ಶ್ರದ್ಧಾಭಕ್ತಿಯಿಂದ ಮಹಾಶಿವರಾತ್ರಿ ಆಚರಿಸಿದ ಜಿಲ್ಲೆಯ ಜನತೆ 

Team Udayavani, Mar 6, 2019, 1:00 AM IST

shradda-bhakti.jpg

ಮಡಿಕೇರಿ : ಜಿಲ್ಲೆಯ ಶಿವ ದೇವಾಲಯಗಳು ಸೇರಿದಂತೆ ಬಹುತೇಕ ಎಲ್ಲಾ ದೇಗುಲಗಳಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿವಿಧ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ಜರಗಿದವು.

ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯ, ಪೇರ್ಮಾಡು ಶ್ರೀ ಈಶ್ವರ ದೇವಸ್ಥಾನ, ಮಡಿಕೇರಿಯ ಶ್ರೀ ಓಂಕಾರೇಶ್ವರ, ಶನಿವಾರಸಂತೆಯ ಗೌರಿಶಂಕರ, ಪಾಲೂರು ಮಹಾಲಿಂಗೇಶ್ವರ, ಬಾಡಗರಕೇರಿಯ ಶ್ರೀಮೃತ್ಯುಂಜಯ, ಇರ್ಪು ಶ್ರೀರಾಮೇಶ್ವರ, ವಿರಾಜಪೇಟೆಯ ಅಂಗಾಳ ಪರಮೇಶ್ವರಿ, ಸೇರಿದಂತೆ ವಿವಿಧ ದೇಗುಲಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ, ರುದ್ರಾಭಿಷೇಕ, ರುದ್ರಹೋಮಗಳು ನೆರವೇರಿದವು.

ಪೇರ್ಮಾಡು ಈಶ್ವರ ದೇಗುಲ ಹಾಗೂ ಇರ್ಪು ಶ್ರೀರಾಮೇಶ್ವರ ದೇಗುಲಕ್ಕೆ ವಿಶೇಷ ಮಹತ್ವವಿದ್ದು, ಇರ್ಪುವಿನಲ್ಲಿ ಜಾಗರಣೆಯ ಮರುದಿನ ಪವಿತ್ರ ಸ್ನಾನ ಹಾಗೂ ಜಾತ್ರೆಯೂ ನಡೆಯಲಿದೆ.

ಮಡಿಕೇರಿಯ ಇತಿಹಾಸ ಪ್ರಸಿದ್ಧ ಶ್ರೀಓಂಕಾರೇಶ್ವರ ದೇವಾಲಯದಲ್ಲಿ ರುದ್ರ ಹೋಮ, ರುದ್ರನಾಮ ಪಠಣ, ಅಭಿಷೇಕ, ಅಲಂಕಾರ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿದವು. ನಗರದ ದಾಸವಾಳ ಬಳಿಯ ಮಡಿಕಟ್ಟೆಯ ಶ್ರೀವೀರಭದ್ರ ಮುನೀಶ್ವರ ದೇಗುಲದಲ್ಲಿ ಮಹಾ ಶಿವರಾತ್ರಿಯ ಪ್ರಯುಕ್ತ ವಿಶೇಷ ದೈವಿಕ ಕೈಂಕರ್ಯಗಳು ನಡೆದವು. ಬ್ರಹ್ಮಕುಮಾರಿ ಈಶ್ವರಿ ಪ್ರಾರ್ಥನಾ ಮಂದಿರದಲ್ಲಿ ಶಿವಲಿಂಗಗಳ ಪ್ರದರ್ಶನ ಮತ್ತು ಮೆರವಣಿಗೆ ನಡೆಯಿತು. ವೀರಾಜಪೇಟೆ ಬಳಿಯ ಮಗ್ಗುಲ ಗ್ರಾಮದಲ್ಲಿರುವ ಶ್ರೀಶನೇಶ್ವರ ಮತ್ತು ನವಗ್ರಹ ದೇಗುಲದಲ್ಲಿ ಬೆಳಗ್ಗಿನಿಂದಲೇ ವಿಶೇಷ ಪೂಜೆಗಳು, ಅಭಿಷೇಕ, ಶಾಂತಿಪೂಜೆ  ಹಾಗೂ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿನಿಯೋಗ ನಡೆಯಿತು.

ಸಿದ್ದಾಪುರದ ನೆಲ್ಯಹುದಿಕೇರಿಯ ಶ್ರೀಮುತ್ತಪ್ಪ ದೇವಾಲಯದಲ್ಲಿ ಮಹಾಶಿವರಾತ್ರಿ ಆಚರಣೆಯು ವಿವಿಧ ಧಾರ್ಮಿಕ ಪ್ರವಚನಗಳೊಂದಿಗೆ ನಡೆಯಿತು. ಶ್ರೀಮುತ್ತಪ್ಪ ಯುವಕಲಾ ಸಮಿತಿಯ ವತಿಯಿಂದ ಮುತ್ತಪ್ಪ  ಸಭಾಂಗಣದಲ್ಲಿ ಕಪಿಲಾಶ್ರಮ ಉತ್ತರ ಕಾಶಿಯ ರಾಮಚಂದ್ರ ಸ್ವಾಮಿಜೀಯವರಿಂದ ಆಶೀರ್ವಚನ ಹಾಗೂ ಧಾರ್ಮಿಕ ಪ್ರವಚನ ನಡೆಯಿತು. 

ವಿವಿಧ ದೇಗುಲ ಸಮಿತಿಗಳ ವತಿಯಿಂದ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಭಕ್ತರಿಂದ ಶಿವ ಜಾಗರಣೆಯೂ ನಡೆಯಿತು. ಬಹುತೇಕ ಎಲ್ಲಾ ದೇಗುಲಗಳಲ್ಲಿ ಭಕ್ತ ಸಮೂಹಕ್ಕೆ ಅನ್ನಸಂತರ್ಪಣೆ ಜರುಗಿತು. 

ಟಾಪ್ ನ್ಯೂಸ್

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-madikeri-1

Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು

2

Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್‌ ಮೂಲಕ ನಕ್ಸಲ್‌ ಸೋಮನ್‌ ವಿಚಾರಣೆ

court

Kasaragod: 300 ಪವನ್‌ ಚಿನ್ನ, 1 ಕೋಟಿ ರೂ. ಕಳವು ಕರ್ನಾಟಕ, ತಮಿಳುನಾಡಿಗೆ ತನಿಖೆ ವಿಸ್ತರಣೆ

Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು

Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು

Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು

Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

3

Puttur: ಕುಂಜಾಡಿ; ಸೇತುವೆ ಕಾಮಗಾರಿ ಪುನರಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.