ಆಲಮಟ್ಟಿ ಜಲಾಶಯದಲ್ಲಿ ಕಟ್ಟೆಚ್ಚರ

Team Udayavani, Mar 5, 2019, 11:31 AM IST

vij.jpg

ಆಲಮಟ್ಟಿ: ಹಿರಿಯ ಪೊಲೀಸ್‌ ಅಧಿಕಾರಿಗಳ ನಿರ್ದೇಶದನ್ವಯ ಇಲ್ಲಿಯ ಲಾಲ್‌ ಬಹಾದ್ದೂರ್‌ ಶಾಸ್ತ್ರೀ ಜಲಾಶಯಕ್ಕೆ ಶಸ್ತ್ರಸಜ್ಜಿತವಾಗಿ ಸನ್ನದ್ಧ ಸ್ಥಿತಿಯಲ್ಲಿದ್ದ ಕೈಗಾರಿಕಾ ಭದ್ರತಾ ಪಡೆಯಿಂದ ಮತ್ತಷ್ಟು ಭದ್ರತೆ ಬಿಗಿಗೊಳಿಸಲಾಗಿದೆ.

ರಾಜ್ಯದ ಶೇ.50ಕ್ಕಿಂತ ಅಧಿಕ ಪ್ರದೇಶಕ್ಕೆ ಜೀವನಾಡಿಯಾಗಿ ಸುಮಾರು 6 ಲಕ್ಷ ಎಕರೆ ರೈತರ ಜಮೀನಿಗೆ ನೀರಾವರಿ ಹಾಗೂ ಕುಡಿವ ನೀರು ಒದಗಿಸುತ್ತಿರುವ ಆಲಮಟ್ಟಿ ಜಲಾಶಯವು ಸೂಕ್ಷ್ಮ ಪ್ರದೇಶಗಳಲ್ಲೊಂದಾಗಿರುವುದರಿಂದ ಹೈ ಅಲರ್ಟ್‌ ಘೋಷಿಸಿ ಜಲಾಶಯದ ಭದ್ರತೆಗಾಗಿ
ನಿಯೋಜನೆಗೊಂಡಿರುವ ರಾಜ್ಯ ಕೈಗಾರಿಕಾ ಭದ್ರತಾ ಪಡೆ ಅಧಿಕಾರಿಗಳು ಪಹರೆ ಹಾಗೂ ತಪಾಸಣೆ ಬಿಗಿಗೊಳಿಸಿದ್ದಾರೆ.

ದಶಕದ ಹಿಂದೆ ಇಲ್ಲಿಯ ಪಾರ್ವತಿಕಟ್ಟೆ ಸೇತುವೆ ಹತ್ತಿರದಲ್ಲಿ ಗುಳೇದಗುಡ್ಡದ ಚೋಪದಾರ ಎಂಬಾತ ವೆಲ್ಡಿಂಗ್‌ ಶಾಪ್‌ ಇಟ್ಟುಕೊಂಡು ಜಲಾಶಯ ಭೇದಿಸಲು ತಯಾರಿ ನಡೆಸಿರುವ ವೇಳೆಯಲ್ಲಿಯೇ ಗುಪ್ತಚರ ಇಲಾಖೆ ಸಹಾಯದಿಂದ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿರುವುದು
ಈಗ ಇತಿಹಾ ಸ. ಅಲ್ಲದೇ ಬೆಳಗಾವಿ ವಿಮಾನನಿಲ್ದಾಣದಲ್ಲಿ ಶಂಕಿತ ಉಗ್ರಗಾಮಿ ಬಳಿ ಸಿಕ್ಕಿರುವ ವಸ್ತುಗಳಲ್ಲಿ ಆಲಮಟ್ಟಿ ಜಲಾಶಯದ ನಕ್ಷೆ ದೊರಕಿತ್ತಲ್ಲದೇ ಕೆಲ ದಿನಗಳಿಂದ ದೇಶದ ಗಡಿ ಪ್ರದೇಶದಲ್ಲಿ ಉಗ್ರರು ನಡೆಸುತ್ತಿರುವ ಹೇಯ ಕೃತ್ಯದ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಹಿರಿಯ ಪೊಲೀಸ್‌ ಅಧಿಕಾರಿಗಳ ಆದೇಶದಂತೆ ಜಲಾಶಯದ ನಾಲ್ಕು ದಿಕ್ಕಿನಲ್ಲಿರುವ ಚೆಕ್‌ಪೋಸ್ಟ್‌ಗಳಲ್ಲಿನ ಸಂಗೀತ ನೃತ್ಯ ಕಾರಂಜಿ, ರಾಕ್‌ ಉದ್ಯಾನ, ಮೊಘಲ್‌ ಉದ್ಯಾನ, ಗೋಪಾಲಕೃಷ್ಣ ಉದ್ಯಾನ, ಲವಕುಶ ಉದ್ಯಾನ ಸೇರಿದಂತೆ ಜನದಟ್ಟಣೆ ಹೆಚ್ಚಿರುವ ಪ್ರದೇಶದಲ್ಲಿ ಹಾಗೂ ಕೆಲ ಆಯ್ದ ಸೂಕ್ಷ್ಮ ಪ್ರದೇಶದಲ್ಲಿ ತೀವ್ರ ನಿಗಾ ವಹಿಸಲಾಗಿದೆ.

