ರಾಜೀನಾಮೆ ಅಂಗೀಕಾರ ಜಿದ್ದಾಜಿದ್ದಿ
Team Udayavani, Mar 6, 2019, 1:27 AM IST
ಚಿಂಚೋಳಿಯ ಕಾಂಗ್ರೆಸ್ ಶಾಸಕ ಡಾ.ಉಮೇಶ್ ಜಾಧವ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಮಲ ಪಾಳಯ ಸೇರುವ ಸಿದ್ದತೆಯಲ್ಲಿದ್ದಾರೆ. ಉಮೇಶ್ ಜಾಧವ್ ರಾಜೀನಾಮೆ ಪ್ರಕರಣ ರಾಜಕೀಯವಾಗಿ ಹಲವು ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ, “ಪಕ್ಷದಿಂದ ಬಿಟ್ಟು ಹೋಗಿರುವವರ ಅನರ್ಹತೆ ಕೋರಿ ವಿಧಾನಸಭಾ ಸಭಾಧ್ಯಕ್ಷರಿಗೆ ಸಲ್ಲಿಸಿರುವ ಅರ್ಜಿ ಇನ್ನೂ ಇತ್ಯರ್ಥವಾಗದ ಕಾರಣ ಅವರ ರಾಜೀನಾಮೆ ಅಂಗೀಕಾರವಾಗಲ್ಲ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿರುವುದು ಕುತೂಹಲ ಮೂಡಿಸಿದೆ.
ಅಂಗೀಕರಿಸುವ ಭರವಸೆ ಇದೆ
ಚಿಂಚೋಳಿ: “ಬಂಜಾರಾ ಸಮಾಜದ ನಾಯಕರು, ಕಾರ್ಯಕರ್ತರ ಅಭಿಪ್ರಾಯ ಕೇಳಿಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ತ್ಯಜಿಸುವ ದಿಟ್ಟ ನಿರ್ಧಾರ ಕೈಗೊಂಡಿದ್ದೇನೆ. ಸಭಾಪತಿಗಳು ಶಾಸಕ ಸ್ಥಾನಕ್ಕೆ ನೀಡಿದ ರಾಜೀನಾಮೆ ಅಂಗೀಕರಿಸಿ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದ್ದಾರೆ. ಬಿಜೆಪಿ ಸೇರ್ಪಡೆ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ’ ಎಂದು ಡಾ| ಉಮೇಶ ಜಾಧವ್ ತಿಳಿಸಿದ್ದಾರೆ.
ತಾಲೂಕಿನ ಪಂಗರಗಾ ಸೋನ್ಯಾಲಗಿರಿ ಧರ್ಮಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನನ್ನ ಶಾಸಕ ಸ್ಥಾನ ಅನರ್ಹಗೊಳಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಸಭಾಪತಿಗಳಿಗೆ ಪತ್ರ ಬರೆದಿರುವುದರಿಂದ ನಾನೂ ಕಾನೂನು ಸಲಹೆ ಪಡೆದುಕೊಂಡಿದ್ದೇನೆ. ಹೀಗಾಗಿ ನನ್ನ ಶಾಸಕ ಸ್ಥಾನ ಅನರ್ಹಗೊಳಿಸಲು ಸಾಧ್ಯವಿಲ್ಲ. ಮುಂದೇನು ಆಗುತ್ತದೆ ಎನ್ನುವುದೂ ಗೊತ್ತಿಲ್ಲ ಎಂದರು.
