ತಪ್ಪದ ಪ್ರಯಾಣಿಕರ ಪರದಾಟ

Team Udayavani, Mar 5, 2019, 12:10 PM IST

ray-2.jpg

ದೇವದುರ್ಗ: ಪಟ್ಟಣದಲ್ಲಿ ನಡೆದಿರುವ ಹೈಟೆಕ್‌ ಬಸ್‌ ನಿಲ್ದಾಣ ಕಾಮಗಾರಿ ಕುಂಟುತ್ತ, ತೆವಳುತ್ತ ಸಾಗಿದ್ದರಿಂದ ಪ್ರಯಾಣಿಕರು, ನೀರು, ನೆರಳಿಲ್ಲದೇ ಪರದಾಡುವಂತಾಗಿದೆ. 174.90 ಲಕ್ಷ ವೆಚ್ಚದಲ್ಲಿ ಪಟ್ಟಣದಲ್ಲಿ ಹೈಟೆಕ್‌ ಬಸ್‌ ನಿಲ್ದಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಟೆಂಡರ್‌ ನಿಯಮಾವಳಿ
ಯಂತೆ 2018ರ ಮಾರ್ಚ್‌ಗೆ ಕಾಮಗಾರಿ ಮುಗಿಯಬೇಕಿತ್ತು. ಅವಧಿ ಮುಗಿದು ವರ್ಷವಾದರೂ ಇನ್ನೂ ಕಾಮಗಾರಿ ಮುಗಿದಿಲ್ಲ.

ಟಿನ್‌ ಶೆಡ್‌: ಪ್ರಯಾಣಿಕರ ನೆರಳಿಗಾಗಿ ತಾತ್ಕಾಲಿಕವಾಗಿ ಸಣ್ಣ ಪ್ರಮಾಣದ ಟಿನ್‌ ಶೆಡ್‌ ಹಾಕಿ, ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ಇದು ನೂರಾರು ಪ್ರಯಾಣಿಕರಿಗೆ ಸಾಲುತ್ತಿಲ್ಲ. ಹೀಗಾಗಿ ವೃದ್ಧರು, ಮಕ್ಕಳು, ಮಹಿಳೆಯರು ಸೇರಿ ಬಿಸಿಲಲ್ಲಿ ಬಸ್‌ಗೆ ಕಾಯುವುದು ತಪ್ಪುತ್ತಿಲ್ಲ. ಇನ್ನು ಟಿನ್‌ ಶೆಡ್‌ ನಲ್ಲಿ ಬಸ್‌ಗಾಗಿ ಕಾಯುತ್ತ ನಿಂತರೆ ಝಳಕ್ಕೆ ಪ್ರಯಾಣಿಕರು ತತ್ತರಿಸಿ ಹೊರಗೆ ಬಂದು ಗಿಡ, ಮರ ಇಲ್ಲವೇ ಅಂಗಡಿ ಮುಂಗಟ್ಟುಗಳ ಆಸರೆ ಪಡೆಯುವಂತಾಗಿದೆ.

ನೀರು ಇಲ್ಲ: ಇನ್ನು ನಿಲ್ದಾಣದಲ್ಲಿ ಕುಡಿಯುವ ನೀರು, ಪ್ರಯಾಣಿಕರಿಗೆ ಸಮರ್ಪಕ ಆಸನ ವ್ಯವಸ್ಥೆ ಇಲ್ಲ. ನೀರು ಬೇಕೆಂದರೆ ಹೋಟೆಲ್‌, ಇಲ್ಲವೇ ತಂಪು ಪಾನೀಯ ಅಂಗಡಿಗಳಿಗೆ ಹೋಗಬೇಕು. ಇಲ್ಲವೇ ಬಾಟಲಿ ನೀರು ಖರೀದಿಸಬೇಕು. ಆಸನ ಇಲ್ಲದ್ದರಿಂದ ಅಂಗಡಿ ಮುಂಗಟ್ಟುಗಳ ಆಸರೆ ಪಡೆಯುವಂತಾಗಿದೆ.

