ಮುರ್ಡೇಶ್ವರದಲ್ಲಿ ಪಾಲಕಿ ಉತ್ಸವ-ಪುಷ್ಪ ರಥೋತ್ಸವ


Team Udayavani, Mar 5, 2019, 8:52 AM IST

hub-09.jpg

ಭಟ್ಕಳ: ಶಿವರಾತ್ರಿ ಪ್ರಯುಕ್ತ ಮುರ್ಡೇಶ್ವರದಲ್ಲಿ ಬೆಳಗ್ಗೆಯಿಂದಲೇ ವಿಶೇಷ ಅಭಿಷೇಕ, ಪೂಜೆ, ಉತ್ಸವಾದಿಗಳು ನಡೆದವು. ಪ್ರತಿವರ್ಷದಂತೆ ಈ ವರ್ಷವೂ ಪಾಲಕಿ ಉತ್ಸವ, ಪುಷ್ಪ ರಥೋತ್ಸವ ಜರುಗಿತು.

ಶಿವರಾತ್ರಿ ಪ್ರಯುಕ್ತ ಬೆಳಗ್ಗೆಯಿಂದಲೇ ಶ್ರೀ ದೇವರ ದರ್ಶನಕ್ಕೆ ಸರದಿಯ ಸಾಲು ಆರಂಭವಾಗಿದ್ದು, ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರಿಂದ ಸಾಲು ಬೆಳೆಯುತ್ತಲೇ ಇತ್ತು. ನಂತರ ಮಧ್ಯಾಹ್ನದ ಸುಮಾರಿಗೆ ಸ್ವಲ್ಪ ಕಡಿಮೆಯಾಗಿದ್ದರೂ ಸಂಜೆ ಮತ್ತೆ ಭಕ್ತರ ಸಂಖ್ಯೆ ಹೆಚ್ಚಿತ್ತು.

ಕಳೆದ ಕೆಲ ವರ್ಷಗಳಿಂದ ಶಿವಾರಾತ್ರಿಯಂದು ಉಪವಾಸವಾದ್ದರಿಂದ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆಯಾಗಲೀ ಫಲಹಾರದ ವ್ಯವಸ್ಥೆಯಾಗಲೀ ಇರಲಿಲ್ಲವಾಗಿತ್ತು. ಆದರೆ ಶಿವರಾತ್ರಿಯಂದು ಹಲವರು ಫಲಹಾರ ಮಾಡುವುದರಿಂದ ಶ್ರೀ ದೇವಸ್ಥಾನದ ವತಿಯಿಂದ ಈ ವರ್ಷದಿಂದ ಫಲಹಾರದ ವ್ಯವಸ್ಥೆ ಮಾಡಲು ಆಡಳಿತ ಧರ್ಮದರ್ಶಿ ಡಾ| ಆರ್‌.ಎನ್‌. ಶೆಟ್ಟಿಯವರ ಸೂಚನೆಯಂತೆ ಸಾವಿರಾರು ಜನರಿಗೆ ಮಧ್ಯಾಹ್ನದ ಫಲಹಾರದ ವ್ಯವಸ್ಥೆ ಮಾಡಲಾಯಿತು.

ಶಿವರಾತ್ರಿ ಉತ್ಸವ ಅಂಗವಾಗಿ ಸಂಜೆ ಶ್ರೀ ದೇವರ ಚಿನ್ನದ ರಥೋತ್ಸವು ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು. ಉತ್ಸವ ಮೂರ್ತಿಯ ಉತ್ಸವ ಓಲಗ ಮಂಟಪಕ್ಕೆ ಆಗಮಿಸಿ ಪೂಜಿಸಿದ ನಂತರ ಪುಷ್ಪ ರಥೋತ್ಸವ ನಡೆಯಿತು. ತಾಲೂಕಿನ ಶಿವ ಕ್ಷೇತ್ರಗಳಾದ ಪುರಾಣ ಪ್ರಸಿದ್ಧ ಚೋಳೇಶ್ವರದಲ್ಲಿಯೂ ಬೆಳಗ್ಗೆಯಿಂದಲೇ ಭಕ್ತರು ಆಗಮಿಸಿ ಶ್ರೀ ದೇವರಿಗೆ ಜಲಾಭಿಷೇಕ, ರುದ್ರಾಭಿಷೇಕ, ಪಂಚಾಮೃತಾಭಿಷೇಕ ಮಾಡಿ ಪೂಜೆ ಸಲ್ಲಿಸಿದರು.

ಬಂದರಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ಕುಟುಮೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಸಹಸ್ರ ಬಿಲ್ವಾರ್ಚನೆ, ಅಖಂಡ ಭಜನಾ ಕಾರ್ಯಕ್ರಮ ಭಕ್ತರ ಸಹಕಾರದಿಂದ ನಡೆಯಿತು. ನಗರದಲ್ಲಿರುವ ಶ್ರೀ ಶಾಂತೇರಿ ಕಾಮಾಕ್ಷಿ ದೇವಸ್ಥಾನ, ಆಸರಕೇರಿಯ ವಿರೂಪಾಕ್ಷ ದೇವಸ್ಥಾನ, ಮೂಡಭಟ್ಕಳದ ಈಶ್ವರ ದೇವಸ್ಥಾನ, ಬೈಲೂರಿನ ಮಾರ್ಕಾಂಡೇಶ್ವರ, ಮಾರೂಕೇರಿಯ ಕೊಡುಕಿ ಶಂಭುಲಿಂಗೇಶ್ವರ ದೇವಸ್ಥಾನ ಸೇರಿದಂತೆ ತಾಲೂಕಿನ ಶಿವಾಲಯಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಪೂಜೆ ಸಲ್ಲಿಸಿದರು.

ಪಾದಯಾತ್ರೆ: ಪ್ರತಿವರ್ಷದಂತೆ ಈ ವರ್ಷವೂ ಭಟ್ಕಳದ ಚೋಳೇಶ್ವರದಿಂದ ಶಿವಾನಿ ಶಾಂತಾರಾಮ ನೇತೃತ್ವದಲ್ಲಿ ಸುಮಾರು 700ಕ್ಕೂ ಹೆಚ್ಚು ಜನರು ಪಾದಯಾತ್ರೆ ಮೂಲಕ ತೆರಳಿ ಶ್ರೀ ಮುರುಡೇಶ್ವರನ ದರ್ಶನ ಪಡೆದರು. ಕಳೆದ 9 ವರ್ಷಗಳ ಹಿಂದೆ ಕೇವಲ ಕೆಲವೇ ಜನರು ಆರಂಭಿಸಿದ್ದ ಪಾದಯಾತ್ರೆ ವರ್ಷಂಪ್ರತಿ ಜನರು ಹೆಚ್ಚುತ್ತಾ ಹೋಗುತ್ತಿರುವುದು ವಿಶೇಷವಾಗಿದೆ.

ಟಾಪ್ ನ್ಯೂಸ್

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

7-dandeli

Dandeli: ಗಾಂಜಾ ಅಕ್ರಮ ಮಾರಾಟ ಯತ್ನ; ಮಾಲು ಸಹಿತ ಆರೋಪಿಯ ಬಂಧನ

6-honnavara

Honnavar: ಮೂವರು ಯುವಕರ ಬಲಿ ತೆಗೆದುಕೊಂಡ ಭೀಕರ ರಸ್ತೆ ಅಪಘಾತ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.