ಕನ್ನಡ ಕಲಾಕೇಂದ್ರ ಮುಂಬಯಿ ಯಕ್ಷೋತ್ಸವ ಸಮಾರೋಪ


Team Udayavani, Mar 5, 2019, 5:26 PM IST

0403mum08.jpg

ಮುಂಬಯಿ: ಮುಂಬಯಿ ಮಹಾನಗರದಲ್ಲಿ ಯಕ್ಷಗಾನ, ನಾಟಕಗಳನ್ನು ಆಗಾಗ್ಗೆ ಆಯೋಜಿಸಿ ಕಲೆಯನ್ನು ಉಳಿಸಿ-ಬೆಳೆಸುವ ಮಹತ್ತರವಾದ ಕಾರ್ಯವನ್ನು ಬಿ. ಬಾಲಚಂದ್ರ ರಾವ್‌ ಅವರು ಮಾಡುತ್ತಿದ್ದಾರೆ. ಯಕ್ಷಗಾನ ನಮ್ಮ ಮನಸ್ಸಿಗೆ ಉಲ್ಲಾಸ ನೀಡುವ ಕಲೆಯಾಗಿದೆ. ಅಂತಹ ಕಲೆಗೆ ನಾವೆಲ್ಲ ಪ್ರೋತ್ಸಾಹ ನೀಡಿ ಸಹಕರಿಸೋಣ ಎಂದು ನೆರೂಲ್‌ ಶ್ರೀ ಶನೀಶ್ವರ ಮಂದಿರದ ಅಧ್ಯಕ್ಷ ಧರ್ಮದರ್ಶಿ ರಮೇಶ್‌ ಎಂ. ಪೂಜಾರಿ ಅವರು ನುಡಿದರು.

ಫೆ. 24ರಂದು ನೆರೂಲ್‌ ಶ್ರೀ ಶನೀಶ್ವರ ಮಂದಿರದಲ್ಲಿ ಕನ್ನಡ ಕಲಾಕೇಂದ್ರ ಮುಂಬಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಹಾಗೂ ಶ್ರೀ ಶನೀಶ್ವರ ಮಂದಿರ ನೆರೂಲ್‌ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ ಇದರ ಪ್ರಸಿದ್ಧ ಕಲಾವಿದರ ಯಕ್ಷೋತ್ಸವ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆದು, ಕಲೆ, ಕಲಾವಿದರನ್ನು ಉಳಿಸಿ-ಬೆಳೆಸುವ ಕಾರ್ಯದಲ್ಲಿ ತೊಡಗೋಣ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಮಾಜಿ ನಗರ ಸೇವಕ, ನೆರೂಲ್‌ ಶ್ರೀ ಶನೀಶ್ವರ ಮಂದಿರದ ಕಾರ್ಯಾಧ್ಯಕ್ಷ ಸಂತೋಷ್‌ ಡಿ. ಶೆಟ್ಟಿ ಇವರು ಮಾತನಾಡಿ, ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಭಯೋತ್ಪಾದಕರ ದಾಳಿಯಿಂದ ನಮ್ಮ ವೀರ ಯೋಧರು ಹುತಾತ್ಮರಾಗಿದ್ದಾರೆ. ಇದರಿಂದ ಇಡೀ ದೇಶವೇ ದುಃಖದಲ್ಲಿದೆ. ದೇಶಕ್ಕಾಗಿ ತಮ್ಮ ಜೀವನವನ್ನು ಬಲಿದಾನ ಮಾಡಿರುವ ನಮ್ಮ ಯೋಧರನ್ನು ಸ್ಮರಿಸುವುದು, ಶ್ರದ್ಧಾಂಜಲಿಯನ್ನು ಅರ್ಪಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಇದು ನಮ್ಮ ಸಂಸ್ಕೃತಿ ಕೂಡಾ ಆಗಿದೆ. ಹುತಾತ್ಮರಾದ ಯೋಧರ ಕುಟುಂಬದವರಿಗೆ ತಮ್ಮ ಕಳಕೊಂಡ ದು:ಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ. ನಾವೆಲ್ಲ ಭಾರತೀಯರಾಗಿ ಒಗ್ಗಟ್ಟಾಗಿ ಇಂತಹ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸೋಣ ಎಂದರು.

ಈ ಸಂದರ್ಭದಲ್ಲಿ ಕಲಾವಿದ ಕೆರೆಮನೆ ಶಿವಾನಂದ ಹೆಗಡೆ ಮತ್ತು ಶ್ರೀಧರ ಹೆಗಡೆ ಇವರನ್ನು ಶಾಲು ಹೊದೆಸಿ, ಪುಷ್ಪಗುತ್ಛ ಸ್ಮರಣಿಕೆಯನ್ನಿತ್ತು ಸಮ್ಮಾನಿಸಲಾಯಿತು. ವೇದಿಕೆಯಲ್ಲಿ ಹಿರಿಯ ಯಕ್ಷಗಾನ ತಾಳಮದ್ದಳೆ ಅರ್ಥದಾರಿ ಕೆ. ಕೆ. ಶೆಟ್ಟಿ, ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಮಾಜಿ ಅಧ್ಯಕ್ಷ ಶ್ಯಾಮ ಎನ್‌. ಶೆಟ್ಟಿ, ಪತ್ರಕರ್ತ ರಮೇಶ್‌ ಬಿರ್ತಿ ಮೊದಲಾದವರು ಉಪಸ್ಥಿತರಿದ್ದರು.

