ಉರ್ದು ಭವನಕ್ಕೆ 20 ಲಕ್ಷ ರೂ. ಅನುದಾನ
Team Udayavani, Mar 5, 2019, 7:45 AM IST
ಶಿಡ್ಲಘಟ್ಟ: ತಾಲೂಕಿನಲ್ಲಿ ಉರ್ದು ಭಾಷೆಯ ಅಭಿವೃದ್ಧಿಗಾಗಿ ಉರ್ದು ಭವನ ನಿರ್ಮಿಸಲು 20 ಲಕ್ಷ ರೂ. ಮಂಜೂರು ಮಾಡುವುದಾಗಿ ಶಾಸಕ ವಿ.ಮುನಿಯಪ್ಪ ತಿಳಿಸಿದರು. ನಗರದ ಮುಬಾರಕ್ ಶಾದಿಮಹಲ್‌ನಲ್ಲಿ ಉರ್ದು ಅಕಾಡೆಮಿ ವತಿಯಿಂದ ಆಯೋಜಿಸಿದ್ದ ಉರ್ದು ಶೈಕ್ಷಣಿಕ ಸಮ್ಮೇಳನ ಮತ್ತು ಕವಿ ಸಮ್ಮೇಳನ ಕಾರ್ಯಕ್ರಮದಲ್ಲಿ ಮಾತನಾಡಿದರು.
ತಾಲೂಕಿನಲ್ಲಿ ಉರ್ದು ಶಾಲೆಗಳ ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಸರ್ಕಾರಿ ಉರ್ದು ಶಾಲೆಯಲ್ಲಿ ಶಿಕ್ಷಕರ ಕೊರತೆ, ಶಿಥಿಲ ವ್ಯವಸ್ಥೆಯಲ್ಲಿರುವ ಶಾಲಾ ಕೊಠಡಿಗಳನ್ನು ದುರಸ್ತಿಗೊಳಿಸಿ ನೂತನ ಶಾಲಾ ಕಟ್ಟಡಗಳನ್ನು ನಿರ್ಮಿಸಲು ಸಹಕಾರ ನೀಡುವುದಾಗಿ ವಾಗ್ಧಾನ ಮಾಡಿದರು.
ಶಿಡ್ಲಘಟ್ಟದಲ್ಲಿ ಉರ್ದು ಭವನ ನಿರ್ಮಿಸಲು ತಮ್ಮ ಕ್ಷೇತ್ರಾಭಿವೃದ್ಧಿ ನಿಧಿಯಿಂದ 10 ಲಕ್ಷ ಮತ್ತು ನಗರಸಭೆಯಿಂದ 10 ಲಕ್ಷ ರೂ.ಮಂಜೂರು ಮಾಡಿಸುವುದಾಗಿ ಭರವಸೆ ನೀಡಿದರು. ವಿದ್ಯಾರ್ಥಿಗಳು ಉರ್ದು ಭಾಷೆಯ ಜೊತೆಗೆ ಕನ್ನಡ ಭಾಷೆ ಕಲಿಯಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಅವರ ಭವಿಷ್ಯ ಉಜ್ವಲಗೊಳಿಸಬೇಕೆಂದರು.
ರಾಜ್ಯ ಉರ್ದು ಅಕಾಡೆಮಿಯ ಅಧ್ಯಕ್ಷ ಮುನೀನ್ ಮುನಾವರ್ ಮಾತನಾಡಿ, ಪ್ರತಿಯೊಂದು ತಾಲೂಕು ಕೇಂದ್ರದಲ್ಲಿ ಉರ್ದು ಕಲಿಕಾ ಕೇಂದ್ರ ತೆರೆಯಲಾಗುತ್ತದೆ. ಸರ್ಕಾರ ಶಿಕ್ಷಕರ ಕೊರತೆಯನ್ನು ನೀಗಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ನಗರಸಭಾಧ್ಯಕ್ಷ ಬಿ.ಅಫರ್ ಪಾಷ, ರಾಜ್ಯ ಉರ್ದು ಅಕಾಡೆಮಿಯ ಸದಸ್ಯ ಶೇಖ್ ಫಯಾಜುದ್ದೀನ್, ಜಾಮೀಯಾ ಮಸೀದಿಯ ಅಧ್ಯಕ್ಷ ತಾಜ್‌ಪಾಷ, ಉಪಾಧ್ಯಕ್ಷ ಅಮೀರ್‌ಜಾನ್, ಜಾಮೀಯಾ ಮಸೀದಿಯ ಧರ್ಮಗುರು ಮೌಲಾನಾ ನಝರ್ ಸಲಾಮಿ, ಮದೀನಾ ಮಸೀದಿಯ ಅಧ್ಯಕ್ಷ ಎಚ್.ಎಸ್.ಫಯಾಜ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.