ್ದು ಸಹ ಸಿದ್ಧತಾ ಕಾರ್ಯಕ್ಕೆ ಹಿನ್ನಡೆ ಉಂಟು ಮಾಡಿತ್ತು.
ಆರಂಭದಲ್ಲೇ ಸಿದ್ಧತೆ ವಿಳಂಬ: ಈ ಎಲ್ಲ ಬೆಳವಣಿಗೆ, ಗೊಂದಲದಿಂದಾಗಿ ರಾಜ್ಯ ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಸಿದ್ಧತಾ ಕಾರ್ಯ ವೇಗವನ್ನೇ ಪಡೆದಿರಲಿಲ್ಲ. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರು.
ಎಲ್ಲ ರಾಜ್ಯಗಳ ಬಿಜೆಪಿ ಅಧ್ಯಕ್ಷರೊಂದಿಗೆ ವಿಡಿಯೋ ಸಂವಾದ ನಡೆಸುವ ವೇಳೆ ಅನ್ಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಚುನಾವಣಾ ಸಿದ್ಧತಾ ಕಾರ್ಯ ಹಿಂದಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು.”ಆಡಿಯೋ ಪ್ರಕರಣ’ ಹಾಗೂ ಕಾಂಗ್ರೆಸ್‌ನ ಅತೃಪ್ತ ಶಾಸಕರು ಸದನಕ್ಕೆ ಹಾಜರಾದ ಬೆಳವಣಿಗೆ ನಂತರವಷ್ಟೇ ರಾಜ್ಯ ಬಿಜೆಪಿಯು ಲೋಕಸಭಾ ಚುನಾವಣೆಗೆ ಸಿದ್ಧತಾ ಕಾರ್ಯವನ್ನು ಚುರುಕುಗೊಳಿಸಿತು.
ಕಾರ್ಯಕರ್ತರಿಂದ ನಿರಾಸಕ್ತಿ: ಸರ್ಕಾರ ರಚನೆ ಪ್ರಯತ್ನ ದಲ್ಲೇ ತೊಡಗಿಸಿಕೊಂಡಿದ್ದ ರಾಜ್ಯ ನಾಯಕರೆಲ್ಲಾ ದಿಢೀರ್ ಲೋಕಸಭಾ ಚುನಾವಣೆ ಸಿದ್ಧತಾ ಕಾರ್ಯಗಳಲ್ಲಿ ಸಕ್ರಿಯರಾದರೂ ಕಾರ್ಯಕರ್ತರಿಂದ ನಿರೀಕ್ಷಿತ ಸ್ಪಂದನೆ ಸಿಗಲಿಲ್ಲ. ರಾಜ್ಯ ಬಿಜೆಪಿಯಲ್ಲಿನ ಬೆಳವಣಿಗೆಗಳು ಇದಕ್ಕೆ ಕಾರಣವಿರಬಹುದು. ಹಾಗಾಗಿ ಬಿಜೆಪಿ ವತಿಯಿಂದ ನಡೆದ ಕಾರ್ಯಕ್ರಮ, ಅಭಿಯಾನಗಳು ನಿರೀಕ್ಷಿತ ಯಶಸ್ಸು ಕಂಡಿರಲಿಲ್ಲ.
ಆರಂಭಿಕ ಹಿನ್ನಡೆ: ಬಿಜೆಪಿಯು “ನನ್ನ ಪರಿವಾರ- ಬಿಜೆಪಿ ಪರಿವಾರ’ ಅಭಿಯಾನವನ್ನು ಫೆಬ್ರವರಿಯಲ್ಲಿ ಹಮ್ಮಿಕೊಂಡಿತ್ತು. ಫೆ. 19- 20 ರಂದು ಎಲ್ಲ ಚುನಾಯಿತ ಪ್ರತಿನಿಧಿಗಳು ಒಳಗೊಂಡಂತೆ ಬೂತ್ ಮಟ್ಟದಲ್ಲಿ ಕನಿಷ್ಠ 25 ಮನೆ ಸಂಪರ್ಕ ಅಭಿಯಾನ ನಡೆಸಿ ಮನೆಗಳ ಮೇಲೆ ಧ್ವಜಾರೋಹಣ ನಡೆಸಿ, ಕರಪತ್ರ, ಸ್ಟಿಕ್ಕರ್ ಹಂಚುವ ಕಾರ್ಯಕ್ರಮ ಹಮ್ಮಿ ಕೊಂಡಿತ್ತು.ಆದರೆ ಕಾರ್ಯಕರ್ತರಿಂದ ನಿರೀಕ್ಷಿತ ಸ್ಪಂದನೆ ಸಿಕ್ಕಿರಲಿಲ್ಲ. ನಂತರ ನಡೆದ ಕಮಲ ಜ್ಯೋತಿ ಸಂಕಲ್ಪ ಕಾರ್ಯಕ್ರಮವೂ ನಿರೀಕ್ಷೆಯ ಮಟ್ಟ ತಲುಪಲಿಲ್ಲ ಎಂದು ರಾಜ್ಯ ನಾಯಕರೊಬ್ಬರು ಹೇಳಿದರು.
ಈ ನಡುವೆ ಉಗ್ರರ ಮೇಲೆ ಭಾರತೀಯ ವಾಯುಪಡೆಯ ವೈಮಾನಿಕ ದಾಳಿ, ಪಾಕ್ ವಶದಲ್ಲಿದ್ದ ವಿಂಗ್ ಕಮಾಂಡರ್ ಅಭಿನಂದನ್ ಸುರಕ್ಷಿತ ಬಿಡುಗಡೆ ಘಟನಾವಳಿ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿತು. ಅಂದರೆ ಮಾ. 2ರಂದು ರಾಜ್ಯದಲ್ಲಿ ನಡೆದ ಬಿಜೆಪಿ “ಕಮಲ ಸಂದೇಶ’ ಬೈಕ್ ರ್ಯಾಲಿ ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿತ್ತು. 195 ವಿಧಾನಸಭಾ ಕ್ಷೇತ್ರಗಳಲ್ಲಿ 1.28 ಲಕ್ಷ ಬೈಕ್‌ಗಳಲ್ಲಿ ರ್ಯಾಲಿ ನಡೆಸಿ ಸಂಚಲನ ಮೂಡಿಸಿದ್ದು, ರಾಜ್ಯ ನಾಯಕರ ಸಂತಸಕ್ಕೆ ಕಾರಣವಾಗಿದೆ.
ಜನರಲ್ಲಿ ಸುಪ್ತವಾಗಿದ್ದ ದೇಶಭಕ್ತಿ ಕೆಲ ವಿಶೇಷ ಸಂದರ್ಭದಲ್ಲಿ ಜಾಗೃತವಾ ಗುತ್ತದೆ. ಭಾರತೀಯ ವಾಯುಪಡೆಯ ದಾಳಿ ಬಳಿಕ ಈ ರೀತಿಯ ವಾತಾವರಣ ಸೃಷ್ಟಿಯಾಗಿದೆ. ಹಾಗಾಗಿ ಬಿಜೆಪಿಯವರು ಮಾತ್ರವಲ್ಲದೇ ಬಿಜೆಪಿಯೇತರರು ಸಂಭ್ರಮಿಸಿ ಬೆಂಬಲ ವ್ಯಕ್ತಪಡಿಸುತ್ತಿ ದ್ದಾರೆ.
– ಸಿ.ಟಿ. ರವಿ ರಾಜ್ಯ ಬಿಜೆಪಿ ಪ್ರ.ಕಾರ್ಯದರ್ಶಿ
– ಎಂ.ಕೀರ್ತಿಪ್ರಸಾದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.