ಕಾಂಗ್ರೆಸ್‌ನಲ್ಲಿ ತತ್ವ-ಸಿದಾಟಛಿಂತವೇ ಇಲ್ಲ. ಒಬ್ಬರ ಕಣ್ಣಿಗೆ ಬೆಣ್ಣೆ-ಇನ್ನೊಬ್ಬರ ಕಣ್ಣಿಗೆ ಸುಣ್ಣ ಹಚ್ಚಲಾಗಿದೆ. ರಾಜಕೀಯ ಜೀವನ ನಿಂತ ನೀರಲ್ಲ. ರಾಜಕೀಯ ವಾತಾವರಣಕ್ಕೆ ತಕ್ಕಂತೆ ರಾಜಕಾರಣಿಗಳು ಬದಲಾವಣೆ ಆಗುವುದು ಸಹಜ. ನಮ್ಮ ಕ್ಷೇತ್ರದಲ್ಲಿ ಅಭಿವೃದಿಟಛಿ ಕೆಲಸಗಳು ಒಂದು ವರ್ಷದಿಂದ ಅಗುತ್ತಿಲ್ಲ. ಹೀಗಾಗಿ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದರು.
ಪ್ರಧಾನಿ ಮೋದಿ ಬುಧವಾರ ಕಲಬುರಗಿಗೆ ಭೇಟಿ ನೀಡಲಿದ್ದಾರೆ. ನಾನು ಬಿಜೆಪಿಗೆ ಸೇರುವ ಕುರಿತು ಸಂಜೆ ಬೆಂಬಲಿಗರೊಂದಿಗೆ ಚರ್ಚಿಸುತ್ತೇನೆ. ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಒಂದು ವೇಳೆ ಬಿಜೆಪಿಗೆ ಸೇರಿದರೆ ಕಲಬುರಗಿ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ನಾನೇ ಆಗುತ್ತೇನೆಂಬ ಭರವಸೆ ನನಗೆ ಇನ್ನೂ ಇಲ್ಲ. ಕಲಬುರಗಿಯಲ್ಲಿ ಕಾಂಗ್ರೆಸ್ ಪಕ್ಷ ಖಾಸಗಿ ಕಂಪನಿ ಆಗಿದೆ. ಇಲ್ಲಿ ಯಾವುದೇ ಸಮಾಜಕ್ಕೆ ಸಾಮಾಜಿಕ ನ್ಯಾಯ ಸಿಗುತ್ತಿಲ್ಲ. ಅಪ್ಪ ಮಕ್ಕಳದ್ದೇ ಆಟ ಆಗಿದೆ. ನಮ್ಮ ಸಮಾಜವನ್ನು ಬೇರ್ಪಡಿಸುವ ಕುತಂತ್ರನಡೆದಿದೆ ಎಂದರು.
ಎಡಗೈ, ಬಲಗೈ ಸಮಾಜಕ್ಕೆ ನ್ಯಾಯ ಕೊಡಿಸಲಿಲ್ಲ
ನ್ಯಾ| ಸದಾಶಿವ ಆಯೋಗ ವರದಿ ಜಾರಿಗೊಳಿಸುವ ಬಗ್ಗೆ ಸಂಸದ ಡಾ| ಮಲ್ಲಿಕಾರ್ಜುನ ಖರ್ಗೆ ಇಲ್ಲಿಯವರೆಗೆ ಯಾಕೆ ಸುಮ್ಮನೆ ಕುಳಿತಿದ್ದಾರೆ? ಎಡಗೈ ಮತ್ತು ಬಲಗೈ ಸಮಾಜಕ್ಕೆ ನ್ಯಾಯ ಕೊಡಿಸಲಿಲ್ಲ ಎಂದು ಉಮೇಶ್ ಜಾಧವ್ ಪ್ರಶ್ನಿಸಿದರು. ನಾನು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂ ಧಿ ಅವರನ್ನು ಭೇಟಿ ಮಾಡಿ ಬಂಜಾರಾ
ಸಮಾಜಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಶೇ.10 ಮೀಸಲಾತಿ ಹೆಚ್ಚಳ ಮಾಡಬೇಕೆಂಬ ಬೇಡಿಕೆ ಸಲ್ಲಿಸಿದ್ದೇನೆ. ಆಗಿನ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಅವರಿಗೂ ಬೆಳಗಾವಿ ಅಧಿ ವೇಶನದಲ್ಲಿ ತಿಳಿಸಿದ್ದೇನೆ. ನ್ಯಾ| ಸದಾಶಿವ ಆಯೋಗ ವರದಿ ಜಾರಿಗೊಳಿಸಬೇಕೆಂದು ಆಗ್ರಹಿಸಿದ್ದೇನೆ. ಆದರೂ ಸ್ಪಂದನೆ ಸಿಕ್ಕಿಲ್ಲ ಎಂದರು. ಪ್ರಧಾನಿ ಕಾರ್ಯಕ್ರಮಕ್ಕೆ ಬಂಜಾರಾ ಸಮಾಜದ 40 ಸಾವಿರ ಜನರು ಭಾಗವಹಿಸಲಿದ್ದಾರೆ. ಈ ಕುರಿತು ಸಮಾಜದವರಿಗೆ ಮನವಿ ಮಾಡಿದ್ದೇನೆ ಎಂದರು.