ಅಡ್ಡಾದಿಡ್ಡಿ ಬಸ್‌ ನಿಲುಗಡೆ: ಎಲ್ಲೆಂದರಲ್ಲಿ ಬಸ್‌ಗಳನ್ನು ನಿಲ್ಲಿಸುವುದರಿಂದ ಪ್ರಯಾಣಿಕರು ಬಸ್‌ಗಾಗಿ ಅತ್ತಿಂದಿತ್ತ, ಇತ್ತಿಂದತ್ತ ಓಡಾಡುವಂತಾಗಿದೆ. ಸ್ಥಳೀಯ ಜನಪತ್ರಿನಿಧಿಗಳು ಮತ್ತು ಗುತ್ತಿಗೆದಾರರ ಮಧ್ಯ ಹೊಂದಾಣಿಕೆ ಕೊರತೆಯೇ ಕಾಮಗಾರಿ ವಿಳಂಬಕ್ಕೆ ಕಾರಣ ಎಂಬ ಆರೋಪಗಳು ಕೇಳಿಬರುತ್ತಿವೆ. ಈ ಹಿಂದೆ ಸಾರಿಗೆ ಸಚಿವರಾಗಿದ್ದ ರೇವಣ್ಣ ಅವರು ಇಲ್ಲಿಗೆ ಭೇಟಿ ನೀಡಿ ಕಾಮಗಾರಿ ವಿಳಂಬಕ್ಕೆ ಗುತ್ತಿಗೆದಾರರು, ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡು 2019ರ ಒಳಗೆ ಕಾಮಗಾರಿ ಮುಗಿಸಲು ಖಡಕ್‌ ಎಚ್ಚರಿಕೆ ನೀಡಿದ್ದರು.

ಆದರೆ ಸಾರಿಗೆ ಸಂಸ್ಥೆ ಅಧಿಕಾರಿಗಳು ನಿಗಾವಹಿಸುತ್ತಿಲ್ಲ. ಕಾಮಗಾರಿ ಮುಗಿಯಲು ಇನ್ನೂ ಆರೇಳು ತಿಂಗಳು ಬೇಕಾಗಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಒಟ್ಟಾರೆ ಬಸ್‌ ನಿಲ್ದಾಣ ಕಾಮಗಾರಿ ಮುಗಿಯದ್ದರಿಂದ ಪ್ರಯಾಣಿಕರ ಗೋಳಿಗೆ ಕೊನೆ ಇಲ್ಲದಂತಾಗಿದೆ.

ಇನ್ನಾದರೂ ಅಧಿಕಾರಿಗಳು ಗುತ್ತಿಗೆದಾರರು ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಮುಂದಾಗಬೇಕು. ಪ್ರಯಾಣಿಕರಿಗೆ ಆಸನ ವ್ಯವಸ್ಥೆ ಕಲ್ಪಿಸಬೇಕು ಎಂದು ಕರವೇ ನಗರ ಘಟಕ ಅಧ್ಯಕ್ಷ ಉಸ್ಮಾನ್‌ ಗೌರಂಪೇಟೆ ಆಗ್ರಹಿಸಿದ್ದಾರೆ. 

ಬಸ್‌ ನಿಲ್ದಾಣ ಕಾಮಗಾರಿ ಆರಂಭದಲ್ಲಿ ಸ್ವಲ್ಪ ವಿಳಂಬವಾಗಿದೆ. ಈಗಾಗಲೇ ಚುರುಕಿನಿಂದ ಕೆಲಸ ನಡೆಯುತ್ತಿದೆ. ಎರಡು ತಿಂಗಳಲ್ಲಿ ಪೂರ್ಣಗೊಳಿಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲಾಗುವುದು. 
 ಹಸನ್‌ ಅಲಿ, ಸಾರಿಗೆ ವ್ಯವಸ್ಥಾಪಕರು

ಟಾಪ್ ನ್ಯೂಸ್

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

Police

Kasragodu: ನರ್ಸಿಂಗ್‌ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್‌ ತನಿಖೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.