ತಂಬಾಕು ಮುಕ್ತ ಮಂಗಳೂರಿಗಾಗಿ ಆರೋಗ್ಯ, ಪೊಲೀಸ್‌ ಇಲಾಖೆ ಪಣ


Team Udayavani, Mar 6, 2019, 4:34 AM IST

6-march-1.jpg

ಮಹಾನಗರ: ತಂಬಾಕು ನಿಯಂತ್ರಣ ಕಾಯ್ದೆಯನ್ನು ನಗರದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮತ್ತು ಪೊಲೀಸ್‌ ಇಲಾಖೆ ಮುಂದಾಗಿದೆ. ಅನಧಿಕೃತವಾಗಿ ತಂಬಾಕು ಮಾರಾಟ ಮಾಡುವ ಅಂಗಡಿಗಳ ಪರವಾನಿಗೆಯನ್ನು ರದ್ದುಗೊಳಿಸುವ ನಿಟ್ಟಿನಲ್ಲಿ ಇಲಾಖೆಯು ಕಾರ್ಯಾಚರಣೆಗೆ ಮುಂದಾಗಿದ್ದು, ಮೂರು ತಿಂಗಳುಗಳಲ್ಲಿ ಸುಮಾರು 70 ಸಾವಿರ ರೂ.ಗಳಷ್ಟು ದಂಡ ವಸೂಲಿ ಮಾಡಲಾಗಿದೆ.

ನಗರದಲ್ಲಿ ಹೆಚ್ಚಾಗಿ ತಂಬಾಕು ಬಳಕೆ ಮಾಡುವ ಪೆಟ್ಟಿ ಅಂಗಡಿ, ವೈನ್‌ ಶಾಪ್‌ ಮತ್ತಿತರ ಪ್ರದೇಶಗಳ ಮೇಲೆ ಇಲಾಖೆ ಹದ್ದಿನ ಕಣ್ಣು ಇಟ್ಟಿದ್ದು, ನಗರವನ್ನು ತಂಬಾಕು ಮುಕ್ತವಾಗಿಸುವ ಪಣ ತೊಟ್ಟಿದೆ. ಈ ನಿಟ್ಟಿನಲ್ಲಿ 3 ತಿಂಗಳಿನಲ್ಲಿ ಕೋಟ್ಪಾ ಕಾಯಿದೆ ಉಲ್ಲಂಘಿಸಿದ 434 ಪ್ರಕರಣಗಳನ್ನು ದಾಖಲಿಸಿ ದಂಡ ವಸೂಲು ಮಾಡಲಾಗಿದೆ.

ಎಲ್ಲ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ 100 ಗಜಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ತಂಬಾಕು ಸೇವನೆ ನಿಷೇಧ, ಶಾಲಾ-ಕಾಲೇಜುಗಳು ಇದನ್ನು ಸೂಚಿಸುವ ನಾಮಫಲಕಗಳನ್ನು ವಿದ್ಯಾಸಂಸ್ಥೆಗಳ ಆವರಣದ ಹೊರಗಡೆ ಅಳವಡಿಸುವುದು ಕಡ್ಡಾಯ. ಆದರೂ ಉಲ್ಲಂಘನೆ ಮಾಡುವ ಅನೇಕ ಅಂಗಡಿಗಳು ಸಹಿತ ಶಿಕ್ಷಣ ಸಂಸ್ಥೆಗಳ ವಿರುದ್ಧ ಈಗಾಗಲೇ ನೋಟಿಸ್‌ ಜಾರಿಗೊಳಿಸಲಾಗಿದೆ.