ವಾಪಿ ಕನ್ನಡ ಸಂಘದ ವಿಶ್ವಸ್ಥ ಪಿ. ಎಸ್‌. ಕಾರಂತ್‌ ಇವರು ಮಾತನಾಡಿ, ನಮಗೆ ಮಹಾಭಾರತ, ರಾಮಾಯಣ ಹಾಗೂ ಪುರಾಣಗಳ ಬಗ್ಗೆ ಅರಿವು ಮೂಡಿಸುವ ಕಲೆ ಯಕ್ಷಗಾನವಾಗಿದೆ. ಅಂತಹ ಕಲೆಗೆ ಬಿ. ಬಾಲಚಂದ್ರ ರಾವ್‌ ಅವರಂತಹ ಅನೇಕ ಕಲಾಪೋಷಕರು ಹೆಚ್ಚಿನ ಪ್ರೋತ್ಸಾಹವನ್ನು ನೀಡುತ್ತಾ ಬಂದಿದ್ದಾರೆ. ನಾವೆಲ್ಲಾ ನಮ್ಮ ಮಕ್ಕಳನ್ನು ಯಕ್ಷಗಾನ ಪ್ರದರ್ಶನಕ್ಕೆ ಕರೆದುಕೊಂಡು ಬರುವ ಪರಿಪಾಠವನ್ನು ಬೆಳೆಸಿಕೊಂಡು ಬರಬೇಕು. ಹಾಗಾದಲ್ಲಿ ಯುವ ಪೀಳಿಗೆಯಲ್ಲಿ ಯಕ್ಷಗಾನದ ಬಗ್ಗೆ ಆಸಕ್ತಿ ಉಂಟಾಗಲು ಸಾಧ್ಯವಿದೆ ಎಂದರು.

ಇಡಗುಂಜಿ ಮೇಳದ ಯಜಮಾನ ಕೆರೆಮನೆ ಶಿವಾನಂದ ಹೆಗಡೆ ಮಾತನಾಡಿ, ಮುಂಬಯಿಗರು ಇಡಗುಂಜಿ ಮೇಳಕ್ಕೆ 
ಈ ಹಿಂದೆಯೂ ಪ್ರೋತ್ಸಾಹಿಸಿದ್ದು, ಈ ಬಾರಿ ನಮಗೆ ದೊರಕಿದ ಪ್ರೋತ್ಸಾಹದಿಂದ ಧನ್ಯತಾಭಾವದಿಂದ ಮರಳು
ತ್ತಿದ್ದೇವೆ ಎಂದು ನುಡಿದು ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಕನ್ನಡ ಕಲಾಕೇಂದ್ರ ಬಿ. ಬಾಲಚಂದ್ರ ರಾವ್‌ ಸ್ವಾಗತಿಸಿದರು. ಗೌರವ ಪ್ರಧಾನ ಕಾರ್ಯದರ್ಶಿ ಮಧುಸೂದನ್‌ ಟಿ. ಆರ್‌. ಪ್ರಾಸ್ತಾವಿಕವಾಗಿ ಮಾತನಾಡಿದರು. ರಂಗ ಕಲಾವಿದ ದಿಗªರ್ಶಕ ಅನಿಲ್‌ ಕುಮಾರ್‌ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಆರಂಭವಾಗುವ ಮುನ್ನ ಬಿ. ಬಾಲಚಂದ್ರ ರಾವ್‌ ಅವರ ಪರಿಕಲ್ಪನೆಯಲ್ಲಿ ಪುಲ್ವಾಮದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿಯನ್ನು ಸಲ್ಲಿಸಲು 49 ಹಣತೆಗಳನ್ನು ಹಚ್ಚಿ ಸಲ್ಲಿಸಲಾಯಿತು. ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ ಇದರ ಪ್ರಸಿದ್ಧ ಕಲಾವಿದರಿಂದ ಕಾರ್ತವೀರ್ಯಾರ್ಜುನ ಯಕ್ಷಗಾನ ಪ್ರದರ್ಶನಗೊಂಡಿತು.

ಟಾಪ್ ನ್ಯೂಸ್

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-putthige-2

State Formation: ಶ್ರೀ ಕೃಷ್ಣ ಬೃಂದಾವನ ಹೂಸ್ಟನ್ ಶಾಖೆಯಲ್ಲಿ ಸಂಸ್ಥಾಪನಾ ದಿನಾಚರಣೆ

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

9-bng

Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ

8-bng

Bengaluru: ಕದ್ದ ಮೊಬೈಲ್‌ ಕೊರಿಯರ್‌ ಮೂಲಕ ಕೇರಳಕ್ಕೆ ರವಾನೆ!

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.