ರಾಜೀನಾಮೆ ಅಂಗೀಕಾರ ಆಗಲ್ಲ
ಬಾದಾಮಿ/ಹುಬ್ಬಳ್ಳಿ: “ಪಕ್ಷದಿಂದ ಬಿಟ್ಟು ಹೋಗಿರುವವರ ಅನರ್ಹತೆ ಕೋರಿ ವಿಧಾನ ಸಭಾಧ್ಯಕ್ಷರಿಗೆ ಸಲ್ಲಿಸಿರುವ ಅರ್ಜಿ ಇನ್ನೂ ಇತ್ಯರ್ಥವಾಗದ ಕಾರಣ ಶಾಸಕ ಉಮೇಶ್ ಜಾಧವ್ ರಾಜೀನಾಮೆ ಅಂಗೀಕಾರವಾಗುವುದಿಲ್ಲ’ ಎಂದು ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ ಬಾದಾಮಿ ಹಾಗೂ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪûಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಳಿಸುವಂತೆ ಉಮೇಶ್ ಜಾಧವ್, ರಮೇಶ ಜಾರಕಿಹೊಳಿ, ನಾಗೇಂದ್ರ, ಮಹೇಶ ಕುಮಟಳ್ಳಿ ಸೇರಿ ನಾಲ್ವರು ಶಾಸಕರ ವಿರುದಟಛಿ ಸಭಾಧ್ಯಕ್ಷರಿಗೆ ದೂರು ನೀಡಿದ್ದೇನೆ. ನನಗೆ ಇರುವ ತಿಳಿವಳಿಕೆ ಪ್ರಕಾರ ಅದು ಇತ್ಯರ್ಥವಾಗದೆ ರಾಜೀನಾಮೆ ಅಂಗೀಕರಿಸಲು ಆಗದು. ಇವರೆಲ್ಲ ಪûಾಂತರ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಅಷ್ಟಕ್ಕೂ ಅದು ಸಭಾಧ್ಯಕ್ಷರ ತೀರ್ಮಾನಕ್ಕೆ ಬಿಟ್ಟಿದ್ದು ಎಂದರು. ಉಮೇಶ್ ಜಾಧವ್ ಇನ್ನೂ ಅವಧಿ ಇರುವಾಗಲೇ ರಾಜೀನಾಮೆ ಕೊಟ್ಟಿದ್ದು ಏಕೆ ಎಂಬ ಪ್ರಶ್ನೆ ಜನರಲ್ಲಿ ಸಹಜವಾಗಿಯೇ ಉದ್ಭವಿಸುತ್ತದೆ. ಜೆಡಿಎಸ್‌ನವರು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸಿದರು. ಆದರೆ ನಾವೇನು ಆಪರೇಷನ್ ಮಾಡಿರಲಿಲ್ಲ, ಹಣ ನೀಡಿರಲಿಲ್ಲ. ಅಷ್ಟಕ್ಕೂ ಅದು ಗೌಪ್ಯ ಮತದಾನವಾಗಿತ್ತು. ಈಗ ಜಾಧವ ಬಿಜೆಪಿಯ ಕುತಂತ್ರ, ಆಪರೇಷನ್ ಕಮಲಕ್ಕೆ
ಬಲಿಯಾಗಿದ್ದಾ ರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.