ಐಜಿಪಿ ಭೇಟಿ: ಪುಲ್ವಾಮಾದಲ್ಲಿ ಉಗ್ರರ ದಾಳಿ ಹಾಗೂ ಪಾಕಿಸ್ತಾನದಲ್ಲಿ ಭಾರತೀಯ ಸೇನೆಯಿಂದ ವಾಯುದಾಳಿ ನಡೆದ ನಂತರ ಸೋಮವಾರ ಆಲಮಟ್ಟಿಗೆ ಭೇಟಿ ನೀಡಿದ ಬೆಳಗಾವಿ ಉತ್ತರ ವಲಯದ ಐಜಿಪಿ ರಾಘವೇಂದ್ರ ಸುಹಾಸ್‌ ಭದ್ರತೆ ಪರಿಶೀಲನೆ ನಡೆಸಿದರು. ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೂ ಭದ್ರತೆಯ ವಿವಿಧ ಪಾಯಿಂಟ್‌ಗಳನ್ನು ಪರಿಶೀಲಿಸಿದರು. ಕೆಎಸ್‌ಐಎಸ್‌ಎಫ್‌ ಪೊಲೀಸರಿಗೆ ವಿವಿಧ ಸೂಚನೆ ನೀಡಿದರು.

ಹೆಚ್ಚಿದ ಭದ್ರತೆ: ಜಲಾಶಯದ ಸುತ್ತಮುತ್ತಲಿನ ಭದ್ರತೆಗಾಗಿ ಕೆಎಸ್‌ಐಎಸ್‌ಎಫ್‌ನ ಐವರು ಪಿಎಸ್‌ಐ ಸೇರಿ 91 ಪೊಲೀಸರು ದಿನದ 24 ಗಂಟೆಯೂ ಶಸ್ತ್ರ ಸಜ್ಜಿತವಾಗಿ ನಿಯೋಜನೆಗೊಂಡಿದ್ದಾರೆ. ಜಲಾಶಯದ ನಾನಾ ಕಡೆ ನಿಯೋಜನೆಗೊಂಡ ಪೊಲೀಸರ ವಿವರಣೆಯನ್ನು ಪ್ರತಿ 8 ಗಂಟೆಗೊಮ್ಮೆ ಹಿರಿಯ ಅಧಿಕಾರಿಗಳಿಗೆ ಕಳುಹಿಸಲಾಗುತ್ತಿದೆ.

 ಜಲಾಶಯ ಸೇರಿದಂತೆ ಕೆಲ ಪ್ರದೇಶಗಳನ್ನು ಇಲಾಖೆ ವ್ಯಾಪ್ತಿಯನ್ನು ಗುರುತಿಸಿ ಭದ್ರತೆಗಾಗಿ ನಿಯೋಜನೆ ಮಾಡಲಾಗಿದ್ದು ಈಗಾಗಲೇ ಭದ್ರತೆಯಲ್ಲಿ ಲೋಪವಾಗದಂತೆ ಕ್ರಮ  ಕೈಗೊಳ್ಳಲಾಗಿತ್ತು. ಈಗ ಮತ್ತೇ ಇಲಾಖೆ ಹಿರಿಯ ಅಧಿಕಾರಿಗಳ ಆದೇಶದಂತೆ ಮತ್ತಷ್ಟು ಕಟ್ಟೆಚ್ಚರ ವಹಿಸಲಾಗಿದೆ ಎಂದು ಆಲಮಟ್ಟಿ ವಿಭಾಗದ ಮುಖ್ಯಸ್ಥ ಈರಪ್ಪ ವಾಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

Team India; Bumrah meets Kiwi surgeon: Doubts over Champions Trophy?

Team India; ಕಿವೀಸ್‌ ಸರ್ಜನ್‌ ಭೇಟಿಯಾದ ಬುಮ್ರಾ: ಚಾಂಪಿಯನ್ಸ್‌ ಟ್ರೋಫಿಗೆ ಅನುಮಾನ?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Leopard spotted in Vijayapura city: CCTV footage captured

Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

13-frndshp

Friendship: ಸ್ನೇಹವೇ ಸಂಪತ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.