ನಿಯಮಗಳ ಪಾಲನೆ ಸೂಚನೆ
ಶಿಕ್ಷಣ ಸಂಸ್ಥೆಗಳ ಹೊರಗಡೆ ತಂಬಾಕು ನಿಷೇಧ ನಾಮಫಲಕ ಅಳವಡಿಸದಿದ್ದರೆ ಆಯಾ ಶಾಲಾ-ಕಾಲೇಜಿನ ಪ್ರಾಂಶುಪಾಲರಿಗೆ 200 ರೂಪಾಯಿ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಮುಂದಿನ ದಿನಗಳಲ್ಲಿ ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಶಿಕ್ಷಣ ಸಂಸ್ಥೆಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ತಂಬಾಕು ಸೇವನೆ ನಿಯಂತ್ರಿಸುವ ನಿಟ್ಟಿನಲ್ಲಿ ಆರೋಗ್ಯ, ಪೊಲೀಸ್‌ ಇಲಾಖೆ ವತಿಯಿಂದ ಈಗಾಗಲೇ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಹಮ್ಮಿಕೊಳ್ಳಲಾಗುತ್ತಿದೆ. ನಗರದ ಅನೇಕ ಶಾಲಾ-ಕಾಲೇಜುಗಳಿಗೆ ತೆರಳಿ ತಂಬಾಕು ಸೇವನೆಗಳಿಂದಾಗುವ ದುಷ್ಪರಿಣಾಮಗಳು, ಕಾನೂನು ಕ್ರಮಗಳ ಬಗ್ಗೆ ಯುವಕರಿಗೆ ಅರಿವು ಮೂಡಿಸಲಾಗುತ್ತಿದೆ.

ಶಿಕ್ಷೆ ಪ್ರಮಾಣ ಹೇಗಿದೆ?
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ಎಚ್ಚರಿಕೆಯ ಫಲಕ ಇಲ್ಲದಿರುವುದು ಅಲ್ಲದೆ, ಸಾರ್ವಜನಿಕ ಸ್ಥಳದಲ್ಲಿ ಲೈಟರ್‌, ಬೆಂಕಿಕಡ್ಡಿ ಪೊಟ್ಟಣ ಇಟ್ಟರೆ 200 ರೂ.ವರೆಗೆ ದಂಡ ವಿಧಿಸಲು ಅವಕಾಶವಿದೆ.

ತಂಬಾಕು ಬ್ರಾಂಡ್‌ ಹೆಸರಿನೊಂದಿಗೆ ಜಾಹೀರಾತು ಫಲಕ, ಯಾವುದೇ ರೂಪದಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಮೊದಲ ಅಪರಾಧಕ್ಕೆ 1,000ರೂ. ದಂಡ ಅಥವಾ 2 ವರ್ಷ ಜೈಲು ಶಿಕ್ಷೆ ಅಥವಾ ಈ ಎರಡೂ ಶಿಕ್ಷೆ ವಿಧಿಸಬಹುದು. ಪದೇ ಪದೇ ಅಪರಾಧ ಎಸಗಿದರೆ 5,000 ರೂ. ದಂಡ ಅಥವಾ 5 ವರ್ಷ ಜೈಲು ಶಿಕ್ಷೆ ನೀಡಬಹುದು. 18 ವರ್ಷ ಒಳಗಿನವರಿಂದ/ರವರಿಗೆ ತಂಬಾಕು ಉತ್ಪನ್ನಗಳ ಮಾರಾಟ, ಚಿಲ್ಲರೆ ಅಂಗಡಿಗಳಲ್ಲಿ ಸೂಚನಾ ಫಲಕ ಹಾಕದಿರುವುದು, ತಂಬಾಕು ಉತ್ಪನ್ನಗಳ ಪ್ರದರ್ಶನಕ್ಕೆ 200 ರೂ. ದಂಡ ವಿಧಿಸಬಹುದು. ತಂಬಾಕು ಉತ್ಪನ್ನ ಪ್ಯಾಕ್‌ನಲ್ಲಿ ಆರೋಗ್ಯ ಎಚ್ಚರಿಕೆಯ ಚಿತ್ರಗಳು ಇರದಿರುವುದು, ಎಚ್ಚರಿಕೆ ಚಿತ್ರಗಳು ಶೇ.85ಕ್ಕಿಂತ ಕಡಿಮೆ ಅಳತೆಯಲ್ಲಿರುವುದು, ಹಳೆಯ ಎಚ್ಚರಿಕೆ ಚಿತ್ರ ಹಾಕಿದ್ದರೆ ತಯಾರಕರಿಗೆ ಮೊದಲನೇ ಅಪರಾಧಕ್ಕೆ 2 ವರ್ಷ ಶಿಕ್ಷೆ ಅಥವಾ 5,000 ರೂ. ದಂಡ, ಎರಡನೇ ಅಪರಾಧಕ್ಕೆ 5 ವರ್ಷ ಶಿಕ್ಷೆ ಅಥವಾ 5.000ರೂ. ದಂಡ ವಿಧಿಸಬಹುದು. ಚಿಲ್ಲರೆ ವ್ಯಾಪಾರಿಗಳಿಗೆ ಮೊದಲ ಅಪರಾಧಕ್ಕೆ 1 ವರ್ಷ ಶಿಕ್ಷೆ ಅಥವಾ 1,000 ರೂ. ದಂಡ, ಎರಡನೇ ಅಪರಾಧಕ್ಕೆ 2 ವರ್ಷ ಶಿಕ್ಷೆ ಅಥವಾ 3,000ರೂ. ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.

22 ಮಂದಿ ಕ್ಯಾನ್ಸರ್‌ ಪೀಡಿತರು
ತಂಬಾಕು ಸೇವನೆಯಿಂದ ಬರುವ ನಾಲಿಗೆ ಕ್ಯಾನ್ಸರ್‌, ಅನ್ನನಾಳ, ಶ್ವಾಸಕೋಶ, ಧ್ವನಿಪೆಟ್ಟಿಗೆ ಕ್ಯಾನ್ಸರ್‌ ಗೆ ಪೀಡಿತರಾದ 22 ಮಂದಿ ಕ್ಯಾನ್ಸರ್‌ ರೋಗಿಗಳು ಸದ್ಯ ವೆನ್ಲಾಕ್‌ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೆನ್ಲಾಕ್‌ ಆಸ್ಪತ್ರೆಯ ವೈದ್ಯರೊಬ್ಬರು ‘ಸುದಿನ’ಕ್ಕೆ ತಿಳಿಸಿದ್ದಾರೆ.

ಕಟ್ಟುನಿಟ್ಟಿನ ಕ್ರಮ
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ, ಶಿಕ್ಷಣ ಸಂಸ್ಥೆಗಳ 100 ಗಜ ಅಂತರದಲ್ಲಿ ತಂಬಾಕು ಮಾರಾಟ ಮಾಡಿದರೆ ಅವರ ವಿರುದ್ಧ ಕಠಿನ ಕ್ರಮ ಕೈಗೊಳ್ಳುತ್ತೇವೆ. ರಾತ್ರಿ ವೇಳೆ ಇಂತಹ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದ್ದು, ಈ ನಿಟ್ಟಿನಲ್ಲಿ ಬೀಟ್‌ ಪೊಲೀಸರು ಕೂಡ ನಿಗಾ ಇಟ್ಟಿದ್ದಾರೆ.
– ಹನುಮಂತರಾಯ,
ಡಿಸಿಪಿ ಕಾನೂನು ಮತ್ತು ಸುವ್ಯವಸ್ಥೆ

ಪರವಾನಗಿ ರದ್ದು
ಅನಧಿಕೃತವಾಗಿ ತಂಬಾಕು ಮಾರಾಟ ಮಾಡುವ ಅಂಗಡಿಗಳ ವಿರುದ್ಧ ಕಠಿನ ಕ್ರಮ ಕೈಗೊಳ್ಳುತ್ತೇವೆ. ನೋಟಿಸ್‌ ನೀಡಿಯೂ ನಿಯಮ ಉಲ್ಲಂಘಿಸಿದ ಅಂಗಡಿಗಳ ಪರವಾನಿಗೆ ರದ್ದುಗೊಳಿಸಲಾಗುವುದು.
– ಡಾ| ಪ್ರೀತಾ ಸಿ. ಶೇಖರ್‌,
ತಂಬಾಕು ನಿಯಂತ್ರಣ ಕೋಶ,
ಜಿಲ್ಲಾ ಸಮನ್ವಯಕರು

ರೋಗಿಗಳ ಸಂಖ್ಯೆ ಹೆಚ್ಚಳ 
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕ್ಯಾನ್ಸರ್‌ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ವೆನ್ಲಾಕ್‌ ಆಸ್ಪತ್ರೆಯಲ್ಲಿ ಸದ್ಯ 22 ಮಂದಿ ಕ್ಯಾನ್ಸರ್‌ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.
– ಡಾ| ರಾಜೇಶ್ವರಿ ದೇವಿ,
ವೆನ್ಲಾಕ್‌ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ

 ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

3

Kannada: ವೀರ ಕನ್ನಡಿಗ: ತನು ಕನ್ನಡ, ಮನ(ನೆ) ಕನ್ನಡ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

8-madikeri

Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.